Homeಕರ್ನಾಟಕರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ (ಆ.14) ರದ್ದುಪಡಿಸಿದೆ.

ದರ್ಶನ್ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024ರಂದು ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಸುಪ್ರೀಂ ಕೋರ್ಟ್ ಪೀಠ, ಜುಲೈ 24, 2025ರಂದು ತೀರ್ಪು ಕಾಯ್ದಿರಿಸಿತ್ತು. ಈ ತೀರ್ಪನ್ನು ಗುರುವಾರ ಪ್ರಕಟಿಸಿದ್ದು, ದರ್ಶನ್, ಪವಿತ್ರಾ ಗೌಡ, ನಾಗರಾಜು ಆರ್, ಅನು ಕುಮಾರ್, ಲಕ್ಷ್ಮಣ್ ಎಂ. ಜಗದೀಶ್ ಮತ್ತು ಪ್ರದೂಶ್ ಅವರ ಜಾಮೀನು ರದ್ದುಪಡಿಸಿ ಆದೇಶಿಸಿದೆ.

ತೀರ್ಪು ಕಾಯ್ದಿರಿಸಿದ ಸಂದರ್ಭದಲ್ಲಿ, ದರ್ಶನ್ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂಬ ಇಬ್ಬರು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದೃಢೀಕರಿಸಲು ಯಾವುದೇ ಪುರಾವೆಗಳಿವೆಯೇ? ಎಂದು ನ್ಯಾಯ ಪೀಠ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ಇದೇ ವೇಳೆ ದರ್ಶನ್ ಅವರಿಗೆ ಜಾಮೀನು ನೀಡುವಲ್ಲಿ ಹೈಕೋರ್ಟ್‌ನ ವಿವೇಚನೆಯ ಬಳಕೆಯ ಬಗ್ಗೆ ಪೀಠವು ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿತ್ತು.

ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ನೀಡುವಲ್ಲಿ ತನ್ನ ವಿವೇಚನೆಯನ್ನು ಬಳಸಿದ ರೀತಿ ತನಗೆ ಮನವರಿಕೆಯಾಗಿಲ್ಲ ಎಂದು ನ್ಯಾಯಾಧೀಶರು ಮೌಖಿಕವಾಗಿ ಹೇಳಿದ್ದರು. ಹೈಕೋರ್ಟ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಏಕೆ ಹಸ್ತಕ್ಷೇಪ ಮಾಡಬಾರದು? ಎಂಬುದಕ್ಕೆ ಉತ್ತಮ ಕಾರಣಗಳನ್ನು ನೀಡುವಂತೆ ದರ್ಶನ್ ಪರ ವಕೀಲರನ್ನು ಮೌಖಿಕವಾಗಿ ಪ್ರಶ್ನಿಸಿದ್ದರು.

ಹೈಕೋರ್ಟ್ ಆರೋಪಿಗಳ ಪರವಾಗಿ, ಅವರನ್ನು ಖುಲಾಸೆಗೊಳಿಸುವಂತ ಆದೇಶ ನೀಡಿದೆ ಎಂದು ನ್ಯಾಯಮೂರ್ತಿ ಜೆ.ಬಿ ಪಾರ್ದಿವಾಲಾ ಅವರು ಮೌಖಿವಾಗಿ ಹೇಳಿದ್ದರು.

ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ, ಅನು ಕುಮಾರ್, ಲಕ್ಷ್ಮಣ್ ಎಂ, ವಿ ವಿನಯ್, ಜಗದೀಶ್, ಪ್ರದೂಷ್ ಎಸ್ ರಾವ್ ಮತ್ತು ನಾಗರಾಜು ಆರ್ ಜಾಮೀನು ಕೋರಿ ಆರಂಭದಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು. ಸೆಷನ್ಸ್ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದಾಗ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...