ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಇಂದು (ಅ.14) ವಜಾಗೊಳಿಸಿದೆ.
ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಇಂದು ನ್ಯಾಯಾಧೀಶ ಜೈಶಂಕರ್ ಅವರು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಬಳ್ಳಾರಿ ಕೇಂದ್ರ ಕಾರಾಗೃದಲ್ಲಿದ್ದಾರೆ. ದರ್ಶನ್ ಪರವಾಗಿ ಸೆ.21ರಂದು ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ದರ್ಶನ್ ಪರವಾಗಿ ವಕೀಲ ನಾಗೇಶ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ಎಸ್‌ಐಟಿ ಈಗಾಗಲೇ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಇದನ್ನೂ ಓದಿ : ರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್


