Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವರದಿ: ಪತ್ರಕರ್ತ ಅಜಿತ್ ಅಂಜುಮ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹಸ್ತಕ್ಷೇಪ ಮಾಡಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸೋಮವಾರ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜುಲೈ 12ರಂದು ಬಾಲಿಯಾದ ಮತಗಟ್ಟೆಗೆ ಭೇಟಿ ನೀಡಿದ ನಂತರ ಪ್ರಶಸ್ತಿ ವಿಜೇತ ಪತ್ರಕರ್ತ ಅಜಿತ್ ಅಂಜುಮ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, 2023 ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಂಜುಮ್ ಅವರು, ಮತಗಟ್ಟೆಯಲ್ಲಿ ಹಲವು ಗಣತಿ ಫಾರ್ಮ್‌ಗಳು (ನಮೂನೆಗಳು) ಕಂಡು ಬಂದಿವೆ. ಅವುಗಳಲ್ಲಿ ಕೆಲವು ಫಾರ್ಮ್‌ಗಳಲ್ಲಿ ಫೋಟೋ ಇರಲಿಲ್ಲ. ಇನ್ನೂ ಕೆಲವು ಫಾರ್ಮ್‌ಗಳನ್ನು ಭಾಗಶಃ ಭರ್ತಿ ಮಾಡಲಾಗಿತ್ತು, ಸಹಿ ಹಾಕಿರಲಿಲ್ಲ” ಎಂದು ವರದಿ ಮಾಡಿದ್ದರು.

ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮೊಹಮ್ಮದ್ ಅನ್ಸಾರುಲ್ ಹಕ್ ಅವರ ದೂರಿನ ಮೇರೆಗೆ, ಅಂಜುಮ್ ವಿರುದ್ಧ ಬಿಎನ್‌ಎಸ್‌ ಕಾಯ್ದೆಯ ಕ್ರಿಮಿನಲ್ ಅತಿಕ್ರಮಣ, ಕಾನೂನುಬದ್ಧ ಆದೇಶವನ್ನು ಉಲ್ಲಂಘಿಸುವುದು, ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಪ್ರಯತ್ನಿಸುವುದು ಮುಂತಾದ ಸೆಕ್ಷನ್‌ಗಳಡಿ ಹಾಗೂ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.

“ಸಾಹಿಬ್‌ಪುರ ಕಮಲ್ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 16145 ರ ಬಿಎಲ್ಒ ಆದ ನಾನು, ಜುಲೈ 12, 2025ರಂದು ಬಲ್ಲಿಯಾದಲ್ಲಿರುವ ಬ್ಲಾಕ್ ಆಡಿಟೋರಿಯಂನಲ್ಲಿ ಬಿಎಲ್ಒ ಅಪ್ಲಿಕೇಶನ್‌ನಿಂದ ಎಣಿಕೆ ಫಾರ್ಮ್‌ಗಳನ್ನು ಅಪ್‌ಲೋಡ್ ಮಾಡುತ್ತಿದ್ದೆ. ಬೆಳಿಗ್ಗೆ 9:30ರ ಸುಮಾರಿಗೆ, ಯೂಟ್ಯೂಬರ್ ಅಜಿತ್ ಅಂಜುಮ್ ಅವರ ಸಹಚರರು ಮತ್ತು ಕ್ಯಾಮರಾಮ್ಯಾನ್ ಅನುಮತಿಯಿಲ್ಲದೆ ಆಡಿಟೋರಿಯಂಗೆ ಪ್ರವೇಶಿಸಿ, ನನ್ನ ಬೂತ್‌ನಲ್ಲಿರುವ ಮತದಾರರ ಸಂಖ್ಯೆ, ನಾನು ಎಷ್ಟು ಫಾರ್ಮ್‌ಗಳನ್ನು ವಿತರಿಸಿದ್ದೇನೆ ಮತ್ತು ನನಗೆ ಎಷ್ಟು ಫಾರ್ಮ್‌ಗಳು ವಾಪಸ್ ತೊರೆತಿವೆ ಎಂದು ಪ್ರಶ್ನಿಸಲು ಪ್ರಾರಂಭಿಸಿದರು” ಎಂದು ಮೊಹಮ್ಮದ್ ಅನ್ಸಾರುಲ್ ಹಕ್ ದೂರು ನೀಡಿದ್ದಾರೆ.

