Homeಮುಖಪುಟಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ - ಸುಪ್ರೀಂಕೋರ್ಟ್

ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ – ಸುಪ್ರೀಂಕೋರ್ಟ್

- Advertisement -
- Advertisement -

2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಹಲವಾರು ಜಾತಿಗಳ OBC ಸ್ಥಾನಮಾನವನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪುವನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆ ವೇಳೆ, ಮೀಸಲಾತಿಯು ಧರ್ಮದ ಆಧಾರದ ಮೇಲೆ ಇರಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ಹೈಕೋರ್ಟ್‌ನ ಮೇ 22 ರ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದವು.

“ಮೀಸಲಾತಿ ಧರ್ಮದ ಆಧಾರದ ಮೇಲೆ ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘‘ಇದು ಧರ್ಮದ ಆಧಾರದಲ್ಲಿ ಅಲ್ಲ, ಹಿಂದುಳಿದಿರುವಿಕೆಯ ಆಧಾರದಲ್ಲಿ ನೀಡಲಾಗಿದೆ’’ ಎಂದು ಹೇಳಿದ್ದಾರೆ. 2010 ರಿಂದ ಪಶ್ಚಿಮ ಬಂಗಾಳದಲ್ಲಿ ಹಲವಾರು ಜಾತಿಗಳಿಗೆ ನೀಡಲಾಗಿದ್ದ OBC ಸ್ಥಾನಮಾನವನ್ನು ಹೈಕೋರ್ಟ್ ರದ್ದುಗೊಳಿಸಿ, ಸಾರ್ವಜನಿಕ ವಲಯದ ಉದ್ಯೋಗಗಳು ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕಾನೂನುಬಾಹಿರವೆಂದು ಪರಿಗಣಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತೀರ್ಪಿನ ವೇಳೆ ಹೈಕೋರ್ಟ್‌, “ಈ ಸಮುದಾಯಗಳನ್ನು ಒಬಿಸಿಗಳು ಎಂದು ಘೋಷಿಸಲು ಧರ್ಮವು ಏಕೈಕ ಮಾನದಂಡವಾಗಿದೆ ಎಂದು ತೋರುತ್ತದೆ” ಎಂದು ಹೇಳಿತ್ತು. 77 ವರ್ಗದ ಮುಸ್ಲಿಮರನ್ನು ಹಿಂದುಳಿದವರೆಂದು ಆಯ್ಕೆ ಮಾಡಿರುವುದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಹೈಕೋರ್ಟ್ ಹೇಳಿತ್ತು.

2012ರ ರಾಜ್ಯದ ಮೀಸಲಾತಿ ಕಾನೂನಿನ ನಿಬಂಧನೆಗಳು ಮತ್ತು 2010 ರಲ್ಲಿ ನೀಡಲಾದ ಮೀಸಲಾತಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬಗ್ಗೆ ತೀರ್ಪು ನೀಡಿದ್ದ ಹೈಕೋರ್ಟ್, ಈಗಾಗಲೇ ಸೇವೆಯಲ್ಲಿದ್ದ ಅಥವಾ ಮೀಸಲಾತಿಯ ಪ್ರಯೋಜನ ಪಡೆದಿರುವ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಬಡ ವರ್ಗಗಳ ನಾಗರಿಕರ ಸೇವೆಗಳಿಗೆ ತೀರ್ಪಿನಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.

ಒಟ್ಟಾರೆಯಾಗಿ, ಏಪ್ರಿಲ್, 2010 ಮತ್ತು ಸೆಪ್ಟೆಂಬರ್, 2010 ರ ನಡುವೆ ನೀಡಲಾದ 77 ವರ್ಗಗಳ ಮೀಸಲಾತಿಯನ್ನು ಹೈಕೋರ್ಟ್ ರದ್ದುಗೊಳಿಸಿತು. ಇದೇ ವೇಳೆ, ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಕಾಯಿದೆ-2012 ರ ಅಡಿಯಲ್ಲಿ ನೀಡಲಾದ OBC ಮೀಸಲಾತಿ ಪಡೆದಿದ್ದ 37 ವರ್ಗಗಳನ್ನು ಕೂಡಾ ರದ್ದು ಮಾಡಿದೆ.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಪ್ರಕರಣದ ಬಗ್ಗೆ ಅವಲೋಕನವನ್ನು ನೀಡುವಂತೆ ಪ್ರಕರಣದಲ್ಲಿ ಹಾಜರಾದ ವಕೀಲರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ಸಿಬಲ್, “ಕಾಯ್ದೆಯ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಇದು ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಪಡೆಯಲು ಬಯಸುವ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಗಳನ್ನು ಬಯಸುವ ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಕೆಲವು ಮಧ್ಯಂತರ ಆದೇಶವನ್ನು ಜಾರಿಗೊಳಿಸಬೇಕು ಮತ್ತು ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಸಿಬಲ್ ಪೀಠವನ್ನು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ ಕೆಲವು ಪ್ರತಿವಾದಿಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ಪಿ.ಎಸ್. ಪಟ್ವಾಲಿಯಾ ಸೇರಿದಂತೆ ಇತರ ವಕೀಲರ ಸಲ್ಲಿಕೆಗಳನ್ನು ಪೀಠವು ಆಲಿಸಿತು. ಜನವರಿ 7 ರಂದು ವಿವರವಾದ ಅರ್ಜಿಗಳನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...