Homeಮುಖಪುಟಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

- Advertisement -
- Advertisement -

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು.

ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಯಿಂದ ತೆಗೆದುಹಾಕುವ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದ ಗೊಗೊಯ್, ಸಂಸತ್ತಿನ ವಾತಾವರಣವು ಈಗ ಹೇಗಾಗಿದೆಯೆಂದರೆ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲುಯ ಅವಕಾಶವೇ ನೀಡಿಲ್ಲ. ಏಕೆಂದರೆ, ದೇಶದ ನಾಯಕತ್ವ ದುರ್ಬಲವಾಗಿದೆ ಎಂದರು.

ಸ್ಪೀಕರ್ ವಿರುದ್ದದ ವಿಪಕ್ಷಗಳ ನಿರ್ಣಯದ ಕುರಿತು ಮತ್ತಷ್ಟು ಮಾತನಾಡಿದ ಗೊಗೊಯ್, “ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಮಾತನಾಡಲು ಬಯಸಿದಾಗ, ಅವರನ್ನು ಸ್ಪೀಕರ್, ಸಭಾಧ್ಯಕ್ಷರ ಸಮಿತಿಯ ಸದಸ್ಯರು ಮತ್ತು ಆಡಳಿತ ಪಕ್ಷದ ಹಿರಿಯ ಸದಸ್ಯರು ಸೇರಿ ಸುಮಾರು 20 ಬಾರಿ ತಡೆದಿದ್ದಾರೆ ಎಂದು ಹೇಳಿದರು.

ಅವರಿಗೆ (ವಿಪಕ್ಷ ನಾಯಕ) ಪೂರ್ವಯೋಜಿತ ರೀತಿಯಲ್ಲಿ ಅಡ್ಡಿಪಡಿಸಲಾಯಿತು. ಸ್ಪೀಕರ್ ಅವರು ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಸದನ ಮತ್ತು ದೇಶದ ಜನರು ತಿಳಿದುಕೊಳ್ಳಲೇಬೇಕಾದ ಕೆಲವು ನಿರ್ಣಾಯಕ ವಿಷಯಗಳನ್ನು ಮಂಡಿಸಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕರನ್ನು ಪದೇ ಪದೇ ತಡೆಯಲಾಯಿತು ಎಂದರು.

ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪ್ರಕಟಗೊಳ್ಳದ ಪುಸ್ತಕದಲ್ಲಿನ ಕೆಲವು ಉಲ್ಲೇಖಗಳ ಬಗ್ಗೆ ಮಾತನಾಡಲು ಬಯಸಿದ್ದರು. ವರದಿಗಳ ಪ್ರಕಾರ, ಆ ಪುಸ್ತಕದಲ್ಲಿ ನರವಾಣೆ ಅವರು ರಾಜಕೀಯ ನಾಯಕತ್ವದಿಂದ ನಿರ್ದೇಶನಗಳನ್ನು ಪಡೆಯುವ ಬಗ್ಗೆ ಪ್ರಸ್ತಾಪಿಸಿದ್ದರು ಮತ್ತು ದೇಶದ ಮುಖ್ಯಸ್ಥರು ಅವರಿಗೆ “ನಿಮಗೆ ಯಾವುದು ಸರಿ ಎನಿಸುತ್ತದೆಯೋ ಅದನ್ನೇ ಮಾಡಿ” ಎಂದು ಹೇಳಿದ್ದರು ಎನ್ನಲಾಗಿದೆ. ಈ ವಿಷಯದ ಕುರಿತು ಮಾತನಾಡಲು ರಾಹುಲ್ ಗಾಂಧಿಯವರಿಗೆ ಅವಕಾಶ ನೀಡಿಲ್ಲ ಎಂದು ಗೊಗೊಯ್ ಹೇಳಿದರು.

ಈ ಹಂತದಲ್ಲಿ, ಸ್ಪೀಕರ್ ಪೀಠದಲ್ಲಿದ್ದ ಜಗದಾಂಬಿಕಾ ಪಾಲ್ ಅವರು, ಬಿರ್ಲಾ ಅವರ ವಿರುದ್ಧ ನಿರ್ಣಯವನ್ನು ತರಲು ಇರುವ ನಿರ್ದಿಷ್ಟ ಕಾರಣಗಳಿಗೆ ಮಾತ್ರ ಸೀಮಿತವಾಗಿ ಮಾತನಾಡುವಂತೆ ಗೊಗೊಯ್ ಅವರಿಗೆ ಸೂಚಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಧ್ಯಪ್ರವೇಶಿಸಿ, “ಇದು ಸ್ಪೀಕರ್ ಅವರ ಕುರಿತಾದ ಚರ್ಚೆಯಾಗಿದೆ. ಒಂದು ವೇಳೆ ವಿರೋಧ ಪಕ್ಷದವರು ಇತರ ವಿಷಯಗಳ ಬಗ್ಗೆ ಮಾತನಾಡಿದರೆ, ನಂತರ ನಾವು ಉತ್ತರಿಸುವಾಗ ಅವರು ಅಡ್ಡಿಪಡಿಸಬಾರದು ಎಂದು ಹೇಳಿದರು.

