Homeಚಳವಳಿರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತ ವಿರೋಧಿ ಮಸೂದೆಗಳ ವಾಪಸಾತಿಗೆ ಆಗ್ರಹ: ಸೆ. 28 ರಂದು ’ಭಾರತ್ ಬಂದ್’

ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಎಪಿಎಂಸಿ, ಭೂಸುಧಾರಣೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಬಾರದು ಎಂದು ಒತ್ತಾಯಿಸಿ ಸೆಪ್ಟೆಂಬರ್ 28 ರಂದು ’ಭಾರತ್ ಬಂದ್’ ಆಚರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ, ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಮತ್ತು ಜನವಿರೋಧಿ ಮಾರಕ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಧೋರಣೆಯನ್ನು ಬದಲಿಸಿಕೊಳ್ಳಬೇಕು. ಮಸೂದೆಗಳನ್ನು ವಾಪಸ್ ಪಡೆಯಬೇಕು ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಭಾರತ್ ಬಂದ್‌ ನಡೆಯಲಿದೆ ಎಂದರು.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಸಮನ್ವಯ ಸಮಿತಿ ಮುಖಂಡ ಎ.ಗೋವಿಂದರಾಜ್ ಮಾತನಾಡಿ, ರೈತರ ತೀವ್ರ ವಿರೋಧದ ನಡುವೆಯೂ ಮೂರು ಮಸೂದೆಗಳನ್ನು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಿದೆ. ಸರ್ಕಾರ ಸರ್ವಾಧಿಕಾರಿ ಧೋರಣೆಯ ಮೂಲಕ ರೈತರನ್ನು ಬಗ್ಗುಬಡಿಯಲು ಯತ್ನಿಸುತ್ತಿದೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

ರೈತ ಸಂಘ ಮತ್ತು ಹಸಿರು ಸೇನೆ ಮುಖಂಡ ಆನಂದ ಪಟೇಲ್ ಮಾತನಾಡಿ ಸರ್ಕಾರ ಭೂಸುಧಾರಣ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸುಳ್ಳು ಹೇಳುತ್ತಿದೆ. ರೈತರು, ಜನಸಾಮಾನ್ಯರನ್ನು ದಿಕ್ಕುತಪ್ಪಿಸುತ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಿಲಯನ್ಸ್, ಮೆಟ್ರೋ, ಮೋರ್‌ನಂತಹ ಕಂಪನಿಗಳಿಗೆ ಅನುಕೂಲವಾಗುತ್ತದೆ. ಈ ವಿಷಯವನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಆರೋಪಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಹಳ್ಳಗಳಲ್ಲಿ ಮಾಲ್‌ಗಳು ಆರಂಭವಾಗಲಿದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕಿಂತ ಕಡಿಮೆ ಬೆಲೆಗೆ ಮಾಲ್‌ಗಳಲ್ಲಿ ದೊರೆಯಲಿವೆ. ಇದರಿಂದ ರೈತರು ಮಾಲ್‌ಗಳೊಂದಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಷ್ಟಕ್ಕೆ ಗುರಿಯಾಗುತ್ತಾರೆ. ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಸರ್ಕಾರದ ತೀರ್ಮಾನದಿಂದ ದಳ್ಳಾಳಿಗಳು ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ರೈತರಿಗೆ ಲಾಭ ದೊರೆಯಲಿದೆ ಎಂದು ಸಚಿವರು ಸುಳ್ಳು ಹೇಳುತ್ತಾರೆ. ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆಗೆ ತಂದರೆ ಕನಿಷ್ಠ ಬೆಂಬಲ ಬೆಲೆ ಗೊತ್ತಾಗುತ್ತದೆ. ಹತ್ತು ಮಂದಿ ದಲ್ಲಾಳಿಗಳು ಸ್ಪರ್ಧೆಗೆ ಇಳಿದು ರೈತರ ಉತ್ಪನ್ನಗಳನ್ನು ಹೆಚ್ಚು ಬೆಲೆಗೆ ಕೊಳ್ಳುತ್ತಾರೆ. ಇದು ಸರ್ಕಾರಕ್ಕೆ ತಿಳಿಯಬೇಕಾಗಿದೆ ಎಂದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ಸೆಸ್ ಇಲ್ಲವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟಾಗಲಿದೆ. ಸರ್ಕಾರಗಳು ಎಲ್ಲವನ್ನೂ ಖಾಸಗೀಕರಣಗೊಳಿಸಿ ಕಾರ್ಪೋರೇಟರ್ ಸಂಸ್ಥೆಗಳ ನಿಯಂತ್ರಣಕ್ಕೆ ಕೊಟ್ಟು ರೈತರು, ಜನಸಾಮಾನ್ಯರು ನರಳುವಂತಹ ವ್ಯವಸ್ಥೆಯನ್ನು ಸೃಷ್ಟಿಸಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸಮನ್ವಯ ಸಮಿತಿಯ ಕಾರ್ಯದರ್ಶಿ ಬಿ.ಉಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ, ಸ್ಲಂ ಜನಾಂದೋಲನ ಸಂಚಾಲಕ ಎ.ನರಸಿಂಹಮೂರ್ತಿ, ಆರ್.ಕೆ.ಎಸ್ ಸಂಘಟನೆಯ ಎನ್.ಎಸ್. ಸ್ವಾಮಿ, ಎಐಕೆಎಸ್ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ. ಧಾರ್ಮಿಕ...

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....