Homeಮುಖಪುಟಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣದ ಮರುತನಿಖೆ ಸುದ್ದಿ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬಾಬಾಬುಡನ್ ಗಿರಿಯಲ್ಲಿ ನಡೆದ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕರಣದ ವಿವರ ಹಂಚಿಕೊಂಡಿರುವ ಸಿಎಂ, “2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಆರೋಪಿಗಳಿಗೆ ಸಮನ್ಸ್ ಜಾರಿಯಾಗಿದೆ” ಎಂದು ತಿಳಿಸಿದ್ದಾರೆ.

“ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಿಎಂ ಮನವಿ ಮಾಡಿದ್ದಾರೆ.

ಡಿಸೆಂಬರ್ 4ರಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ ಎಂದು ಆರೋಪಿಸಿದ್ದರು.

“ಮೊನ್ನೆ ಕರಸೇವಕರು, ಇಂದು ದತ್ತ ಪೀಠದ ಹೋರಾಟಗಾರರನ್ನು ಬೆನ್ನು ಹತ್ತಲು ಪೋಲಿಸರಿಗೆ ಸೂಚಿಸಿದ್ದೀರಿ. ನಿವೆಷ್ಟೇ ಭಯ ಹುಟ್ಟಿಸಿದರೂ ರಾಮ ಭಕ್ತರ ಅಯೋಧ್ಯೆ ಭೇಟಿಯ ಸಂಖ್ಯೆ ಕ್ಷೀಣಿಸಲು ಸಾಧ್ಯವಾಗದು, ಬದಲಾಗಿ ಅದು ವಿಸ್ತಾರಗೊಳ್ಳತ್ತಲೇ ಇರುತ್ತದೆ. ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ, ಇನ್ನಷ್ಟು ಆಳಕ್ಕೂ ಇಳಿದು ಬಗೆಯಿರಿ, ನಿಮಗೇನೂ ದಕ್ಕದು, ಹಿಂದೂ ಕಾರ್ಯಕರ್ತರ ಒಂದೇ ಒಂದು ರೋಮವನ್ನೂ ಕೊಂಕಿಸಲೂ‌ ಸಾಧ್ಯವಾಗದು. ರಾಮ ಜನ್ಮಭೂಮಿ ಹೋರಾಟದ 31 ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಕರ ಸೇವಕರನ್ನು ಬಂಧಿಸಿದ್ದರ ಬೆನ್ನಲ್ಲೇ, ಇದೀಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ. ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ನಿಮ್ಮ ಸರ್ಕಾರ ತಲುಪುತ್ತಿದೆ” ಎಂದು ವಿಜಯೇಂದ್ರ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ವಿಜಯೇಂದ್ರ ಪೋಸ್ಟ್‌ ಅನುಸರಿಸಿ ಅನೇಕ ದೃಶ್ಯ ಮಾಧ್ಯಮಗಳು ಸುದ್ದಿ ಬಿತ್ತರಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನಿಡಿದ್ದಾರೆ.

ಏನಿದು ಪ್ರಕರಣ?

2017ರಲ್ಲಿ ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌ 2017ರ ಡಿಸೆಂಬರ್ 3 ರಂದು ದತ್ತ ಜಯಂತಿ ದಿನ ದರ್ಗಾದ ಆವರಣದಲ್ಲಿದ್ದ ಎರಡು ಗೋರಿಗಳನ್ನು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಭಜರಂಗದಳದ ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಸೇರಿ ಒಟ್ಟು 14 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆರೋಪಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ಬೆಂಗಳೂರು ವಿಮಾನ ನಿಲ್ದಾಣದ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ: ತಿಂಗಳಲ್ಲಿ ಎರಡನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...