ಭಾರತ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 50,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳನ್ನು ವರದಿ ಮಾಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.
ಇದುವರೆಗಿನ ಪ್ರಕರಣಗಳಲ್ಲಿ ಇದು ಅತಿದೊಡ್ಡ ಏಕದಿನ ಏರಿಕೆ ಆಗಿದೆ.
ಕಳೆದ 24 ಗಂಟೆಗಳಲ್ಲಿ ಕನಿಷ್ಠ 52,123 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳು ಸಂಖ್ಯೆ 15,83,792 ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 775 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತದೆ. ಒಟ್ಟು ಸಾವುಗಳು ಈಗ 34,968 ತಲುಪಿದೆ.
ಚೇತರಿಸಿಕೊಂಡ ಒಟ್ಟು ಜನರ ಸಂಖ್ಯೆ 10,20,582 ಮತ್ತು ಚೇತರಿಕೆ ಪ್ರಮಾಣ ಶೇಕಡಾ 64.43 ರಷ್ಟಿದ್ದರೆ, ಸೋಂಕು ದೃಢೀಕರಣ ಪ್ರಮಾಣವು ಶೇಕಡಾ 11.67 ಆಗಿದೆ.
ಇಂದು ಬೆಳಿಗ್ಗೆ ತನಕ ಪರೀಕ್ಷಿಸಿದ ಒಟ್ಟು ಮಾದರಿಗಳು 1,81,90,382 ಆಗಿದ್ದರೆ, 4,46,642 ಮಾದರಿಗಳನ್ನು ಬುಧವಾರ ಪರೀಕ್ಷಿಸಲಾಗಿತು.
ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?


