Homeಮುಖಪುಟ"ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ" : ವಿವಾದ ಸ್ವರೂಪ ಪಡೆದ...

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ಕೊಡುವವರೆಗೆ ಮೀಸಲಾತಿ ಮುಂದುವರಿಯುತ್ತದೆ” : ವಿವಾದ ಸ್ವರೂಪ ಪಡೆದ ಐಎಎಸ್ ಅಧಿಕಾರಿಯ ಹೇಳಿಕೆ

- Advertisement -
- Advertisement -

ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘ ಎಜೆಎಕೆಎಸ್ ಪ್ರಾಂತೀಯ ಅಧ್ಯಕ್ಷ ಹಾಗೂ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ.

“ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಅವಳು ಅವನೊಂದಿಗೆ ಸಂಬಂಧ ಹೊಂದಲು ಅನುಮತಿಸುವವರೆಗೆ ಮೀಸಲಾತಿ ಮುಂದುವರಿಯುತ್ತದೆ” ಎಂದು ಭಾನುವಾರ (ನ.23) ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

View this post on Instagram

A post shared by Mews.in (@mewsinsta)

ಈ ಹೇಳಿಕೆಯ ವಿಡಿಯೋ ಸೋಮವಾರ (ನ.24) ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಂಘಟನೆಗಳು, ಐಎಎಸ್ ಅಧಿಕಾರಿಯ ಹೇಳಿಕೆ ‘ಅಸಭ್ಯ, ಜಾತಿವಾದಿ ಮತ್ತು ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಅತ್ಯಂತ ಅವಮಾನಕರ” ಎಂದು ಟೀಕಿಸಿವೆ. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.

“ಬ್ರಾಹ್ಮಣ ಹೆಣ್ಣುಮಕ್ಕಳ ಬಗ್ಗೆ ಅತ್ಯಂತ ಅಸಭ್ಯ ಹೇಳಿಕೆ ನೀಡಿರುವ ಅಧಿಕಾರಿಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಬೇಕು. ಎಫ್‌ಐಆರ್ ದಾಖಲಿಸದಿದ್ದರೆ, ಇಡೀ ಬ್ರಾಹ್ಮಣ ಸಮಾಜವು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಅಖಿಲ ಭಾರತ ಬ್ರಾಹ್ಮಣ ಸಮಾಜದ ರಾಜ್ಯಾಧ್ಯಕ್ಷ ಪುಷ್ಪೇಂದ್ರ ಮಿಶ್ರಾ ಹೇಳಿದ್ದಾರೆ.

ಐಎಎಸ್ ಅಧಿಕಾರಿಯ ಹೇಳಿಕೆ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸುತ್ತದೆ. ಈ ಕಾರಣಕ್ಕೆ ಅವರ ವಿರುದ್ಧ ಕಠಿಣ ಕ್ರಮ ಇನ್ನಷ್ಟು ಮುಖ್ಯವಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.

ಮಧ್ಯಪ್ರದೇಶ ಸಚಿವಾಲಯ ಸೇವಾ ಅಧಿಕಾರಿಗಳು-ನೌಕರರ ಸಂಘದ ನಾಯಕ, ಸುಧೀರ್ ನಾಯಕ್ ಐಎಎಸ್ ಅಧಿಕಾರಿಯ ಹೇಳಿಕೆಯನ್ನು ‘ಸಾಮಾನ್ಯ ವರ್ಗದ ಜನರಿಗೆ ಅತ್ಯಂತ ಆಕ್ಷೇಪಾರ್ಹ ಮತ್ತು ಅವಮಾನಕರ’ ಎಂದು ಕರೆದಿದ್ದು, ನಾಗರಿಕ ಸೇವಾ (ನಡತೆ) ನಿಯಮಗಳ ಅಡಿಯಲ್ಲಿ ವರ್ಮಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮೂಲತಃ ವರ್ಮಾ ಅವರು ಮಧ್ಯಪ್ರದೇಶ ಸರ್ಕಾರದ ಒಬ್ಬ ಅಧಿಕಾರಿ. ಅವರಿಗೆ ವಿವಾದಗಳು ಹೊಸತಲ್ಲ. 2021-22ರಲ್ಲಿ ವರ್ಮಾ ವಿರುದ್ದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಆ ಕೇಸ್‌ನಿಂದ ತಪ್ಪಿಸಿಕೊಳ್ಳಲು ವರ್ಮಾ ನಕಲಿ ನ್ಯಾಯಾಲಯದ ಆದೇಶಗಳನ್ನು ರಚಿಸಿದ್ದರು. ಅದಕ್ಕೆ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಸಹಿ ಹಾಕಿ ಕೇಸ್ ಗೆದ್ದಂತೆ ಬಿಂಬಿಸಿದ್ದರು. ಯಾವ ನ್ಯಾಯಾಧೀಶರ ಹೆಸರಿನಲ್ಲಿ ಸಹಿ ಹಾಕಲಾಗಿತ್ತೋ, ಆ ನ್ಯಾಯಾಧೀಶರೇ ಗಮನಿಸಿ, “ಇದು ನನ್ನ ಸಹಿ ಅಲ್ಲ, ನಾನು ಇಂಥ ಆದೇಶ ಕೊಟ್ಟಿಲ್ಲ” ಎಂದು ಪೊಲೀಸ್ ದೂರು ದಾಖಲಿಸಿದ್ದರು. ಅಂತಿಮವಾಗಿ ಪೊಲೀಸರು ವರ್ಮಾ ಅವರನ್ನು ಬಂಧಿಸಿದ್ದರು.

ಪ್ರಸ್ತುತ ಐಎಎಸ್ ಅಧಿಕಾರಿಯಾಗಿರುವ ವರ್ಮಾ, ರಾಜ್ಯ ಆಡಳಿತ ಕೇಡರ್‌ನಿಂದ ಭಾರತೀಯ ಆಡಳಿತ ಸೇವೆ (ಐಎಎಸ್) ಗೆ ಬಡ್ತಿ ಪಡೆಯಲು ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದೂ ಹೇಳಲಾಗ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...