Homeಕರೋನಾ ತಲ್ಲಣಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

ಕರ್ನಾಟಕದ ಕೊರೊನಾ ಸಾವುಗಳು: ರಕ್ತದೊತ್ತಡ ಮತ್ತು ಮಧುಮೇಹಿ ರೋಗಿಗಳೆ ಹೆಚ್ಚೆಂದ ವರದಿ!

"ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ"

- Advertisement -
- Advertisement -

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಕಾರಣದಿಂದ ಮೃತಪಟ್ಟವರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನವೆಂಬರ್ 10 ರವರೆಗೆ ಕರ್ನಾಟಕದಲ್ಲಿ ದಾಖಲಾದ 11,430 ಕೋವಿಡ್ ಸಾವುಗಳಲ್ಲಿ 5,572 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 4,167 ಜನರಿಗೆ ಮಧುಮೇಹವಿರುವುದು ವರದಿಯಲ್ಲಿ ತಿಳಿದುಬಂದಿದೆ.

ಈ ರೀತಿಯ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಈಗಾಗಲೇ ಕೊರೊನಾ, ನ್ಯುಮೋನಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳಿಂದ ಉಂಟಾಗಿರುವ ಭೀತಿಯನ್ನು ಹೆಚ್ಚಿಸುತ್ತಿವೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ, ಮೃತಪಟ್ಟ 20 ಕೊರೊನಾ ರೋಗಿಗಳಲ್ಲಿ 11 ಜನರಿಗೆ ಅಧಿಕ ರಕ್ತದೊತ್ತಡ ಮತ್ತು 10 ಮಂದಿ ಮಧುಮೇಹ ರೋಗಿಗಳಾಗಿದ್ದರು. ಕೊರೊನಾ ಕಾರಣದಿಂದಾಗಿ ನ್ಯುಮೋನಿಯಾ ಮತ್ತೆ ವಿಶ್ವದಾದ್ಯಂತ ಹೆಚ್ಚಾಗುತ್ತಿದೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ.

“ಮಧುಮೇಹವು ಯಾವುದೇ ಸೋಂಕಿಗೂ ಅಪಾಯಕಾರಿ ಅಂಶವಾಗಿದೆ. ಮಧುಮೇಹದಿಂದಾಗಿ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವವರು ಕೊರೊನಾ ವೈರಸ್ ವಿರುದ್ಧ ಸುದೀರ್ಘ ಯುದ್ಧ ಮಾಡಬೇಕಾಗುತ್ತದೆ” ಎಂದು ರಾಮಯ್ಯ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರಜ್ಞ ಡಾ.ಪ್ರಸನ್ನ ಕುಮಾರ್ ಟಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಮರೆತ ಜನರಿಂದ ದೀಪಾವಳಿ ಶಾಪಿಂಗ್‌ ಫುಲ್ ಜೋರು!

ಮಧುಮೇಹಿಗಳಂತೆ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಅಧಿಕ ರಕ್ತದೊತ್ತಡ, ದೀರ್ಘಕಾಲದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು ಕೊರೊನಾ ನ್ಯುಮೋನಿಯಾಕ್ಕೆ ಹೆಚ್ಚು ಒಳಗಾಗುತ್ತಾರೆ. ನ್ಯುಮೋನಿಯಾವನ್ನು ತಡೆಗಟ್ಟಲು ಈ ರೋಗಗಳನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ ಎಂದು ವಿಕ್ರಮ್ ಆಸ್ಪತ್ರೆಯ ಸಲಹೆಗಾರ ಹೃದಯರೋಗ ತಜ್ಞ ಡಾ.ವಾಸುನೇತ್ರ ಕಾಸರಗೋಡ್ ತಿಳಿಸಿದ್ದಾರೆ.

ಇಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಸೇರಿಸುವಲ್ಲಿ ವಿಳಂಬ ಮಾಡುವುದು ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಸರಿಯಾದ ಚಿಕಿತ್ಸೆ ಪಡೆದರೆ ಗುಣವಾಗುತ್ತಾರೆ. “91 ವರ್ಷ ವಯಸ್ಸಿನ ಮಧುಮೇಹ ಮತ್ತು ಕೋವಿಡ್ ನ್ಯುಮೋನಿಯಾ ಇದ್ದ ರೋಗಿ ಕೂಡ ಚಿಕಿತ್ಸೆ ಪಡೆದು ಚೆನ್ನಾಗಿ ಚೇತರಿಸಿಕೊಂಡಿರುವುದನ್ನು ನಾವು ನೋಡಿದ್ದೇವೆ” ಎಂದು ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ ಮೈಸೂರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ನಡುವೆಯೂ 2 ತಿಂಗಳಲ್ಲಿ 61,290 ಜನರಿಗೆ ಉದ್ಯೋಗ ನೀಡಿದ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...