ಮುಡಾ ಅವ್ಯವಹಾರ ವಿಚಾರದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲದ ಕಾರಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪುನರುಚ್ಚರಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಬರೀ ಊಹಾಪೋಹ. ಬಿಜೆಪಿ ನಾಯಕರು ಮಾತ್ರ ನನ್ನ ಪದಚ್ಯತಿಗೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳು ಅಥವಾ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರೆ, ನನ್ನ ಪದಚ್ಯುತಿ ಊಹಾಪೋಹಗಳು ಪ್ರಾರಂಭವಾಗುತ್ತವೆ … ಹಿರಿಯ ಸಚಿವರು ಭೇಟಿಯಾದಾಗ ನಾನು ರಾಜೀನಾಮೆ ನೀಡುತ್ತೇನೆ ಎಂಬ ವದಂತಿಗಳೂ ಪ್ರಾರಂಭವಾಗುತ್ತವೆ, ”ಎಂದು ಸಿಎಂ ಹೇಳಿದರು.
ಇದನ್ನೂಓದಿ: ಪ್ರವಾದಿ ಮುಹಮ್ಮದರ ಕುರಿತು ದ್ವೇಷ ಭಾಷಣ : ಯತಿ ನರಸಿಂಗಾನಂದ ಬಂಧನ
ಬಿಜೆಪಿಯವರ ಸುಳ್ಳು ಆರೋಪಗಳನ್ನು ಆಧರಿಸಿ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಮಗೆ ಪಕ್ಷದ ಹೈಕಮಾಂಡ್ ಮತ್ತು ಸಚಿವ ಸಂಪುಟದ ಬೆಂಬಲವಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
“ನಾನು ಯಾವುದೇ ಅಕ್ರಮ ಮಾಡಿಲ್ಲ ಎಂದಾದರೆ ನಾನೇಕೆ ರಾಜೀನಾಮೆ ನೀಡಬೇಕು? ಇನ್ನು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕೂಡ ನನ್ನ ಪದಚ್ಯುತಿಗೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ… ಮಾಜಿ ಸಚಿವ ಜಿ.ಟಿ.ದೇವೇಗೌಡ ಕೂಡ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನಾನು ರಾಜೀನಾಮೆ ನೀಡಬೇಕೆಂದು ಬಿಜೆಪಿಯವರಷ್ಟೆ ಬಯಸುತ್ತಿದ್ದಾರೆ,” ಎಂದು ಹೇಳಿದರು.
ನಂತರ ಮಾನ್ವಿಯಲ್ಲಿ ನಡೆದ ಸ್ವಾಭಿಮಾನ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿಎಂ, ಸದಾ ಪದಚ್ಯುತಿಗಾಗಿ ಒತ್ತಾಯಿಸುವ ಬಿಜೆಪಿ ನಾಯಕರ ಧೋರಣೆಯಿಂದ ಬೇಸತ್ತು ಹೋಗಿದ್ದಾಗಿ ಹೇಳಿದ್ದು, “ಆದರೆ ನಾನು ನಿಮ್ಮೆಲ್ಲರಿಗಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ. ಮಹಾತ್ಮ ಗಾಂಧೀಜಿಯವರು ‘ಒಳಗಿನ ಧ್ವನಿ ಎಲ್ಲಕ್ಕಿಂತ ಶ್ರೇಷ್ಠ’ ಎಂದು ಹೇಳಿದ್ದಾರೆ. ನನ್ನ ಆತ್ಮಸಾಕ್ಷಿಯು ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ರೈತ-ಕಾರ್ಮಿಕ ಹಿತ ರಕ್ಷಣಾ ಸಮಿತಿ ಮಲೆನಾಡು: ಪತ್ರಿಕಾಗೋಷ್ಠಿ


