Homeಕರ್ನಾಟಕರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್‌ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಶನ್ ಪರ ಹಿರಿಯ ವಕೀಲ ಅನಿಲ್ ನಿಶಾನಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.

ಪ್ರಾಸಿಕ್ಯೂಷನ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಬೆಂಗಳೂರು ಪೊಲೀಸರು ಹಿರಿಯ ವಕೀಲ ಸಿದ್ದಾರ್ಥ್ ಲೂಥಾ ಅವರನ್ನು ನೇಮಿಸಿದ್ದಾರೆ. ಅನಿಲ್ ಸಿ. ನಿಶಾನಿ ಹಾಗೂ ಹೈಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಡಿಸೆಂಬರ್ 13ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನಗರ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದಿದ್ದರು.

ಕಳೆದ ವಾರ ಗೃಹ ಇಲಾಖೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿತ್ತು. ದಾಖಲೆ ಹಾಗೂ ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಅನುವಾದ ಮಾಡುವ ಕಾರ್ಯ ವಿಳಂಬವಾದ ಕಾರಣ ಮೇಲ್ಮನವಿ ಸಲ್ಲಿಸುವ ಕಾರ್ಯ ವಿಳಂಬವಾಗಿದೆ ಎಂದು ವರದಿಗಳು ಹೇಳಿವೆ .

ಜೂನ್ 8, 2024ರಂದು ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಅವರ ಹತ್ಯೆ ನಡೆದಿತ್ತು. ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಚರಂಡಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

ಇದನ್ನೂ ಓದಿ : ಬೆಂಗಳೂರು ಐಐಎಂ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...