HomeUncategorizedರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯ ಬಂಧನ 13ನೇಯದಾಗಿದೆ.

- Advertisement -
- Advertisement -

ನಕಲಿ ಟಿಆರ್‌ಪಿ ರೇಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಖಂಚಂದಾನಿ ಅವರ ವಕೀಲ ನಿತೀನ್ ಪ್ರಧಾನ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.

“ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅವರ ಬಂಧನವು ಸಂಪೂರ್ಣ ಅಧಿಕಾರದ ದುರುಪಯೋಗ ಮತ್ತು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದೇವೆ. ಏಕೆಂದರೆ, ಖಂಚಂದಾನಿ ಹೆಸರನ್ನು ಎಫ್‌ಐಆರ್ ಅಥವಾ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿಲ್ಲ” ಎಂದು ಪ್ರಧಾನ್ ಹೇಳಿದ್ದಾರೆ. ಜಾಮೀನು ಅರ್ಜಿಯನ್ನು ವಿಚಾರಣೆ ನಾಳೆ (ಬುಧವಾರ) ನಡೆಯಲಿದೆ.

ನಕಲಿ ಟಿಆರ್‌ಪಿ ರೇಟಿಂಗ್ ಹಗರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯನ್ನು ಮುಂಬೈ ಪೊಲೀಸರು ಭಾನುವಾರ (ಡಿ.13) ಬಂಧಿಸಿದ್ದರು. ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ‌ ಮತ್ತು ಅದರ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ರಕ್ಷಣೆ ಕೋರಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: ನಕಲಿ ಟಿಆರ್‌ಪಿ ರೇಟಿಂಗ್ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿ ಬಂಧನ

ಹನ್ಸಾ ಸಂಶೋಧನೆಯ ಅಧಿಕಾರಿ ನಿತಿನ್ ಡಿಯೋಕರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಟಿಆರ್‌ಪಿ ತಿರುಚಿದ ಪ್ರಕರಣದಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಯ ಬಂಧನ 13ನೇಯದಾಗಿದೆ.

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸುವುದಕ್ಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲೀಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿದೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ವಿರುದ್ಧದ ಪ್ರಕರಣಗಳ ರದ್ದತಿ ಮನವಿ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...