ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್‌ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್‌ಸಿಎಲ್ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್, ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...
ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್ನಿಂದ...
ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...
ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...
ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...
ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...
ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...
ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ.
ದೆಹಲಿ ಪರಿಸರ ಸಚಿವ ಮಂಜಿಂದರ್...
ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್ಬಾಗ್ ಪೊಲೀಸ್...
ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...