Homeಕರ್ನಾಟಕಗಣರಾಜ್ಯೋತ್ಸವ ಟ್ಯಾಬ್ಲೊ: ಜನಾಕ್ರೋಶದ ನಂತರ ಕರ್ನಾಟಕಕ್ಕೆ ಅವಕಾಶ ನೀಡುವುದಾಗಿ ಪತ್ರ ಬರೆದ ಒಕ್ಕೂಟ ಸರ್ಕಾರ

ಗಣರಾಜ್ಯೋತ್ಸವ ಟ್ಯಾಬ್ಲೊ: ಜನಾಕ್ರೋಶದ ನಂತರ ಕರ್ನಾಟಕಕ್ಕೆ ಅವಕಾಶ ನೀಡುವುದಾಗಿ ಪತ್ರ ಬರೆದ ಒಕ್ಕೂಟ ಸರ್ಕಾರ

- Advertisement -
- Advertisement -

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಟ್ಯಾಬ್ಲೊ(ಸ್ತಬ್ಧಚಿತ್ರ)ಗೆ ಅನುಮತಿ ನಿರಾಕರಣೆ ಮಾಡಿದ್ದ ಒಕ್ಕೂಟ ಸರ್ಕಾರ ಇದೀಗ ತನ್ನ ಮನಸ್ಸನ್ನು ಬದಲಾಯಿಸಿದ್ದು, ಕರ್ನಾಟಕಕ್ಕೆ ಅವಕಾಶ ನೀಡುವುದಾಗಿ ಹೇಳಿದೆ. ಟ್ಯಾಬ್ಲೊಗೆ ಅವಕಾಶ ನಿರಾಕರಣೆ ಮಾಡಿರುವುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ವಿರೋಧ ಪಕ್ಷಗಳು ಮತ್ತು ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಟ್ಯಾಬ್ಲೊಗೆ ಅವಕಾಶ ನೀಡದೆ ಇರುವುದು ರಾಜ್ಯದಲ್ಲಿ ಆಕ್ರೋಶ ಉಂಟಾಗಿತ್ತು. ಮುಂದಿನ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿರುವುದರಿಂದ ಇದು ಬಿಜೆಪಿಗೆ ಹಿನ್ನಡೆಯೆಂದು ಕೂಡಾ ಅರ್ಥೈಸಲಾಗಿತ್ತು. ಹೀಗಾಗಿ ಒಕ್ಕೂಟ ಸರ್ಕಾರ ತನ್ನ ಮನಸ್ಸನ್ನು ಬದಲಾಯಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುರುವಾರ ರಾಜ್ಯ ಸರ್ಕಾರಕ್ಕೆ ಒಕ್ಕೂಟ ಸರ್ಕಾರವು ಬರೆದಿರುವ ಹೊಸ ಪತ್ರದಲ್ಲಿ, ರಕ್ಷಣಾ ಸಚಿವಾಲಯವು ಕರ್ನಾಟಕದ ಟ್ಯಾಬ್ಲೊವನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ಹೇಳಿದೆ.

“ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕರ್ನಾಟಕದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಬಿಜೆಪಿ ನಮ್ಮ ರಾಜ್ಯದ ಹೆಮ್ಮೆಯನ್ನು ಎತ್ತಿಹಿಡಿಯುವ ಬಗ್ಗೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ಕಳೆದ ಎಂಟು ವರ್ಷಗಳಿಂದ ಕೈಬಿಟ್ಟಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಕ್ಷಣಾ ಸಚಿವಾಲಯ ಅವಕಾಶ ನೀಡಲು ಬಯಸಿದ್ದರಿಂದ ಈ ಬಾರಿ ಕರ್ನಾಟಕಕ್ಕೆ ಅವಕಾಶ ನೀಡಿಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡಿತ್ತು.

ಏತನ್ಮಧ್ಯೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಡಾ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದರು ಮತ್ತು ತಜ್ಞರು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು.

ಕಳೆದ ವರ್ಷ ಕೇರಳ ಸರ್ಕಾರವು ನಾರಾಯಣ ಗುರು ಅವರ ಬಗ್ಗೆಗಿನ ಸ್ತಬ್ಧಚಿತ್ರವನ್ನು ನಿರ್ಮಾಣ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಅವಕಾಶ ನೀಡದ ಕಾರಣ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಕರಾವಳಿಯ ಬಿಲ್ಲವ ಸಂಘಟನೆಗಳು ಇದನ್ನು ವಿರೋಧಿಸಿ ನಾರಾಯಣ ಗುರುಗಳ ಟ್ಯಾಬ್ಲೋ ರ್‍ಯಾಲಿ ನಡೆಸಿತ್ತು.

ಇದನ್ನೂ ಓದಿ: ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಹಿರಿಯ ಬಿಲ್ಲವ ನಾಯಕ ಬಿ. ಜನಾರ್ದನ ಪೂಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...