Homeಕರೋನಾ ತಲ್ಲಣ#ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

#ResignModi ಹ್ಯಾಷ್‌ಟ್ಯಾಗ್‌ ನಿರ್ಬಂಧಿಸಿ ಟೀಕೆಗೊಳಗಾದ ಫೇಸ್‌ಬುಕ್: ಟೀಕೆ ನಂತರ ಎಚ್ಚೆತ್ತು ಮರುಸ್ಥಾಪನೆ

- Advertisement -
- Advertisement -

ಕಳೆದ 15 ದಿನಗಳಿಂದ ಸತತವಾಗಿ ಟ್ರೆಡಿಂಗ್‌ನಲ್ಲಿದ್ದ, ಕೋಟ್ಯಾಂತರ ಟ್ವೀಟ್‌ಗಳು, ಫೇಸ್‌ಬುಕ್ ಪೋಸ್ಟ್‌ಗಳು ದಾಖಲಾಗಿದ್ದ #ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಮತ್ತು ಅದರ ಹೆಸರಿನಲ್ಲಿ ದಾಖಲಾದ ಎಲ್ಲಾ ಪೋಸ್ಟ್‌ಗಳನ್ನು ಬುಧವಾರ ಫೇಸ್‌ಬುಕ್ ಇಂಡಿಯಾ ಬ್ಲಾಕ್ ಮಾಡಿತ್ತು. ಫೇಸ್‌ಬುಕ್ ಆಳುವ ಸರ್ಕಾರವನ್ನು ರಕ್ಷಿಸಲು ಮುಂದಾಗಿದೆ, ಇದು ಸೆನ್ಸಾರ್ ಶಿಪ್ ಅಲ್ಲವೇ? ಎಂಬ ವ್ಯಾಪಕ ಟೀಕೆಗಳು ಬಂದ ನಂತರ ಫೇಸ್‌ಬುಕ್ #ResignModi ಹ್ಯಾಷ್‌ಟ್ಯಾಗ್‌ ಅನ್ನು ಮರುಸ್ಥಾಪಿಸಿದೆ. ಇದೊಂದು ‘ಮಿಸ್ಟೇಕ್’ ಎಂದ ಕಂಪನಿ ಒಪ್ಪಿಕೊಂಡಿದೆ.

ವಾರದ ಹಿಂದೆಯಷ್ಟೇ ಟ್ವಿಟರ್ ಸಹ #ResignModi ಹ್ಯಾಷ್‌ಟ್ಯಾಗ್‌ ಬಳಸಿ ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯವನ್ನು ಟೀಕಿಸಿದ್ದ ಹಲವಾರು ಪೋಸ್ಟ್‌ಗಳನ್ನು ಬ್ಲಾಕ್ ಮಾಡುವಂತೆ ಸರ್ಕಾರವು ಟ್ವಿಟರ್ ಅನ್ನು ಕೇಳಿಕೊಂಡಿತ್ತು. ಅದರಂತೆ ಟ್ವಿಟರ್ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿ ತೀವ್ರ ಟೀಕೆಗೆ ಒಳಗಾಗಿತ್ತು. ಈಗ ಆ ಸಾಲಿಗೆ ಫೇಸ್‌ಬುಕ್ ಸಹ ಸೇರಿಕೊಂಡಿದೆ.

ಮೋದಿ ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಪೋಸ್ಟ್‌ಗಳನ್ನು ಫೇಸ್‌ಬುಕ್ ನಿರ್ಬಂಧಿಸಿದ ಕೂಡಲೇ ಅದರ ಮೇಲೆ ಟೀಕಾಪ್ರಹಾರ ನಡೆಯಿತು. ಈ ರೀತಿ ಅಧಿಕಾರ ಬಳಸಿ ಜನಾಭಿಪ್ರಾಯ ತಡೆಯುವುದು ಹೇಡಿಗಳ ಕೆಲಸ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಕೇಳಿಬಂತು. ಇದೇ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಇಂದು ಅಂತಿಮ ಹಂತದ ಮತದಾನ ನಡೆಯುತ್ತಿರುವ ವೇಳೆಯಲ್ಲಿ ಈ ರೀತಿಯ ನಿರ್ಬಂಧಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು.

ಕೇಂದ್ರ ಸರ್ಕಾರದ ಆಜ್ಞೆಯ ಮೇರೆಗೆ ಈ ಪೋಸ್ಟ್‌ಗಳನ್ನು ನಿರ್ಬಂಧಿಸಿಲ್ಲ. ಇದು ತಾತ್ಕಾಲಿಕ ತಪ್ಪಿನಿಂದ ಸಂಭವಿಸಿದೆ ಎಂದು ಫೇಸ್‌ಬುಕ್ ಸ್ಪಷ್ಟೀಕರಣ ನೀಡಿದ್ದು ಮತ್ತೆ ಆ ಹ್ಯಾಷ್‌ಟ್ಯಾಗ್ ಅನ್ನು ಮರುಸ್ಥಾಪಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈಗ ಮತ್ತೆ #ResignModi ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದ್ದು, ಜನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ಇಂದು 3.79 ಲಕ್ಷ ಪ್ರಕರಣಗಳು ದಾಖಲಾಗಿವೆ. ಆದರೆ ಮೋದಿ ಸರ್ಕಾರ #ResignModi ಹ್ಯಾಷ್‌ಟ್ಯಾಗ್‌ಗಳನ್ನು ತೆಗೆದುಹಾಕುವಂತೆ ಹೋರಾಡುತ್ತಿದೆ. ಮೋದಿಯವರು ತಮ್ಮ ಆದ್ಯತೆಗಳನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ” ಎಂದು ಸ್ವಾತಿ ಚತುರ್ವೇದಿಯವರು ಟೀಕಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: ‘ಮೋದಿ ರಾಜೀನಾಮೆ ನೀಡಿ’ ಟ್ವಿಟರ್‌ ಟ್ರೆಂಡಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...