Homeಕರ್ನಾಟಕ'ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು' - ಯಡಿಯೂರಪ್ಪ ಎಚ್ಚರಿಕೆ

‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ

- Advertisement -
- Advertisement -

ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ, ತಕ್ಷಣವೇ ರಾಜೀನಾಮೆ ಸಲ್ಲಿಸುವಂತೆ ಅಬಕಾರಿ ಸಚಿವ ಎಚ್. ನಾಗೇಶ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ನಡೆದ ಸಂಪುಟ ಸಭೆಯಲ್ಲಿಯೇ ಸೂಚನೆ ನೀಡಿದ್ದಾರೆ.

“ಸಂಜೆಯೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಪುಟ ಸಭೆಗೂ ಮುನ್ನ ಸಂಪುಟಕ್ಕೆ 7 ನೂತನ ಶಾಸಕರನ್ನು ಸೇರಿಸಿಕೊಳ್ಳುವ ಬಗ್ಗೆ ಯಡಿಯೂರಪ್ಪ ಪಟ್ಟಿ ಪ್ರಕಟಿಸಿದ್ದರು. ನಾಗೇಶ್ ಸಂಪುಟ ಸಭೆಗೆ ಹಾಜರಾಗಿದ್ದರು‌. ಅದಕ್ಕೂ ಮೊದಲೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ಈಗಾಗಲೇ ಬಿಜೆಪಿ ಪಾಳಯದಲ್ಲಿ ಮುನಿಸು ಆರಂಭವಾಗಿದ್ದು, ಸಚಿವಾಕಾಂಕ್ಷಿಗಳು ಒಬ್ಬೊಬ್ಬರಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ”ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ. ಅದು ನನ್ನ ಅಪರಾಧ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

“ಇದು ಬೆಂಗಳೂರು-ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು” ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.


ಇದನ್ನೂ ಓದಿ: ಜೋ ಬೈಡೆನ್ ಪ್ರಮಾಣವಚನ ಸ್ವೀಕಾರ ಹಿನ್ನೆಲೆ: ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಟ್ರಂಪ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...