Homeಮುಖಪುಟಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

ಸದಸ್ಯರ ರಾಜೀನಾಮೆ ವಿಚಾರ: ನಿಮ್ಮ‌ ಆಲೋಚನೆಗಳನ್ನು ನನಗೆ ಕಳುಹಿಸಿ ಎಂದ ಕಮಲ್ ಹಾಸನ್

- Advertisement -
- Advertisement -

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಇತ್ತಿಚೆಗೆ ಮುಕ್ತಾಯಗೊಂಡ ತಮಿಳುನಾಡು ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲುವಲ್ಲಿಯೂ ವಿಫಲವಾಗಿದೆ. ಇತ್ತ ಪಕ್ಷದ ಸದಸ್ಯರು ಸಾಲು ಸಾಲು ರಾಜೀನಾಮೆ ಸಲ್ಲಿಸುತ್ತಿದ್ದು, ಸದಸ್ಯರು ತಮ್ಮ ಆಲೋಚನೆಗಳನ್ನು ತನಗೆ ಕಳುಹಿಸುವಂತೆ ಕಮಲ್ ಹಾಸನ್  ಕೇಳಿಕೊಂಡಿದ್ದಾರೆ.

ಕೊಯಮತ್ತೂರು (ದಕ್ಷಿಣ) ಕ್ಷೇತ್ರದಿಂದ ಸ್ಫರ್ಧಿಸಿದ್ದ ಎಂಎನ್‌ಎಂ ಸಂಸ್ಥಾಪಕ ಕಮಲ್ ಹಾಸನ್ ಅಲ್ಲಿ ಸೋಲನುಭವಿಸಿದ್ದರು. ಸಂಘಟನೆಯಲ್ಲಿ “ಪ್ರಜಾಪ್ರಭುತ್ವ” ಕೊರತೆಯಿದೆ ಎಂದು ಆರೋಪಿಸಿ ಪಕ್ಷದ ಉಪಾಧ್ಯಕ್ಷ ಆರ್.ಮಹೇಂದ್ರನ್ ಹುದ್ದೆ ತ್ಯಜಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಮಹೇಂದ್ರನ್ ಅವರನ್ನು ಅನುಸರಿಸಿ, ಇತರ ಆರು ಮಂದಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಪತ್ರಗಳನ್ನು ಕಳುಹಿಸಿದ್ದಾರೆ. ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ತಮ್ಮ ಆಲೋಚನೆಗಳನ್ನು ನನಗೆ ಮೇಲ್ ಮಾಡಿ ತಿಳಿಸುವಂತೆ ಪಕ್ಷದ ಸದಸ್ಯರಲ್ಲಿ ಕಮಲ್ ಹಾಸನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ಸದಸ್ಯರ ರಾಜೀನಾಮೆ ಹಿನ್ನೆಲೆ ಪಕ್ಷದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಈಗೀನ ಪರಿಸ್ಥಿತಿ ಮತ್ತು ಉದ್ದೇಶಿತ ಪಿತೂರಿಗಳಿಗೆ ಅನುಗುಣವಾಗಿ ನಮ್ಮ ಗುರಿಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಒತ್ತಿ ಹೇಳಿದ್ದಾರೆ.

ಕೊಯಮತ್ತೂರಿನ ಸಿಂಗನಲ್ಲೂರ್ ಕ್ಷೇತ್ರದಿಂದ ಸ್ಪರ್ಧಿಸಿದ ಮಹೇಂದ್ರನ್, ಪಕ್ಷದಲ್ಲಿರುವ ಕೆಲವು ಸಲಹೆಗಾರರನ್ನು ದೂಷಿಸಿದ್ದಾರೆ. ಜೊತೆಗೆ ಕಮಲ್ ಹಸನ್ ಅವರು ಪಕ್ಷವನ್ನು ನಡೆಸುವ ವಿಧಾನವು ಸರಿಯಿಲ್ಲ ಎಂದು ಆರೋಪಿಸಿದ್ದಾರೆ.

“ತಮಿಳುನಾಡಿಗೆ ಬದಲಾವಣೆ ತರುವ ಉದ್ದೇಶದಿಂದ ನಮ್ಮ ಪಕ್ಷವು ಏಪ್ರಿಲ್ 6 ರಂದು ನಡೆದ ಮೊದಲ ವಿಧಾನಸಭಾ ಚುನಾವಣೆಯನ್ನು ಎದುರಿಸಿದೆ.  ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

“ಕ್ಷೇತ್ರದಲ್ಲಿ ಶತ್ರುಗಳ ಜೊತೆಗೆ ಪಕ್ಷದಲ್ಲಿ ದ್ರೋಹಿಗಳು ಇದ್ದಾರೆ ಎಂದು ನಮಗೆ ತಿಳಿದಿದೆ. ಪಕ್ಷದಿಂದ ದ್ರೋಹಿಗಳನ್ನು ತೆಗೆಯಲು ಸರ್ವಾನುಮತದ ಕೋರಸ್ ಇತ್ತು. ಈ ಪಟ್ಟಿಯ ಮೊದಲ ಸಾಲಿನಲ್ಲಿ ಡಾ. ಆರ್.ಮಹೇಂದ್ರನ್ ಇದ್ದರು. ಮಹೇಂದ್ರನ್ ಅವರು ತಮ್ಮ ಅಪ್ರಾಮಾಣಿಕತೆ ಮತ್ತು ಅದಕ್ಷತೆಯನ್ನು ಮರೆಮಾಚಲು ಇತರರನ್ನು ದೂಷಿಸಲು ಮತ್ತು ಸಹಾನುಭೂತಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ನಟ ಕಮಲ್ ಹಾಸನ್‌ ಅವರ ಎಂಎನ್‌ಎಂ ತಮಿಳುನಾಡಿನ 234 ವಿಧಾನಸಭಾ ಸ್ಥಾನಗಳಲ್ಲಿ 154 ರಲ್ಲಿ ಸ್ಪರ್ಧಿಸಿತ್ತು. ಉಳಿದ 80 ಸ್ಥಾನಗಳಲ್ಲಿ ಎಂಎನ್‌ಎಂನ ಎರಡು ಮೈತ್ರಿ ಪಾಲುದಾರಾದ, ಆರ್.ಶರತ್‌ಕುಮಾರ್ ನೇತೃತ್ವದ ಎಐಎಸ್ಎಂಕೆ ಮತ್ತು ಟಿ.ಆರ್.ಪರಿವೇಂದ್ರ ಅವರ ಐಜೆಕೆ ತಲಾ 40 ಸ್ಥಾನಗಳಿಗೆ ಸ್ಪರ್ಧಿಸಿದ್ದವು.

ಸದ್ಯ ತಮಿಳುನಾಡಿನಲ್ಲಿ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ರಾಜ್ಯದಲ್ಲಿ ಬಹುಮತ ಪಡೆದು ಒಂದು ದಶಕದ ನಂತರ ಅಧಿಕಾರಕ್ಕೆ ಮರಳಿದೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...