Homeಮುಖಪುಟನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಕೇರಳವು ಗಣರಾಜ್ಯೋತ್ಸವದ ಸ್ತಬ್ಧಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿ ಪ್ರತಿಮೆ ಮತ್ತು ನಾರಾಯಣ ಗುರು ಪ್ರತಿಮೆಯನ್ನು ಕೇರಳ ಸಿದ್ಧಪಡಿಸಿತ್ತು. ಆದರೆ, ಕೇಂದ್ರ ಸರ್ಕಾರವು ಶಂಕರಾಚಾರ್ಯರ ಮೂರ್ತಿಯನ್ನು ಬಳಸಲು ಸೂಚಿಸಿತ್ತು. ಬಳಿಕ ಕೇರಳಕ್ಕೆ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿತ್ತು.

“ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ  ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ. ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

“ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ..? ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ. ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ..?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.

’ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ..?’ ಎಂದು ಕಿಡಿ ಕಾರಿದ್ದಾರೆ.

’ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಳೆದೆರಡು ಬಾರಿಯೂ ಕೇರಳಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿರಲಿಲ್ಲ. ಈ ಬಾರಿಯೂ ನೀಡದಿರುವುದು ರಾಜಕೀಯ ಕೈವಾಡವಿದೆ ಎಂಬ ಆರೋಪಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್...