Homeಕರ್ನಾಟಕಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ಕೊರೊನಾದಿಂದ ದೇವರೆ ಕಾಪಾಡಬೇಕು ಎಂಬ ಆರೋಗ್ಯ ಸಚಿವರ ಹೇಳಿಕೆಯನ್ಗು ಕಾಂಗ್ರೆಸ್, ಆಮ್ಆದ್ಮಿ ಸೇರಿದಂತೆ ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದೆ.

- Advertisement -
- Advertisement -

ಕೊರೊನಾದಿಂದ ನಮ್ಮನ್ನು ದೇವರೆ ಕಾಪಾಡಬೇಕು ಎಂದಿರುವ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಕೊರೊನಾದಿಂದ ಜನರನ್ನು ಕಾಪಾಡಲು ಸಾಧ್ಯವಾಗದಿದ್ದರೆ ರಾಜಿನಾಮೆ ನೀಡಿ ಎಂದು ತಿರುಗೇಟು ನೀಡಿದ್ದಾರೆ.

’ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ, ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ, ಅಗಸ್ಟ್ ಮತ್ತು ಸೆಪ್ಟಂಬರ್ ನಲ್ಲಿ ಪೀಕ್ ಮುಟ್ಟುವ ಸಾಧ್ಯತೆ ಇದೆ, ಇದರಿಂದ ದೇವರೇ ನಮ್ಮನ್ನು ಕಾಪಾಡಬೇಕು’ ಎಂದು ಶ್ರೀರಾಮುಲು ನಿನ್ನೆ ಹೇಳಿದ್ದರು.

ರಾಮುಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್‌, “ಶ್ರೀರಾಮುಲು ಅವರ ಹೇಳಿಕೆಯಿಂದ ಇಡೀ ರಾಜ್ಯ ತಲ್ಲಣಗೊಂಡಿದೆ. ಅಧಿಕಾರಕ್ಕಾಗಿ ಬಹಳ ಶ್ರಮ ವಹಿಸಿ ಸರ್ಕಾರ ರಚನೆ ಮಾಡಿದ್ದಾರೆ. ಈಗ ಕೋವಿಡ್ ವಿಚಾರದಲ್ಲಿ ನಾವು ಏನು ಮಾಡಲಿಕ್ಕೆ ಆಗುವುದಿಲ್ಲ ದೇವರೇ ಕಾಪಾಡಬೇಕು ಅಂತಾ ಮುಖ್ಯಮಂತ್ರಿಗಳ ತಂಡ ಹೇಳುತ್ತಿದೆ. ಇದು ಕೇವಲ ಶ್ರೀರಾಮುಲು ಅವರ ಹೇಳಿಕೆಯಲ್ಲ. ಅವರು ಸರ್ಕಾರದ ಧ್ವನಿಯಾಗಿ ಈ ಮಾತನ್ನು ಹೇಳಿದ್ದಾರೆ. ಈ ಹೇಳಿಕೆ ನೀಡಿದ ಮರುಕ್ಷಣದಿಂದಲೇ ಬಿಜೆಪಿ ಅಧಿಕಾರದಲ್ಲಿರಲು ಸಾಧ್ಯವಿಲ್ಲ. ಕೊರೋನಾ ವಿಚಾರದಲ್ಲಿ ಜನರನ್ನು ದೇವರು ಕಾಪಾಡಬೇಕಾದರೆ, ನೀವು ಯಾಕೆ ಅಧಿಕಾರದಲ್ಲಿ ಇರಬೇಕು. ಜನರನ್ನು ನಿಮ್ಮಿಂದ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀರಾಮುಲು ನೈತಿಕ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಲಿ: ಆಮ್‌ಆದ್ಮಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

”ಆರೋಗ್ಯ ಸಚಿವರಾಗಿ ಧೈರ್ಯವನ್ನು ನೀಡುವ ಬದಲಾಗಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆಯಿಂದ ರಾಜ್ಯದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಇಂತಹ ಆರೋಗ್ಯ ಸಂದಿಗ್ಧತೆಯನ್ನು ನಿಭಾಯಿಸುವಲ್ಲಿ ಸ್ವತಃ ಆರೋಗ್ಯ ಸಚಿವರೇ ಸಂಪೂರ್ಣ ಸೋತು ಕೈಚೆಲ್ಲಿರುವ ಲಕ್ಷಣಗಳು ಗೋಚರಿಸುತ್ತಿವೆ” ಎಂದು ಆಮ್‌ಆದ್ಮಿ ರಾಜ್ಯ ಸಂಚಾಲಕ ಪೃತ್ವಿ ರೆಡ್ಡಿ ಹೇಳಿದ್ದಾರೆ.

ಅಲ್ಲದೆ ಆ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದ ಜನತೆಯ ಸಂಪೂರ್ಣ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಆರೋಗ್ಯ ಸಚಿವ ಶ್ರೀರಾಮುಲು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.


ಓದಿ: ಕಾಂಗ್ರೆಸ್‍ಗೆ ಇತಿಹಾಸವಿದೆ, ಬಿಜೆಪಿಗಿಲ್ಲ; ಹಾಗಾಗಿ ಅವರು ಸುಳ್ಳನ್ನ ಆಶ್ರಯಿಸಿದ್ದಾರೆ; ಡಿಕೆ ಶಿವಕುಮಾರ್‌‌


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...