Homeಕರ್ನಾಟಕ‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

‘ಯಡಿಯೂರಪ್ಪ ಕಿಂಗ್ ಮೇಕರ್‌’ ಎಂದ ರೇಣುಕಾಚಾರ್ಯ!

- Advertisement -
- Advertisement -

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿಯ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್‌ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂಪಿ ರೇಣುಕಾಚಾರ್ಯ ಅವರು ಟ್ವಿಟರ್‌ನಲ್ಲಿ “ಕಿಂಗ್ ಮೇಕರ್‌ ಬಿಎಸ್‌ ಯಡಿಯೂರಪ್ಪ” ಎಂದು ಬರೆದಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಏರಿದ ದಿನದಿಂದಲೂ ಪಕ್ಷದೊಳಗೆ ಅವರ ಬಗ್ಗೆ ಅಸಮಾಧಾನಗಳು ಸ್ಪೋಟಗೊಳ್ಳುತ್ತಲೆ ಬಂದಿದೆ. ಹಲವಾರು ಬಿಜೆಪಿ ಶಾಸಕರು ಬಹಿರಂಗವಾಗಿಯೆ ಯಡಿಯೂರಪ್ಪ ಅವರ ವಿರುದ್ದ ಆಕ್ರೋಶವನ್ನೂ ವ್ಯಕ್ತಪಡಿಸಿದ್ದರು. ಹಲವು ಬಾರಿ ಯಡಿಯೂರಪ್ಪ ರಾಜೀನಾಮೆ ಕೊಟ್ಟೇ ಬಿಟ್ಟರು ಎನ್ನುವಷ್ಟು ಮಟ್ಟಕ್ಕೆ ಕಚ್ಛಾಟಗಳು ನಡೆಯುತ್ತಿದ್ದವು.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಅದಲ್ಲದೆ ಸೋಮವಾರ ರಾಜೀನಾಮೆ ಘೋಷಿಸಿದ ಭಾಷಣದಲ್ಲೂ ಯಡಿಯೂರಪ್ಪ ಅವರು ಕೇಂದ್ರದ ಬಿಜೆಪಿ ನಾಯಕತ್ವ ತನಗೆ ಮಂತ್ರಿ ಮಂಡಲ ರಚನೆ ಮಾಡದಂತೆ ಎರಡು ತಿಂಗಳು ಸತಾಯಿಸಿದ್ದರ ಬಗ್ಗೆ ಹೇಳಿದ್ದರು. ಸೋಮವಾರದಂದು ರಾಜ್ಯದ ಪ್ರಬಲ ಸಮುದಾಯ ಲಿಂಗಾಯತದ ನಾಯರಾದ ಯಡಿಯೂರಪ್ಪ ಅವರ ರಾಜಕೀಯ ಪರ್ವ ಮುಗೀತು ಎಂದು ಲೆಕ್ಕಾಚಾರಗಳನ್ನು ಮಾಡಲಾಗಿತ್ತು.

ಯಡಿಯೂರಪ್ಪ ಅವರ ರಾಜೀನಾಮೆಗೆ ಮುಂಚೆಯೆ ಬಿಜೆಪಿಯ ಯಡಿಯೂರಪ್ಪ ಅವರ ವಿರೋಧಿ ಬಣದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಗಳು ಹರಡಿತ್ತು. ಪ್ರಮುಖವಾಗಿ ಬಿಎಲ್ ಸಂತೋಷ್ ಅವರ ಹೆಸರು ಮುನ್ನಲೆಗೆ ಬಂದಿತ್ತು. ಅಲ್ಲದೆ ನಳಿನ್ ಕುಮಾರ್‌ ಕಟೀಲ್ ಅವರದ್ದು ಎನ್ನಲಾದ ಆಡಿಯೋದಲ್ಲೂ ದೆಹಲಿಯ ಕಡೆಯವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. ನಳಿನ್ ಕುಮಾರ್‌ ಕಟೀಲ್ ಬಿಎಸ್‌ವೈ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಈ ಹೇಳಿಕೆಗೆ ಬಲ ಬಂದಿತ್ತು.

ಅದಾಗ್ಯೂ, ಎಲ್ಲಾ ಲೆಕ್ಕಾಚಾಗಳನ್ನು ತಲೆಕೆಳಗಾಗಿಸಿ ಮಂಗಳವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸ್ವತಃ ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ. ಅಲ್ಲದೆ ಬೊಮ್ಮಾಯಿ ಯಡಿಯೂರಪ್ಪ ಅವರ ಆಪ್ತನೇ ಆಗಿದ್ದು, ಜೊತೆಗೆ ಲಿಂಗಾಯತ ಸಮುದಾಯಕ್ಕೂ ಸೇರಿದವರಾಗಿದ್ದಾರೆ.

ಇದನ್ನೂ ಓದಿ: ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

ಇಷ್ಟೇ ಅಲ್ಲದೆ ಹೊಸದಾಗಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿರುವ ಆರ್‌. ಅಶೋಕ್ ಮತ್ತು ಗೋವಿಂದ ಕಾರಜೋಳ ಕೂಡಾ ಯಡಿಯೂರಪ್ಪ ಬಣದವರೇ ಆಗಿದ್ದಾರೆ. ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿರುವ ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಅವರು ಯಡಿಯೂರಪ್ಪ ಅವರ ಬಣದವರು ಅಲ್ಲವಾಗಿದ್ದರೂ, ಯಡಿಯೂರಪ್ಪ ಅವರ ವಿರೋದಿ ಕೂಡಾ ಅಲ್ಲ. ಹೀಗಾಗಿ ಹೊಸ ಮುಖ್ಯಮಂತ್ರಿಯ ರಾಜಕೀಯದಾಟದಲ್ಲಿ ಯಡಿಯೂರಪ್ಪ ಅವರೇ ಮುಖ್ಯಪಾತ್ರ ವಹಿಸಿದ್ದಾರೆ ಎನ್ನಬಹುದು. ಈ ಹೇಳಿಕೆಗೆ ರೇಣುಕಾಚಾರ್ಯ ಅವರ ಟ್ವೀಟ್‌ ಬಲ ನೀಡುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿ; ಗಣ್ಯರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...