Homeಮುಖಪುಟಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ರಾಜೀನಾಮೆ - ಕಾರಣವೇನು ಗೊತ್ತೇ?

ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ರಾಜೀನಾಮೆ – ಕಾರಣವೇನು ಗೊತ್ತೇ?

ಆದಿವಾಸಿ ನಾಯಕರೂ ಆಗಿರುವ ಮನ್ಸುಖ್ ಎರಡು ದಿನಗಳ ಹಿಂದೆ ಪ್ರಧಾನಿಗೆ ಪತ್ರ ಬರೆದಿದ್ದರು

- Advertisement -
- Advertisement -

ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಅಧಿಸೂಚನೆಯನ್ನು ವಾಪಸ್ ಪಡೆಯುವಂತೆ ಕೋರಿ ಪ್ರಧಾನಿಗೆ ಪತ್ರ ಬರೆದಿದ್ದ ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ಮನ್ಸುಖ್ ವಾಸವ್ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸರ್ದಾರ್ ಪಟೇಲ್‌ರ ಏಕತಾ ಪ್ರತಿಮೆಯ ಸುತ್ತಲಿನ 121 ಗ್ರಾಮಗಳ ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಆದಿವಾಸಿ ನಾಯಕರೂ ಆಗಿರುವ ಮನ್ಸುಖ್ ಎರಡು ದಿನಗಳ ಹಿಂದೆ ಪ್ರಧಾನಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ:ಬಿಜೆಪಿ ನಾಯಕರನ್ನೇ ‘ಆಪರೇಷನ್’ ಮಾಡಲಿರುವ ಎನ್‌ಸಿಪಿ: ಮಹಾ ಡಿಸಿಎಂ ಅಜಿತ್ ಪವಾರ್‌

ತಮ್ಮ ರಾಜೀನಾಮೆ ಪತ್ರವನ್ನು ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಾಟೀಲ್ ಅವರಿಗೆ ನೀಡಿದ್ದಾರೆ. ಪತ್ರದಲ್ಲಿ, ಮುಂಬರುವ ಬಜೆಟ್ ಅಧಿವೇಶನದ ವೇಳೆ ತಮ್ಮ ಸಂಸದ ಸ್ಥಾನಕ್ಕೆ ಕೂಡಾ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ. ಪತ್ರದಲ್ಲಿ, “ನಾನು ನಿಭಾಯಿಸಬಲ್ಲದ್ದಕ್ಕಿಂತ ಹೆಚ್ಚಿನದನ್ನು ಬಿಜೆಪಿ ನನಗೆ ನೀಡಿದೆ. ಇದಕ್ಕಾಗಿ ನಾನು ಪಕ್ಷ ಮತ್ತು ಪಕ್ಷದ ಕೇಂದ್ರದ ಮುಖಂಡರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಪಕ್ಷಕ್ಕೆ ನಾನು ನಿಷ್ಠನಾಗಿದ್ದೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಅಂತಿಮವಾಗಿ, ನಾನು ಮನುಷ್ಯನಾಗಿದ್ದು, ತಪ್ಪುಗಳು ತಿಳಿಯದೆ ನಡೆಯುತ್ತವೆ. ನನ್ನ ತಪ್ಪು ಪಕ್ಷಕ್ಕೆ ಹಾನಿಯಾಗದಂತೆ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕಾಗಿ ಪಕ್ಷವು ನನ್ನನ್ನು ಕ್ಷಮಿಸುತ್ತದೆ. ಬಜೆಟ್ ಅಧಿವೇಶನದಲ್ಲಿ ನಾನು ಸ್ಪೀಕರ್ ಅವರನ್ನು ಖುದ್ದಾಗಿ ಭೇಟಿಯಾಗಿ, ನನ್ನ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಈಗಾಗಲೇ ಶೂಲ್ಪನೇಶ್ವರ್ ವನ್ಯಜೀವಿ ಧಾಮದ ಸುತ್ತಲಿನ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಘೋಷಿಸುವ ಅಂತಿಮ ಅಧಿಸೂಚನೆಯ ಕುರಿತಂತೆ ನರ್ಮದಾ ಜಿಲ್ಲೆಯ ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಧಿಸೂಚನೆಯ ನೆಪದಲ್ಲಿ ಅಧಿಕಾರಿಗಳು ಆದಿವಾಸಿಗಳ ಖಾಸಗಿ ಜಮೀನುಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಆರೋಪಗಳು ಕೇಳಿಬರುತ್ತಿದೆ.

ಇದನ್ನೂ ಓದಿ: ತಮಿಳುನಾಡು: ಕಮಲ್ ಹಾಸನ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ಸೇರ್ಪಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...