Homeಮುಖಪುಟ’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

’ರಿಸರ್ವ್ ಬ್ಯಾಂಕ್ ಆಫ್‌ ಕೈಲಾಸ’ದ ಕರೆನ್ಸಿ ಬಿಡುಗಡೆ ಮಾಡಿದ ನಿತ್ಯಾನಂದ!

ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಕೈಲಾಸ ಎಂಬ ಹಿಂದೂ ರಾಷ್ಟ್ರವನ್ನು ಕಟ್ಟಿಕೊಂಡಿದ್ದಾಗಿ ಹೇಳಿಕೊಂಡಿದ್ದ ವಿವಾದಾತ್ಮಕ ವ್ಯಕ್ತಿ ನಿತ್ಯಾನಂದ, ಇದೀಗ ತನ್ನ ದೇಶದ ರಿಸರ್ವ್ ಬ್ಯಾಂಕಿನ ಕರೆನ್ಸಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸದ ಕರೆನ್ಸಿಯನ್ನು ಬಿಡುಗಡೆಗೊಳಿಸುವುದಾಗಿ ನಿತ್ಯಾನಂದ ವಾರಗಳ ಹಿಂದೆ ಹೇಳಿಕೊಂಡಿದ್ದರು. ಇದೀಗ ಇಂದು ನೋಟನ್ನು ಬಿಡುಗಡೆ ಮಾಡಲಾಗಿದೆ ಎಂದು ಫೇಸ್ಬುಕ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಹಿಳೆಯರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಹುಡುಕಾಟ ನಡೆಸುತ್ತಿದೆ. ಇವರ ವಿರುದ್ಧ ಭಾರತದಲ್ಲಿ ಹತ್ತಾರು ಪ್ರಕರಣಗಳ ವಿಚಾರಣೆ ಬಾಕಿ ಇವೆ. ನಿತ್ಯಾನಂದ ನೇಪಾಳದ ಮೂಲಕ ಭಾರತದಿಂದ ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.


ಕೈಲಾಸ ಎಂಬುದು ಸ್ವತಂತ್ಯ್ರ ದೇಶವಾಗಿದ್ದು, ಇಲ್ಲಿಗೆ ನಾನೇ ಪ್ರಧಾನಿ. ಇಲ್ಲಿ ಪೊಲೀಸ್ ಕೋರ್ಟ್ ವ್ಯವಸ್ಥೆ ಇರಲಿದೆ. ಇಲ್ಲಿಗೆ ಆಗಮಿಸುವ ಭಕ್ತರಿಗೆ ಶಿಕ್ಷಣ ಮತ್ತು ವೈದ್ಯಕೀಯ ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿಕೊಂಡಿದ್ದರು.

ಇಂದು ಕರೆನ್ಸಿ ಬಿಡುಗಡೆ ಮಾಡಿ ಫೇಸ್ಬುಕ್ನಲ್ಲಿ ಬರಹವೊಂದನ್ನು ಪ್ರಕಟಿಸಿರುವ ನಿತ್ಯಾನಂದ, “ಕೈಲಾಸದ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಕೈಲಾಸದ ರಿಸರ್ವ್ ಬ್ಯಾಂಕ್‌ಅನ್ನು ಗಣಪತಿ, ಪರಮಾಶಿವ ಮತ್ತು ಗುರುಗಳ ಪಾದಕ್ಕೆ ಸಮರ್ಪಿಸುತ್ತಿದ್ದೇವೆ. ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶ, ಜಗತ್ಗುರು ಮಹಾಸನ್ನೀಧನಂ ಅವರ ದೈವಿಕ ಪವಿತ್ರ ಭಗವಾನ್ ನಿತ್ಯಾನಂದ ಪರಮಾಶಿವಂ!

On the auspicious occasion of Ganesha Chaturti in KAILASA, the Reserve Bank of KAILASA offers at the feet of Ganapati,…

Posted by KAILASA's HDH Nithyananda Paramashivam on Friday, August 21, 2020

ಕೈಲಾಸಾ ಮತ್ತು ಅದರ ಸನ್ಯಾಸಿಗಳ ತಂಡವು 100 ಕ್ಕೂ ಹೆಚ್ಚು ಪುಸ್ತಕ, 360 ಲೇಖನಗಳು ಮತ್ತು ಸಂಶೋಧನಾ ಪ್ರಬಂಧಗಳನ್ನು ಒಳಗೊಂಡ ಹಿಂದೂ ಆರ್ಥಿಕ ನೀತಿಗಳ ಬಗ್ಗೆ ವ್ಯಾಪಕ ಸಂಶೋಧನೆ ಮತ್ತು ಅಧ್ಯಯನವನ್ನು ಮಾಡಿದೆ. ಅಲ್ಲದೆ, ಕೈಲಾಸಾದ ಕರೆನ್ಸಿಗಳನ್ನು ಆಚರಣಾತ್ಮಕವಾಗಿ ಇಂದು ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.


ಓದಿ: ಅಮಿತ್‌ ಶಾ ಹೇಳಿದ್ದು ಒಂದು ಸುಳ್ಳು, ಅಮಿತ್‌ ಶಾ ಬಗ್ಗೆನೇ ಬಂತು ಮತ್ತೊಂದು ಸುಳ್ಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...