Homeಮುಖಪುಟರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

ರಾಹುಲ್ ಮಾಂಕೂಟತ್ತಿಲ್ ಬಗ್ಗೆ ವರದಿ: ಟಿವಿ ಚಾನೆಲ್ ಕಚೇರಿ ಮೇಲೆ ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯತರು

- Advertisement -
- Advertisement -

ಕೇರಳದ ತ್ರಿಶೂರ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಲಯಾಳಂ ಸುದ್ದಿ ವಾಹಿನಿ ‘ರಿಪೋರ್ಟರ್ ಟಿವಿ’ಯ ಬ್ಯೂರೋ ಕಚೇರಿ ಮೇಲೆ ಶುಕ್ರವಾರ (ಆ.29) ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಬಗ್ಗೆ ಚಾನೆಲ್ ವರದಿ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಚಾನೆಲ್ ಮತ್ತು ಅದರ ವರದಿಗಾರರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಚಾನೆಲ್‌ ಲೋಗೋ ಹೊಂದಿರುವ ಪೋಸ್ಟರ್‌ಗಳ ಮೇಲೆ ಮಸಿ ಸುರಿದಿದ್ದಾರೆ ಎಂದು ವರದಿ ಹೇಳಿದೆ.

ಘಟನೆಯನ್ನು ಖಂಡಿಸಿರುವ ರಿಪೋರ್ಟರ್ ಟಿವಿ, ‘ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದಿದೆ. ಪೊಲೀಸರಿಗೆ ಮತ್ತು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದೆ.

ರಾಹುಲ್ ಮಾಂಕೂಟತ್ತಿಲ್ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಲವಾರು ಆಡಿಯೋ ಕ್ಲಿಪ್‌ಗಳನ್ನು ರಿಪೋರ್ಟರ್ ಟಿವಿ ಪ್ರಸಾರ ಮಾಡಿತ್ತು.

ಮಹಿಳೆಯೊಬ್ಬರಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ ಮಾತನಾಡಿದ್ದ ಆಡಿಯೋ ಕ್ಲಿಪ್ ಒಂದನ್ನು . ಆಗಸ್ಟ್ 21 ರಂದು ಚಾನೆಲ್ ಪ್ರಸಾರ ಮಾಡಿತ್ತು. ಆ ಆಡಿಯೋ ಕ್ಲಿಪ್‌ನಲ್ಲಿದ್ದ ಪುರುಷನ ಧ್ವನಿ ರಾಹುಲ್ ಅವರದ್ದು ಎನ್ನಲಾಗಿದೆ.

ಚಾನೆಲ್ ಪ್ರಸಾರ ಮಾಡಿದ್ದ ಆಡಿಯೋ ಕೇರಳದಲ್ಲಿ ಸಂಚಲನ ಸೃಷ್ಟಿಸಿದ್ದು, ಸ್ವಪಕ್ಷದವರಿಂದಲೇ ರಾಹುಲ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಕೊನೆಗೆ ರಾಹುಲ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆದರು.

ತನ್ನ ಕಚೇರಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಿಪೋರ್ಟರ್ ಟಿವಿ ಪ್ರಸಾರ ಮಾಡಿರುವ ವಿಡಿಯೋದಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ವ್ಯಕ್ತಿಗಳು ಸುದ್ದಿ ವಾಹಿನಿಯ ವಾಹನದ ಮೇಲೆ ತಮ್ಮ ಪಕ್ಷದ ಧ್ವಜವನ್ನು ಇರಿಸಿ ಘೋಷಣೆಗಳನ್ನು ಕೂಗಿ, ನಂತರ ಕಚೇರಿಯ ಪ್ರವೇಶದ್ವಾರದಲ್ಲಿ ಪೋಸ್ಟರ್ ಮೇಲೆ ಮಸಿ ಸುರಿದಿರುವುದನ್ನು ನೋಡಬಹುದು. 

“ರಾಹುಲ್ ಅವರನ್ನು ಬೆಂಬಲಿಸುವ ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಎಲ್ಲರೂ ಈ ಕೃತ್ಯವನ್ನು ಬೆಂಬಲಿಸಿಲ್ಲ. ಕೆಲವು ಯುವ ನಾಯಕರನ್ನು ಹೊರತುಪಡಿಸಿ, ಪಕ್ಷದೊಳಗಿನ ಹಿರಿಯ ನಾಯಕರು ಇದನ್ನು ಬೆಂಬಲಿಸುವುದಿಲ್ಲ ಎಂದು ನಮಗೆ ತಿಳಿದು ಬಂದಿದೆ” ಎಂದು ರಿಪೋರ್ಟರ್ ಟಿವಿಯ ಸಂಪಾದಕ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಚಾನೆಲ್ ಪ್ರಕಾರ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್ ಮೋಹನ್, ತ್ರಿಶೂರ್ ಜಿಲ್ಲಾ ಉಪಾಧ್ಯಕ್ಷ ವಿಷ್ಣು ಚಂದ್ರನ್, ತ್ರಿಶೂರ್ ವಿಧಾನಸಭಾ ಅಧ್ಯಕ್ಷ ಕೆ. ಸುಮೇಶ್ ಮತ್ತು ಸೌರಾಗ್, ನಿಖಿಲ್ ದೇವ್, ಅಮಲ್ ಜೇಮ್ಸ್ ಸೇರಿದಂತೆ ಇತರು ದಾಳಿಯಲ್ಲಿ ಭಾಗಿಯಾಗಿದ್ದಾರೆ.

ಬ್ಯಾಂಕ್ ಕ್ಯಾಂಟೀನ್‌ನಲ್ಲಿ ಬೀಫ್‌ ನಿಷೇಧಿಸಿದ ಬಿಹಾರ ಮೂಲದ ಮ್ಯಾನೇಜರ್; ಸಿಬ್ಬಂದಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...