ಮುಸ್ಲಿಂ ಮತದಾರರ ಸಂಖ್ಯೆ ಮತ್ತು ಎಷ್ಟು ಮಂದಿ ಫಾರ್ಮ್‌ ಸಲ್ಲಿಸಿದ್ದಾರೆ ಎಂದು ಆರೋಪಿಗಳು ಕೇಳಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

“ನನ್ನ ಮತಗಟ್ಟೆಯಲ್ಲಿ 1,020 ಮತದಾರರಿದ್ದಾರೆ. ನಾನು ಎಲ್ಲರಿಗೂ ಫಾರ್ಮ್‌ಗಳನ್ನು ವಿತರಿಸಿ ಅವುಗಳನ್ನು ಮರಳಿ ಪಡೆದಿದ್ದೇನೆ ಎಂದು ಅವರಿಗೆ ಹೇಳಿದ್ದೇನೆ. ಆದರೂ, ಮುಸ್ಲಿಂ ಮತದಾರರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಹೇಳಿಕೆಯ ಮೇಲೆ ಯೂಟ್ಯೂಬರ್ ಗಮನ ಹರಿಸಿದ್ದರು, ಅದು ಸಂಪೂರ್ಣವಾಗಿ ಸುಳ್ಳು. ಯೂಟ್ಯೂಬರ್ ಮತ್ತು ಅವರ ತಂಡವು ನನಗೆ ಒಂದು ಗಂಟೆ ಕೆಲಸ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದಾಗಿ ನನ್ನ ಕೆಲಸಕ್ಕೆ ಅಡ್ಡಿ ಉಂಟಾಯಿತು. ಆದ್ದರಿಂದ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಕೋಮು ಸಂಘರ್ಷವನ್ನು ಪ್ರಚೋದಿಸಿದ ಯೂಟ್ಯೂಬರ್ ಅಜಿತ್ ಅಂಜುಮ್ ಮತ್ತು ಅವರ ಸಹಚರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಅನ್ಸಾರುಲ್ ಹಕ್ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ನಡುವೆ ಪತ್ರಕರ್ತ ಅಂಜುಮ್ ಅವರು ತಮ್ಮ ವರದಿಗೆ ಬದ್ಧ ಎಂದಿದ್ದು, “ನಮ್ಮ ವರದಿ ನ್ಯಾಯಯುತ ಮತ್ತು ಪಕ್ಷಪಾತ ರಹಿತವಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

“ನಾನೊಬ್ಬ ಪ್ರಜ್ಞಾಪೂರ್ವಕ ಪತ್ರಕರ್ತನಾಗಿ, ಭಾರತೀಯ ಚುನಾವಣಾ ಆಯೋಗದ ನಿಯಮಗಳನ್ನು ಹೇಗೆ ಪಾಲಿಸುತ್ತಿಲ್ಲ ಎಂಬುದನ್ನು ತೋರಿಸಿದ್ದೇನೆ. ನಾನು ಯಾರ ಗುರುತನ್ನು ಬಹಿರಂಗಪಡಿಸಿಲ್ಲ ಅಥವಾ ಗಣತಿ ನಮೂನೆಗಳ ಹತ್ತಿರದ ಚಿತ್ರಗಳನ್ನು ತೋರಿಸಿಲ್ಲ. ಪೊಲೀಸರು ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ನನ್ನ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ. ನಾನು ಇದಕ್ಕೆಲ್ಲ ಹೆದರುವವನು ಅಲ್ಲ ಅಂಜುಮ್ ಹೇಳಿದ್ದಾರೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯದ ಕಾಲೇಜು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...