Homeಮುಖಪುಟ'ಅಗತ್ಯವಿರುವಷ್ಟು ದಿನ ಮೀಸಲಾತಿ ವಿಸ್ತರಿಸಬೇಕು..'; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

‘ಅಗತ್ಯವಿರುವಷ್ಟು ದಿನ ಮೀಸಲಾತಿ ವಿಸ್ತರಿಸಬೇಕು..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

- Advertisement -
- Advertisement -

‘ಕೆಲವು ಗುಂಪುಗಳಿಗೆ ವಿಸ್ತರಿಸಿರುವ ಮೀಸಲಾತಿಯನ್ನು ಸಂಘ ಪರಿವಾರವು ಎಂದಿಗೂ ವಿರೋಧಿಸುವುದಿಲ್ಲ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೀಸಲಾತಿ-ಸಂಪತ್ತು ಮರುಹಂಚಿಕೆ ವಿಚಾರ ತಾರಕಕ್ಕೇರಿರುವ ನಡುವೆಯೇ ಮೀಸಲಾತಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್‌ನ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಮೀಸಲಾತಿಗಳನ್ನು ಎಲ್ಲಿಯವರೆಗೆ ಅಗತ್ಯವಿದೆಯೋ ಅಲ್ಲಿಯವರೆಗೆ ವಿಸ್ತರಿಸಬೇಕು ಎಂದು ಸಂಘವು ಭಾವಿಸುತ್ತದೆ” ಎಂದು ಹೇಳಿದರು.

“ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಎಂಬ ವಿಡಿಯೋ ಹರಿದಾಡುತ್ತಿದ್ದು, ಈ ಬಗ್ಗೆ ಹೊರಗಡೆ ಮಾತನಾಡುವಂತಿಲ್ಲ. ಈಗ ಇದು ಸಂಪೂರ್ಣ ಸುಳ್ಳು; ಸಂವಿಧಾನದ ಪ್ರಕಾರವೇ ಎಲ್ಲ ಮೀಸಲಾತಿಗಳನ್ನು ಸಂಘವು ಮೊದಲಿನಿಂದಲೂ ಬೆಂಬಲಿಸುತ್ತಾ ಬಂದಿದೆ. ಮೊದಲಿನಿಂದಲೂ ಸುಳ್ಳು ವಿಡಿಯೋಗಳನ್ನು ಹರಿಬಿಡುತ್ತಿದ್ದಾರೆ” ಎಂದರು.

“ಸಮಾಜದಲ್ಲಿ ತಾರತಮ್ಯ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಕಳೆದ ವರ್ಷ ನಾಗ್ಪುರದಲ್ಲಿ ಹೇಳಿದ್ದರು. ಅಗೋಚರವಾಗಿದ್ದರೂ ಸಮಾಜದಲ್ಲಿ ತಾರತಮ್ಯವಿದೆ ಎಂದು ಅವರು ಒಪ್ಪಿಕೊಂಡಿದ್ದರು.

ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ರಾಹುಲ್ ವಾಗ್ದಾಳಿ

ಮೀಸಲಾತಿ ಸೇರಿದಂತೆ ಹಲವು ವಿಷಯಗಳಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ವಾಗ್ದಾಳಿ ನಡೆಸುತ್ತಿದ್ದು, ಇತ್ತೀಚೆಗೆ ವಯನಾಡ್‌ನಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದ ವೈವಿಧ್ಯತೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದ್ದರು. ಈಗ ಜನರು ತಮ್ಮ ಧರ್ಮವನ್ನು ಆಚರಿಸಲು ಅಥವಾ ಅವರ ಸಂಪ್ರದಾಯಗಳನ್ನು ಅನುಸರಿಸಲು ಹೆದರುತ್ತಿದ್ದಾರೆ ಎಂದು ಹೇಳಿದ್ದರು.

ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದ ವೈವಿಧ್ಯತೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷವು ಭಾರತದ ಸಂವಿಧಾನವನ್ನು ಬದಲಾಯಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರ ಸಮುದಾಯ, ಧರ್ಮ ಮತ್ತು ರಾಜ್ಯವನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯರನ್ನು ರಕ್ಷಿಸುವುದು ಕಾಂಗ್ರೆಸ್‌ನ ಪವಿತ್ರ ಕರ್ತವ್ಯ ಎಂದು ಅವರು ಹೇಳಿದರು.

ಇದನ್ನೂ ಓದಿ; ಮೋದಿ ತನ್ನ ‘ಉದ್ಯಮಿ ಮಿತ್ರರಿ’ಗಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ಧಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

0
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ 2019ಕ್ಕೆ ಹೋಲಿಕೆ ಮಾಡಿದರೆ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ. ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿ ಕೇವಲ ಓರ್ವ ಮುಸ್ಲಿಂ...