ಇದಕ್ಕೆ ತಿರುಗೇಟು ನೀಡಿದ ಗೊಗೊಯ್, ಸಂಶೋಧನಾ ವರದಿಗಳ ಪ್ರಕಾರ ಸಂಸತ್ತಿನ ಕಲಾಪಗಳ ಪ್ರತಿಗಳನ್ನು ಪರಿಶೀಲಿಸಿದರೆ, ವಿರೋಧ ಪಕ್ಷದ ಸದಸ್ಯರಿಗೆ ಅತಿ ಹೆಚ್ಚು ಬಾರಿ ಅಡ್ಡಿಪಡಿಸಿರುವುದು ಕಿರಣ್ ರಿಜಿಜು ಅವರೇ ಎಂಬುದು ತಿಳಿಯುತ್ತದೆ ಎಂದರು.

ಇದಕ್ಕೆ ಗೃಹ ಸಚಿವ ಅಮಿತ್ ಶಾ ಅವರು ಚುಟುಕಾಗಿ ಪ್ರತಿಕ್ರಿಯಿಸುತ್ತಾ, “ರಿಜಿಜು ಅವರು ಅತಿ ಹೆಚ್ಚು ಬಾರಿ ಅಡ್ಡಿಪಡಿಸಿದ್ದಾರೆ ಎಂಬುದು ನಿಜ, ಆದರೆ ಪ್ರಸ್ತುತ ಇರುವಂತಹ ವಿರೋಧ ಪಕ್ಷ ಈ ಹಿಂದೆ ಎಂದೂ ಇರಲಿಲ್ಲ ಎಂದು ಲೇವಡಿ ಮಾಡಿದರು.

ಸತತ ಅಡೆತಡೆಗಳ ನಂತರ ತಮ್ಮ ಭಾಷಣವನ್ನು ಮುಂದುವರಿಸಿದ ಗೌರವ್ ಗೊಗೊಯ್, “ಕಳೆದ ಫೆಬ್ರವರಿಯಲ್ಲಿ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಉದ್ಯಮಿಯೊಬ್ಬರ ವಿರುದ್ಧ ನಡೆಯುತ್ತಿರುವ ತನಿಖೆಯ ವಿಷಯವನ್ನು ಪ್ರಸ್ತಾಪಿಸಲು ಬಯಸಿದ್ದರು. ಈ ತನಿಖೆಯಲ್ಲಿ ಭಾರತದ ಸಚಿವರೊಬ್ಬರ ಹೆಸರನ್ನು ಸಹ ಉಲ್ಲೇಖಿಸಲಾಗಿದೆ, ಆದರೆ ಆ ವಿಷಯದ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದರು.

ರಾಹುಲ್ ಗಾಂಧಿಯವರು ಭಾರತದೊಂದಿಗೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕದ ನಡುವೆ ನಡೆಯುತ್ತಿರುವ ವ್ಯಾಪಾರ ಒಪ್ಪಂದಗಳ ಬಗ್ಗೆಯೂ ಮಾತನಾಡಲು ಬಯಸಿದ್ದರು ಎಂದು ಗೊಗೊಯ್ ತಿಳಿಸಿದರು.

ಭಾರತ ಅಮೆರಿಕದೊಂದಿಗೆ ಇಂತಹ ಒಪ್ಪಂದಕ್ಕೆ ಧಾವಿಸಲು ಕಾರಣವೇನು ಮತ್ತು ನಮ್ಮ ರೈತರಿಗೆ ಹಾನಿಕಾರಕವಾಗುವಂತಹ ಸೌಲಭ್ಯಗಳನ್ನು ಅಮೆರಿಕಗೆ ನೀಡಲು ಕಾರಣವೇನು ಎಂದು ಗಾಂಧಿಯವರು ಪ್ರಶ್ನಿಸಿದ್ದರು ಎಂದು ಗೊಗೊಯ್ ಹೇಳಿದರು.

