Homeಮುಖಪುಟದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ದೆಹಲಿಯಾಚೆಯೇ ಟ್ಯ್ರಾಕ್ಟರ್ ರ‍್ಯಾಲಿ ನಡೆಸಿಯೆಂದ ಪೊಲೀಸರು: ದೆಹಲಿ ಒಳಗೇ ಶಾಂತಿಯುತ ರ‍್ಯಾಲಿಯೆಂದ ರೈತರು

ರಾಜಧಾನಿಯ ಹೊರಭಾಗಕ್ಕೆ ಮಾತ್ರ ರ‍್ಯಾಲಿ ಸಿಮೀತವಾಗಿರಲಿ ಎಂದು ದೆಹಲಿ ಪೊಲೀಸರು ಬಯಸುತ್ತಿದ್ದಾರೆ. ಆದರೆ ಇದಕ್ಕೆ ರೈತರು ಒಪ್ಪಿಲ್ಲ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಪ್ರತಿಭಟನಾನಿರತ ರೈತರು ನಡೆಸಲು ಉದ್ದೇಶಿಸಿರುವ ಟ್ಯ್ರಾಕ್ಟರ್ ರ‍್ಯಾಲಿಯನ್ನು ದೆಹಲಿ ಒಳಕ್ಕೆ ಬರುವ ರಿಂಗ್ ರೋಡ್ ಬದಲು ಹೊರವಲಯದಲ್ಲೇ ನಡೆಸಲು ದೆಹಲಿ ಪೊಲೀಸ್ ಉನ್ನತಾಧಿಕಾರಿಗಳು ರೈತರನ್ನು ಮನವೊಲಿಸಲು ಗುರುವಾರವೂ ಯತ್ನಿಸಿದರು. ಆದರೆ ಇದಕ್ಕೆ ರೈತರು ಒಪ್ಪದೆ ದೆಹಲಿ ಒಳಗೆ ಶಾಂತಿಯುತವಾಗಿ ಟ್ಯ್ರಾಕ್ಟರ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಸಿಂಘು ಗಡಿ ಬಳಿಯ ರೆಸಾರ್ಟ್ ಒಂದರಲ್ಲಿ ನಿನ್ನೆ ದೆಹಲಿ ಉತ್ತರ ಭಾಗದ ಜಂಟಿ ಪೊಲೀಸ್ ಆಯುಕ್ತ ಎಸ್‌ಎಸ್ ಯಾದವ್ ಮತ್ತು ಪಶ್ಚಿಮ ವಲಯದ ವಿಶೇಷ ಪೊಲೀಸ್ ಆಯುಕ್ತ (ಶಾಂತಿ ಮತ್ತು ಸುವ್ಯವಸ್ಥೆ) ಸಂಜಯ್ ಸಿಂಗ್, ಗುಪ್ತಚಾರ ವಿಭಾಗದ ದೀಪೇಂದ್ರ ಪಟ್ನಾಯಕ್ ಮುಂತಾದ ಹಿರಿಯ ಪೊಲೀಸ್ ಅಧಿಕಾರಿಗಳು ರೈತ ಸಂಘಟನೆಗಳ ನಾಯಕರ ಮನವೊಲಿಕೆಗೆ ಯತ್ನಿಸಿದರು. ಯೋಗೇಂದ್ರ ಯಾದವ್ ಸೇರಿದಂತೆ ಹಲವು ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯೋಗೇಂದ್ರ ಯಾದವ್, ಪೊಲೀಸರ ಸಲಹೆ ಒಪ್ಪದ ರೈತರು ದೆಹಲಿಯ ಭಾಗವಾಗಿರುವ ರಿಂಗ್ ರೋಡಿನಲ್ಲೇ ಶಾಂತಿಯುತ ರ‍್ಯಾಲಿ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಸೋಮವಾರದಿಂದಲೂ ರೈತ ಸಂಘಟನೆಗಳ ಮನವೊಲಿಕೆಗೆ ಯತ್ನಿಸುತ್ತಲೇ ಬಂದಿದ್ದಾರೆ. ರ‍್ಯಾಲಿ ರದ್ದಿಗೆ ಆಗ್ರಹಿಸಿದ ಪೊಲೀಸರ ಅರ್ಜಿಗೆ ಮಾನ್ಯತೆ ನೀಡದ ಸುಪ್ರೀಂಕೋರ್ಟ್, ಅದನ್ನು ನೀವೇ ನಿರ್ಧರಿಸಿ ಎಂದು ಬುಧವಾರ ಪೊಲೀಸರಿಗೆ ತಿಳಿಸಿತ್ತು. ಈ ಕಾರಣಕ್ಕೆ ಇಂದು ಗುರುವಾರ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ರ‍್ಯಾಲಿ ರೂಟ್ ಬದಲಿಸುವಮತೆ ರೈತ ನಾಯಕರ ಮನವೊಲಿಕೆಗೆ ಯತ್ನಿಸಿದರು.

