6 ವರ್ಷದ ಸೋದರ ಸೊಸೆ ಮೇಲೆ ಪದೇ ಪದೇ ಅತ್ಯಾಚಾರ - ಆರೋಪಿ ಬಂಧನ | Naanu gauri

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ ನಗರ ಪಟ್ಟಣದ ವ್ಯಕ್ತಿಯೊಬ್ಬ ತನ್ನ ಆರು ವರ್ಷದ ಸೋದರ ಸೊಸೆ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

42 ವರ್ಷದ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

“ಮಗುವಿನ ಕುಟುಂಬವಿರುವ ಮನೆಯ ಹತ್ತಿರವೇ ಆರೋಪಿ ವಾಸವಾಗಿದ್ದನು. ಮಗುವನ್ನು ಆಟವಾಡಿಸುವೆ ಎಂದು ಹೇಳಿ ತನ್ನ ಮನೆಗೆ ಮಗುವನ್ನು ಕರೆದುಕೊಂಡು ಹೋಗುತ್ತಿದ್ದನು. ಆದರೆ, ಆತ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದನು” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

“ಒಂದೆರಡು ದಿನಗಳ ಹಿಂದೆ, ಆರೋಪಿಯು ಮಗುವಿನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದನ್ನು ಮಗುವಿನ ಅಣ್ಣ ಗಮನಿಸಿದ್ದು, ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾರೆ. ನಂತರ ಅವರು ಪೋಲಿಸರನ್ನು ಸಂಪರ್ಕಿಸಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಮಗುವನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಡಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರ ನಂತರ, ಆರೋಪಿಯನ್ನು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಲಾಗಿದೆ.

ಆರೋಪಿಯನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

LEAVE A REPLY

Please enter your comment!
Please enter your name here