ವಿರೋಧ ಪಕ್ಷದ ನಾಯಕರು ಪ್ರಮುಖ ವಿಷಯಗಳನ್ನು ಬೆಳಕಿಗೆ ತರಲು ಬಯಸಿದಾಗ, ಸ್ಪೀಕರ್ ಅವರು ಪುರಾವೆಗಳನ್ನು ಒದಗಿಸುವಂತೆ ಒತ್ತಾಯಿಸಿದರು ಮತ್ತು ವಿರೋಧ ಪಕ್ಷದ ನಾಯಕರು ಅದಕ್ಕೆ ಒಪ್ಪಿಕೊಂಡರು. ಆದರೂ, ಆಡಳಿತ ಪಕ್ಷದ ಸದಸ್ಯರು ಪದೇ ಪದೇ ಅದನ್ನು ವಿರೋಧಿಸಿದರು ಮತ್ತು ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಇದಕ್ಕೂ ಮೊದಲು, ಗೊಗೊಯ್ ಅವರು ನಬಮ್ ರೆಬಿಯಾ ವರ್ಸಸ್ ಉಪ ಸ್ಪೀಕರ್ ಪ್ರಕರಣವನ್ನು ಉಲ್ಲೇಖಿಸಿ, ಸ್ಪೀಕರ್ “ಉನ್ನತ ಸ್ವಾತಂತ್ರ್ಯ, ವಸ್ತುನಿಷ್ಠತೆ, ನಿಷ್ಕಳಂಕ ನ್ಯಾಯಯುತತೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸಂಪೂರ್ಣ ನಿಷ್ಪಕ್ಷಪಾತತೆಯನ್ನು” ಹೊಂದಿರಬೇಕು ಎಂಬುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ ಎಂದು ತಿಳಿಸಿದರು.

ನಾನು ಕೇಳಲು ಬಯಸುವುದೇನೆಂದರೆ, ಸ್ಪೀಕರ್ ಅವರು ಸಭಾಧ್ಯಕ್ಷರ ಸಮಿತಿಯನ್ನು ನೇಮಕ ಮಾಡಿದ್ದಾರೆ. ಆದರೆ, ಸ್ಪೀಕರ್ ಪದಚ್ಯುತಿ ನಿರ್ಣಯದ ಮೇಲಿನ ಈ ನಡಾವಳಿಗಳ ಅಧ್ಯಕ್ಷತೆಯನ್ನು ಯಾರು ವಹಿಸಬೇಕು ಎಂದು ನಿರ್ಧರಿಸಿದವರು ಯಾರು? ಈ ಕಲಾಪದ ಅಧ್ಯಕ್ಷತೆ ವಹಿಸಲು ಜಗದಂಬಿಕಾ ಪಾಲ್ ಅವರನ್ನು ನೇಮಕ ಮಾಡಿದವರು ಯಾರು?” ಎಂದು ಗೊಗೊಯ್ ಪ್ರಶ್ನಿಸಿದರು.

ವೈಯಕ್ತಿಕ ಮಟ್ಟದಲ್ಲಿ ಎಲ್ಲಾ ಸದಸ್ಯರು ಓಂ ಬಿರ್ಲಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ, ಆದ್ದರಿಂದಲೇ ಅವರ ವಿರುದ್ಧ ಈ ನಿರ್ಣಯವನ್ನು ತರಬೇಕಾಗಿ ಬಂದಿರುವುದು ವಿರೋಧ ಪಕ್ಷದ ಸದಸ್ಯರಿಗೂ ಬೇಸರ ತಂದಿದೆ ಎಂದು ಗೌರವ್ ಗೊಗೊಯ್ ಹೇಳಿದರು.

ಆದರೆ ಸದನದ ಗೌರವವನ್ನು ಕಾಪಾಡುವುದು ಮತ್ತು ಸಂವಿಧಾನವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ರಕ್ಷಿಸುವುದಕ್ಕಾಗಿಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸಂಸದರಾದ ಕೆ. ಸುರೇಶ್, ಮಳ್ಳು ರವಿ ಮತ್ತು ಮೊಹಮ್ಮದ್ ಜಾವೇದ್ ಅವರು ಸ್ಪೀಕರ್ ವಿರುದ್ಧ ನಿರ್ಣಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಸದಸ್ಯರು ಎದ್ದು ನಿಂತು ಬೆಂಬಲ ಸೂಚಿಸಿದ ನಂತರ, ನಿರ್ಣಯವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...