ಜ. 26 ಕ್ಕೆ ಟ್ರ್ಯಾಕ್ಟರ್ ರ್ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

ರಿಂಗ್ ರೋಡ್‌ನಲ್ಲಿ ರ‍್ಯಾಲಿ ಬೇಡ ಮತ್ತು ಕಿಸಾನ್ ಘಾಟ್‌ನತ್ತ ರ‍್ಯಾಲಿ ಮುಂದುವರೆಯುವುದು ಬೇಡ ಎಂದಿರುವ ಪೊಲೀಸರ ಸಲಹೆಯನ್ನು ರೈತ ಸಂಘಟನೆಗಳ ನಾಯಕರು ಒಪ್ಪಿಕೊಂಡಿಲ್ಲ. ಆದರೆ ಪೊಲೀಸರ ಷರತ್ತಿಗೆ ಒಪ್ಪದ ರೈತ ಸಂಘಟನೆಗಳು ಹೊರ ರಿಂಗ್ ರೋಡಿನಲ್ಲೇ ರ‍್ಯಾಲಿ ನಡೆಯಲಿದೆ ಮತ್ತು ಅದು ಕಿಸಾನ್ ಘಾಟ್‌ವರೆಗೂ ನಡೆಯಲಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ರಿಂಗ್‌ರಸ್ತೆಯ ಬದಲು ಕೆಎಂಪಿ ಎಕ್ಸ್‌ಪ್ರೆಸ್‌ ವೇನಲ್ಲಿ ರ‍್ಯಾಲಿ ನಡೆಸಿ ಮತ್ತು ಬೇರೆ ರೂಟ್‌ನತ್ತ ರ‍್ಯಾಲಿ ಬರುವುದು ಬೇಡ, ಕಿಸಾನ್‌ಘಾಟ್‌ನತ್ತಲೂ ಬೇಡ ಎಂದು ರೈತ ನಾಯಕರಿಗೆ ಮನವರಿಕೆ ಮಾಡಿಕೊಡಲು ದೆಹಲಿ ಪೊಲೀಸ್ ಅಧಿಕಾರಿಗಳು ಯತ್ನಿಸಿದ್ದು, ಅದನ್ನು ರೈತ ಸಂಘಟನೆಗಳು ಒಪ್ಪಿಲ್ಲ.

‘ಸಂಪೂರ್ಣ ಹೊರವಲಯಕ್ಕೆ ರ‍್ಯಾಲಿ ಸಿಮೀತಗೊಳಿಸಲು ಪೊಲೀಸರು ಸೂಚಿಸುತ್ತಿದ್ದಾರೆ. ಆದರೆ, ನಾವು ದೆಹಲಿಯ ಹೊರ ರಿಂಗ್‌ರೋಡಿನಲ್ಲೇ (ಇದು ದೆಹಲಿಯ ಭಾಗವೇ ಆಗಿದ್ದು, ಸಂಚಾರ ದಟ್ಟಣೆಯ ರಸ್ತೆಯಾಗಿದೆ) ರ‍್ಯಾಲಿ ಮಾಡಲಿದ್ದೇವೆ ಮತ್ತು ಗಣರಾಜ್ಯೋತ್ಸವ ಪರೇಡ್‌ಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಅಗದಂತೆ ಶಾಂತಿಯು ರ‍್ಯಾಲಿ ಮಾಡುತ್ತೇವೆ’ ಎಂದು ರೈತ ನಾಯಕರು ತಿಳಿಸಿದ್ದಾರೆ.

‘ನಮ್ಮ ಪರೇಡ್ ಕೂಡ ಗಣರಾಜ್ಯೋತ್ಸವದ ಪರೇಡ್‌ನಂತೆ ಇರಲಿದೆ. ಹೊಸ ಕೃಷಿ ಕಾಯ್ದೆಗಳ ಅಪಾಯಗಳನ್ನು ಬಿಂಬಿಸುವ ಟ್ಯಾಬ್ಲೊಗಳು, ಭಿತ್ತಿಪತ್ರಗಳನ್ನು ಟ್ಯ್ರಾಕ್ಟರ್‌ಗಳ ಮೇಲೆ ಪ್ರದರ್ಶಿಸಲಾಗುವುದು. ವಿವಿಧ ರಾಜ್ಯಗಳ ರೈತ ಸಂಘಟನೆಗಳು ಅಲ್ಲಿನ ರೈತರ ಸಂಕಷ್ಟಗಳನ್ನು ಬಿಂಬಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಿವೆ’ ಎಂದು ರೈತ ಸಂಘಟನೆಗಳು ಈ ಮೊದಲೇ ತಿಳಿಸಿದ್ದವು.

ಸಿಂಘು, ಟಿಕ್ರಿ ಮತ್ತು ಘಾಜಿಯಾಪುರ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಗಳಲ್ಲಿ ಹರಿಯಾಣ ಮತ್ತು ರಾಜಸ್ತಾನ್ ಪೊಲೀಸರು ಹೆಚ್ಚಿನ ಪೊಲೀಸರನ್ನು ಮತ್ತು ಆರ್‌ಎಎಫ್ ತುಕಡಿಗಳನ್ನು ನಿಯೋಜಿಸಿದ್ದಾರೆ. ಅಲ್ಲಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...