ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರಿಂದ ಬೇಸತ್ತು ಅಭಿಮಾನಿಯೊಬ್ಬ ಸಾವನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.
ಗ್ರಾಮದ ರಾಜಪ್ಪ (ರವಿ) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಆಗಿದ್ದು, ಈ ಕುರಿತು ಯಡಿಯೂರಪ್ಪನವರು ಸಂತಾಪು ಸೂಚಿಸಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಯಾರೂ ಅತಿರೇಕಕ್ಕೆ ಹೋಗಬಾರದೆಂದು ಮನವಿ ಮಾಡಿದ್ದಾರೆ.
ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.(1/2)
— B.S. Yediyurappa (@BSYBJP) July 27, 2021
“ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಅವರು ಮನವಿ ಮಾಡಿದ್ದಾರೆ.
ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104
ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!


