Homeಮುಖಪುಟಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

- Advertisement -
- Advertisement -

ಲೈಂಗಿಕ ಕಿರುಕುಳಕ್ಕೆ ವಿರೋಧಿಸಿದಳು ಎಂಬ ಕಾರಣಕ್ಕೆ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ 18 ವರ್ಷದ ದಲಿತ ಯುವತಿಯನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ದೆಹಲಿಗೆ ಸ್ಥಳಾಂತರಿಸಲಾಗಿದ್ದು, ಎಣ್ಣೆ ಗಿರಣಿ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಸಹೋದರ ನೀಡಿದ ದೂರಿನ ಪ್ರಕಾರ, ಆತನ ಕುಟುಂಬದ ಸದಸ್ಯರು ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು, ಸಂದೀಪ್ ಕಿರುಕುಳ ನೀಡಿದಾಗ ಆತನ ಸಹೋದರಿ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಆಕೆ ಪ್ರತಿರೋಧ ತೋರಿದಾಗ ಆರೋಪಿಗಳು ಜಾತಿ ನಿಂದನೆ ಮಾಡಿದ್ದಾರೆ. ನಂತರ ಅವರು ಅವಳನ್ನು ಬಿಸಿ ಎಣ್ಣೆ ತುಂಬಿದ್ದ ಕಡಾಯಿಗೆ ತಳ್ಳಿದರು ಎಂದು ದೂರು ನೀಡಿದ್ದಾರೆ.

ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ತನ್ನ ಹೇಳಿಕೆ ದಾಖಲಿಸಿದ್ದು, ‘ಆರೋಪಿಯು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ. ನಂತರ, ಎಣ್ಣೆ ತುಂಬಿದ್ದ ಕಡಾಯಿಗೆ ತಳ್ಳುವ ಮೊದಲು ಅವಾಚ್ಯ ಪದಗಳಿಂದ ನಿಂದಿಸಿದನು’ ಎಂದು ಹೇಳಿದ್ದಾಳೆ.

ಯುವತಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಭಾಗ ಸುಟ್ಟಹೋಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಹಾನಿಯಾಗಿವೆ ಎಂದು ತಿಳಿದುಬಂದಿದೆ.

ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ, ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಚೌಧರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read