Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

- Advertisement -
- Advertisement -

ಪ್ರವೇಶ ಮತ್ತು ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ವ್ಯಕ್ತಿಗಳಿಗೆ 10% ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಶನಿವಾರ ತಿರಸ್ಕರಿಸಿವೆ ಎಂದು ಪಿಟಿಐ ವರದಿ ಮಾಡಿದೆ.

“ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103 ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರ ಪಕ್ಷವಾದ ಬಿಜೆಪಿ ಸಭೆಯನ್ನು ಬಹಿಷ್ಕರಿಸಿವೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ನೀಡುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು.

ಸಾಂವಿಧಾನಿಕ ಪೀಠದ 3-2 ತೀರ್ಪಿನಲ್ಲಿ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಬೇಲಾ ತ್ರಿವೇದಿ ಮತ್ತು ಜೆಬಿ ಪರ್ದಿವಾಲಾ ಅವರು ಇಡಬ್ಲ್ಯೂಎಸ್‌ ತೀರ್ಪನ್ನು ಎತ್ತಿಹಿಡಿದಿದ್ದರೆ, ತೀರ್ಪಿನ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ರವೀಂದ್ರ ಭಟ್ ಅವರು ಬಹುಮತದ ಅಭಿಪ್ರಾಯವನ್ನು ಒಪ್ಪಲಿಲ್ಲ.

ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಪ್ರಕಟಿಸಿತ್ತು.

“ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ತನ್ನ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಬೇಕು” ಎಂದು ಸಭೆಯಲ್ಲಿ ಸೇರಿದ್ದ ರಾಜಕೀಯ ಪಕ್ಷಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಮೂಲ ಮೌಲ್ಯಗಳನ್ನು ಛಿದ್ರಗೊಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷಗಳು ತಿಳಿಸಿವೆ.

ಇಡಬ್ಲ್ಯೂಎಸ್‌ ಕೋಟಾ ಮತ್ತು ಸುಪ್ರೀಂ ಕೋರ್ಟ್ ತೀರ್ಪು

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿಯನ್ನು ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ, ಆದರೆ ವಾರ್ಷಿಕ ಆದಾಯ 8 ಲಕ್ಷ ರೂ.ಗಳಿಗಿಂತ ಕಡಿಮೆ ಇರುವ ಕುಟುಂಬಗಳಿಗೆ ಇಡಬ್ಲ್ಯೂಎಸ್‌ ಮೀಸಲಾತಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ಪರಿಚಯಿಸಿತು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ತೀರ್ಪು ಮರುಪರಿಶೀಲನೆಗೆ ಅವಕಾಶವಿದೆ: ಜಸ್ಟೀಸ್ ದಾಸ್

ಐದು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಅಥವಾ 1,000 ಚದರ ಅಡಿ ವಸತಿ ಭೂಮಿ ಹೊಂದಿರುವ ಕುಟುಂಬಗಳ ವ್ಯಕ್ತಿಗಳು ಈ ಕೋಟಾಕ್ಕೆ ಅರ್ಹರಾಗಿರುವುದಿಲ್ಲ.

ಸರ್ವೋಚ್ಚ ನ್ಯಾಯಾಲಯದ ಮುಂದೆ ಅರ್ಜಿದಾರರು, ಸಮಾನತೆಯ ಹಕ್ಕು ಮತ್ತು ಮೀಸಲಾತಿಗೆ ಆಧಾರವನ್ನು ಒದಗಿಸುವ 15 ಮತ್ತು 16 ನೇ ವಿಧಿಗಳಿಗೆ ಬದಲಾವಣೆಗಳನ್ನು ಪರಿಚಯಿಸಿದ 103 ನೇ ತಿದ್ದುಪಡಿಯನ್ನು ಪ್ರಶ್ನಿಸಿದ್ದರು.

ಸುಪ್ರೀಂ ಕೋರ್ಟ್‌ನ ಬಹುಮತದ ತೀರ್ಪು 10% ಕೋಟಾದ ಹಂಚಿಕೆಯನ್ನು ಮಾನ್ಯ ಮಾಡಿದೆ. ಈ ತಿದ್ದುಪಡಿಯು ಸಂವಿಧಾನದಲ್ಲಿ ಶಾಸಕಾಂಗಕ್ಕೆ ನೀಡಲಾದ ಅಧಿಕಾರದೊಳಗೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತೊಂದೆಡೆ ಸಂವಿಧಾನವು ಹೊರಗಿಡಲು ಅವಕಾಶ ನೀಡದ ಕಾರಣ ಇಡಬ್ಲ್ಯೂಎಸ್‌ ವ್ಯಾಪ್ತಿಯಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳನ್ನು ಹೊರಗಿಡಲು ಸಾಧ್ಯವಿಲ್ಲ ಎಂದು ಭಿನ್ನಮತದ ತೀರ್ಪು ನೀಡಿದ ನ್ಯಾಯಾಧೀಶರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...