Homeಕರ್ನಾಟಕರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರಿಗೆ ಜಾಮೀನು; ದರ್ಶನ್ ಅರ್ಜಿ ಸೆ.27ಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರಿಗೆ ಜಾಮೀನು; ದರ್ಶನ್ ಅರ್ಜಿ ಸೆ.27ಕ್ಕೆ ಮುಂದೂಡಿಕೆ

- Advertisement -
- Advertisement -

ನಟ ದರ್ಶನ್ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಕೇಶವಮೂರ್ತಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರಕರಣದ ಇತರ ಇಬ್ಬರು ಆರೋಪಿಗಳಾದ ನಿಖಿಲ್ ನಾಯ್ಕ್ ಮತ್ತು ಕಾರ್ತಿಕ್ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಕೂಡಾ ಜಾಮೀನು ಮಂಜೂರು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮತ್ತೊಂದೆಡೆ, ಬೆಂಗಳೂರಿನ 57 ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮತ್ತು ಅವರ ಸ್ನೇಹಿತೆ ಮತ್ತು ನಂಬರ್ 1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 25 ಕ್ಕೆ ಮುಂದೂಡಿದೆ. ದರ್ಶನ್ ಸೆಪ್ಟೆಂಬರ್ 21ರ ಶನಿವಾರ ಜಾಮೀನು ಅರ್ಜಿ ಸಲ್ಲಿಸಿದ್ದರು. ರೇಣುಕಾಸ್ವಾಮಿ ಹತ್ಯೆSEO title preview:

ನಟ ದರ್ಶನ್ ತೂಗುದೀಪ ಮತ್ತು ಅವರ ಸ್ನೇಹಿತೆ ಪವಿತ್ರ ಸೇರಿದಂತೆ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ರಾಜ್ಯದ ವಿವಿಧ ಜೈಲುಗಳಲ್ಲಿದ್ದಾರೆ. ಸೆಪ್ಟೆಂಬರ್ 4 ರಂದು ಪೊಲೀಸರು 3,991 ಪುಟಗಳ ಪ್ರಾಥಮಿಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂಓದಿ: ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ಜಾಮೀನು ಸಿಕ್ಕ ಆರೋಪಿಗಳಾದ ಕಾರ್ತಿಕ್ (ಆರೋಪಿ ಸಂಖ್ಯೆ – ಎ 15), ಕೇಶವಮೂರ್ತಿ (ಎ 16) ಮತ್ತು ನಿಖಿಲ್ ನಾಯ್ಕ್ (ಅ 17) ತುಮಕೂರು ಜೈಲಿನಲ್ಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ

ನಟ ದರ್ಶನ್ ಅಭಿಮಾನಿಯಾದ 33 ವರ್ಷದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದನು. ಇದು ದರ್ಶನ್ ಅವರನ್ನು ಕೆರಳಿಸಿದ್ದು, ನಂತರ ರೇಣುಕಾಸ್ವಾಮಿಯ ಕೊಲೆ ಮಾಡಲಾಯಿತು ಎಂದು ಹೇಳಲಾಗಿದೆ. ಜೂನ್ 9 ರಂದು ಬೆಂಗಳೂರಿನ ಸುಮನಹಳ್ಳಿಯ ಅಪಾರ್ಟ್‌ಮೆಂಟ್ ಪಕ್ಕದ ಮಳೆನೀರು ಚರಂಡಿ ಬಳಿ ಅವರ ಶವ ಪತ್ತೆಯಾಗಿತ್ತು.

ದರ್ಶನ್ ಅಭಿಮಾನಿಗಳ ಚಿತ್ರದುರ್ಗದ ಸಂಘದ ಭಾಗವಾಗಿರುವ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ ಎಂಬಾತ ದರ್ಶನ್‌ ಭೇಟಿಯಾಗಲು ರೇಣುಕಾಸ್ವಾಮಿಯನ್ನು ಬೆಂಗಳೂರಿನ ಆರ್ ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಅದೇ ಶೆಡ್‌ನಲ್ಲಿಯೇ ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

ನಂಬರ್ ಒನ್ ಆರೋಪಿ ಪವಿತ್ರಾ ಅವರೇ ರೇಣುಕಾಸ್ವಾಮಿ ಹತ್ಯೆಗೆ ಪ್ರಮುಖ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ. ಇತರ ಆರೋಪಿಗಳಿಗೆ ಪ್ರಚೋದನೆ ನೀಡಿ, ಅವರೊಂದಿಗೆ ಸಂಚು ರೂಪಿಸಿ ಅಪರಾಧದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಅಂಗನವಾಡಿ ನೌಕರರೆಂದರೆ ತಾತ್ಸಾರವೇಕೆ? ನಮ್ಮನ್ನು ಖಾಯಂ ಮಾಡಿ. ನಮ್ಮ ಅಳಲನ್ನು ಕೇಳಿ ಮುಖ್ಯಮಂತ್ರಿಗಳೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...