Homeಕರ್ನಾಟಕಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

- Advertisement -
- Advertisement -

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ‌, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಇದೀಗ ಅವರ ಮೇಲೆ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿರುವ ಸರಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಸರಕಾರದ ಸಲಹಾ ಮಂಡಳಿಯು ”ಆತನನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ”ʼ ಎಂದು ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪುನೀತ್ ಕೆರೆಹಳ್ಳಿ ವಿರುದ್ಧ ಬೇಗೂರು ಪೊಲೀಸ್ ಠಾಣೆಯಲ್ಲಿ ಎರಡು, ಡಿಜೆ ಹಳ್ಳಿ, ಕಗ್ಗಲೀಪುರ, ಹಂಪಿ, ಮಳವಳ್ಳಿ, ಹಲಸೂರು, ಚಾಮರಾಜಪೇಟೆ, ಎಲೆಕ್ಟ್ರಾನ್ ಸಿಟಿ, ಸಾತನೂರು ಪೊಲೀಸ್ ಠಾಣೆಗಳಲ್ಲಿ ಒಂದೊಂದು ಪ್ರಕರಣ ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ರಾಮನಗರ ಜಿಲ್ಲೆಯ ಸಾತನೂರು ಬಳಿ ನಡೆದಿದ್ದ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಹೀಗೆ ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಸರ್ಕಾರದ ಆದೇಶ:

ಗೂಂಡಾ ಕಾಯ್ದೆಯಡಿ‌ ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿ, ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ.

ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಕಾಂಗ್ರೆಸ್ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಡಿವೈಎಫ್‌ ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ”ಪುನೀತ್ ಕೆರೇಹಳ್ಳಿ ಬಿಡುಗಡೆ ಪ್ರಕರಣ ರಾಜ್ಯ ಕಾಂಗ್ರೆಸ್ ಸರಕಾರದ ಜಾತ್ಯಾತೀತತೆ ನಿಲುವಿನ ಮೇಲಿನ ಬದ್ದತೆಯನ್ನು ಪ್ರಶ್ನಾರ್ಹಗೊಳಿಸಿದೆ. ಸರಕಾರದ, ಮುಖ್ಯಮಂತ್ರಿಗಳ ಸಲಹಾ ಮಂಡಳಿ, ಸರಕಾರದ ಪ್ರಧಾನ ಅಧಿಕಾರಿಗಳು ಕೋಮುವಾದಿಗಳ ಹಿಡಿತದಲ್ಲಿ ಇದ್ದಂತಿದೆ. ಇದ್ರಿಸ್ ಪಾಷಾ, ಫಾಝಿಲ್ ಕೊಲೆ ಪ್ರಕರಣಗಳ ಮುಂದುವರಿದ ತನಿಖೆ ನಡೆಸುವ ಬದಲಿಗೆ ಕೋಮುವಾದಿ ಅಪರಾಧಿಗಳಿಗೆ ಜಾಮೀನು ಕೊಡಿಸಲು ಸರಕಾರ ಹೆಚ್ಚು ಆಸಕ್ತವಾಗಿರುವಂತಿದೆ. ಚೈತ್ರ ಕುಂದಾಪುರ ಪ್ರಕರಣವನ್ನೂ ಆಳ ತನಿಖೆಗೆ ಸರಕಾರ ಮನಸ್ಸು ಮಾಡುವುದು ಅನುಮಾನಾಸ್ಪದ” ಎಂದು ಬರೆದುಕೊಂಡಿದ್ದಾರೆ.

ಪುನೀತ್ ಕೆರೆಹಳ್ಳಿ ಬಿಡುಗಡೆ ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸರಕಾರದ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವೇಕ್ತಪಡಿಸಿದ್ದಾರೆ.

ಹಲವಾರು ಸಮಾಜ ಘಾತುಕ ಕೊಲೆ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ ಅಲ್ಪಸಂಖ್ಯಾತರಿಗೆ ಬಹರಂಗ ಸವಾಲು ನೀಡಿದಂತಹಾ ಓರ್ವ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಎಂಟ್ಹತ್ತು ಪ್ರಕರಣಗಳಿದ್ದು ಇತ್ತೀಚೆಗೆ ಮಂಡ್ಯದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಇದ್ದು ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿರುವುದು ಅನ್ಯಾಯದ ನಡೆಯಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ ಅಲ್ಪ ಸಂಖ್ಯಾತರಿಗೆ ರಕ್ಷಣೆ ಮತ್ತು ಕೋಮುವಾದಿಗಳಿಗೆ ಸಮಾಜದಲ್ಲಿ ದ್ವೇಶ ಹರಡುವಂತಹವರಿಗೆ ಕಠಿಣ ಶಿಕ್ಷೆ ಕೊಡುವಂತಹಾ ಭಾಷಣಗಳನ್ನು ಪತ್ರಿಕಾ ಹೇಳಿಕೆಗಳನ್ನು ನಿರಂತರ ಹೇಳುತ್ತಾ ಬರುತ್ತಿರುವಾಗ ಸರಕಾರದ ಈ ನಡೆ ಅದಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ ಕಾಂಗ್ರೆಸ್ ಸರಕಾರದ ಬಾಷಣ ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ಬರಬೇಕಾಗಿದೆ. ಸರಕಾರದ ಈ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್-ಯುಜಿ ಪರಿಷ್ಕೃತ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ, ಹಳೆಯ ಲಿಂಕ್ ಅನ್ನು ಹಂಚಿಕೊಳ್ಳಲಾಗುತ್ತಿದೆ: ಕೇಂದ್ರ

0
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯು ಇಂದು ಪರಿಷ್ಕೃತ ನೀಟ್ ಯುಜಿ 2024 ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ ಎಂಬ ಊಹಾಪೋಹದ ನಂತರ, ಆರಂಭದಲ್ಲಿ ನೀಡಲಾದ ಪರಿಹಾರದ ಅಂಕಗಳನ್ನು ಹಿಂತೆಗೆದುಕೊಳ್ಳುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ,...