Homeಕರ್ನಾಟಕಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ರೇಣುಕಾಚಾರ್ಯ; ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ

ಬಿಜೆಪಿ ಸೋಲಿನ ಕಾರಣ ಬಿಚ್ಚಿಟ್ಟ ರೇಣುಕಾಚಾರ್ಯ; ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸೋಲಲು ಕಾರಣವಾಯಿತು ಎಂದು  ಸೋಲಿಗೆ ಕಾರಣ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

”ಬಿಜೆಪಿಗೆ ಸಾಕಷ್ಟು ಹಾನಿಯಾದ ಬಳಿಕ ಇದೀಗ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದೆ ತಂದಿದ್ದಾರೆ” ಎಂದು ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

”ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಯಡಿಯೂರಪ್ಪ ನೋಡದ ಹಳ್ಳಿಗಳು ಇಲ್ಲ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ದೇಶಕ್ಕೆ ನರೇಂದ್ರ ಮೋದಿ ಅವರಂತೆ ರಾಜ್ಯಕ್ಕೆ ಯಡಿಯೂರಪ್ಪ ಅವಶ್ಯಕ. ಹೋರಾಟಕ್ಕೆ, ಚುನಾವಣಾ ಪ್ರವಾಸಕ್ಕೆ, ಮತಗಳಿಗೆ ಯಡಿಯೂರಪ್ಪ ಬೇಕಾಗಿದೆ. ಯಡಿಯೂರಪ್ಪ ಕಡೆಗಣಿಸಿದ್ದೆ ಪಕ್ಷದ ಸೋಲಿಗೆ ಕಾರಣವಾಗಿದೆ” ಎಂದು ಭಾನುವಾರ ಹೇಳಿದ್ದಾರೆ.

”ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲಲು ಆಗದೇ ಇರುವವರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇವರ ಮುಖ ನೋಡಿ ಪಕ್ಷ ಹೀನಾಯ ಸ್ಥಿತಿಗೆ ತಲುಪಿದೆ” ಎಂದು ವ್ಯಂಗ್ಯವಾಡಿದರು.

”ನಾನು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಆಕಾಂಕ್ಷಿ, ಟಿಕೆಟ್ ಸಿಗುತ್ತದೋ ಇಲ್ಲವೋ ಕಾದು ನೋಡುತ್ತೇನೆ. ಸಿಗದೇ ಇದ್ದರೆ ಕ್ಷೇತ್ರದ ಮುಖಂಡರು ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ” ಎಂದರು.

ಮಾಜಿ ಶಾಸಕ ಟಿ. ಗುರುಸಿದ್ದನಗೌಡ ಉಚ್ಚಾಟನೆ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿದ ರೇಣುಕಾಚಾರ್ಯ ಮಾತುಕತೆ ನಡೆಸಿದರು. ”ನೋಟಿಸ್ ನೀಡದೇ ಉಚ್ಚಾಟನೆ ಮಾಡಿದ್ದು ಖಂಡನೀಯ, ಚುನಾವಣೆಯ ಸಂದರ್ಭ ಕ್ಷೇತ್ರದಲ್ಲಿ ಸಂಚರಿಸಿ ಪಕ್ಷ ಕಟ್ಟಿದವರು. ಚುನಾವಣೆಯಲ್ಲಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಿದರೆ ಆರಂಭದಲ್ಲಿ ನೋಟಿಸ್ ನೀಡಿ, ವಿವರಣೆ ಪಡೆಯಬೇಕು. ಆದರೆ ಯಾವುದನ್ನೂ ಮಾಡಿಲ್ಲ” ಎಂದು ಆರೋಪಿಸಿದರು.

”ಗುರುಸಿದ್ದನಗೌಡ ಅವರ ಪುತ್ರ ಟಿ.ಜಿ.ರವಿಕುಮಾರ್ ಲೋಕಸಭಾ ಚುನಾವಣೆ ಟಿಕೆಟ್ ಅಕಾಂಕ್ಷಿ. ಆದ್ದರಿಂದ ಬೆಳೆಯಬಾರದು ಎಂಬ ಉದ್ದೇಶದಿಂದ ಉಚ್ಚಾಟನೆ ಮಾಡಿರುವುದು ಖಂಡನೀಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...