HomeಅಂಕಣಗಳುSIRಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ಎಸ್‌ಐಆರ್ ವಿರುದ್ಧ ಜಾರ್ಖಂಡ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ತಕ್ಷಣ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

- Advertisement -
- Advertisement -

ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜಾರ್ಖಂಡ್ ವಿಧಾನಸಭೆ ಬುಧವಾರ (ನ.25) ನಿರ್ಣಯವೊಂದನ್ನು ಅಂಗೀಕರಿಸಿದೆ. ಧ್ವನಿಮತದ ಮೂಲಕ ಅಂಗೀಕರಿಸಲಾದ ಈ ನಿರ್ಣಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆಗ್ರಹಿಸಲಾಗಿದೆ.

ಈ ನಿರ್ಣಯವನ್ನು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಇತರ ಪ್ರಾಧಿಕಾರಗಳಿಗೆ ಕಳುಹಿಸಲಾಗುವುದು. ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಖಚಿತಪಡಿಸಲು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ರೂಪಿಸುವಂತೆ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

ಜಾರ್ಖಂಡ್ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನ ಬುಧವಾರ ಆರಂಭವಾಗಿದ್ದು, ರಾಜ್ಯದ ಹಣಕಾಸು ಸಚಿವ ರಾಧಾಕೃಷ್ಣ ಕಿಶೋರ್ ಅವರು ಎಸ್‌ಐಆರ್ ವಿರುದ್ಧದ ನಿರ್ಣಯವನ್ನು ಮಂಡಿಸಿದರು. ಬಳಿಕ ಸದನದಲ್ಲಿ ಧ್ವನಿಮತದ ಮೂಲಕ ನಿರ್ಣಯ ಅಂಗೀಕಾರಗೊಂಡಿತು.

ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸಿದ್ದೇಕೆ?

ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ರಾಧಾಕೃಷ್ಣ ಕಿಶೋರ್, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಪ್ರಕ್ರಿಯಾತ್ಮಕ ಸಂಕೀರ್ಣತೆಗಳು, ತಾಂತ್ರಿಕ ಲೋಪಗಳು ಮತ್ತು ದಾಖಲೆಗಳ ಬೇಡಿಕೆಯಿಂದ ಅರ್ಹ ಮತದಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

ಜಾರ್ಖಂಡ್‌ನ ಒಟ್ಟು 2.64 ಕೋಟಿ ಮತದಾರರ ಪೈಕಿ ಕರಡು ಮತದಾರರ ಪಟ್ಟಿಯಲ್ಲಿ ಕೇವಲ 2.21 ಕೋಟಿ ಹೆಸರುಗಳು ಮಾತ್ರ ಸೇರ್ಪಡೆಯಾಗಿವೆ. ಅಂದರೆ, ಸುಮಾರು ಶೇ.16ರಷ್ಟು ಮತದಾರರ ಹೆಸರುಗಳು ಕರಡು ಪಟ್ಟಿಯಿಂದ ಹೊರಗುಳಿದಿವೆ ಎಂದು ರಾಜ್ಯ ಸರ್ಕಾರದ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಕರಡು ಪಟ್ಟಿಯಲ್ಲಿರುವ ಸುಮಾರು ಶೇ.27ರಷ್ಟು ಮತದಾರರಿಗೆ ಅವರ ದಾಖಲೆಗಳಲ್ಲಿ ಅನುಮಾನಾಸ್ಪದ ಅಂಶಗಳಿವೆ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಈ ಪೈಕಿ ಶೇ.75ಕ್ಕೂ ಹೆಚ್ಚು ಪ್ರಕರಣಗಳು ಹೆಸರುಗಳ ಕಾಗುಣಿತ ವ್ಯತ್ಯಾಸ, ಪೋಷಕರ ಹೆಸರುಗಳಲ್ಲಿನ ವ್ಯತ್ಯಾಸ, ವಯಸ್ಸಿನ ಅಂತರ ಹಾಗೂ ಇತರ ತಾರ್ಕಿಕ ವ್ಯತ್ಯಾಸಗಳಿಗೆ ಸಂಬಂಧಿಸಿವೆ ಎಂದು ಸರ್ಕಾರ ತಿಳಿಸಿದೆ.

ಆದಿವಾಸಿಗಳು, ವಲಸೆ ಕಾರ್ಮಿಕರಿಗೆ ದಾಖಲೆಗಳ ಸಮಸ್ಯೆ

ಜಾರ್ಖಂಡ್‌ನ ಸಾಮಾಜಿಕ ಮತ್ತು ಭೌಗೋಳಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಐಆರ್ ಪ್ರಕ್ರಿಯೆ ರೂಪಿಸಬೇಕು ಎಂದು ರಾಜ್ಯ ಸರ್ಕಾರ ನಿರ್ಣಯದಲ್ಲಿ ಒತ್ತಾಯಿಸಿದೆ.

ವಿಶೇಷವಾಗಿ, ಆದಿವಾಸಿ ಸಮುದಾಯಗಳು ಮತ್ತು ವಿಶೇಷ ದುರ್ಬಲ ಬುಡಕಟ್ಟು ಗುಂಪುಗಳು, ಉದ್ಯೋಗಕ್ಕಾಗಿ ದೆಹಲಿ, ಮುಂಬೈ, ಸೂರತ್ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗಿರುವ ಕಾರ್ಮಿಕರು, ಇತರ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ವಯೋವೃದ್ಧರು ಹಾಗೂ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರು ದಾಖಲೆಗಳನ್ನು ಒದಗಿಸುವಲ್ಲಿ ಸಮಸ್ಯೆ ಎದುರಿಸುತ್ತಿವೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.

ಅಲ್ಲದೆ, ಹಲವು ಸರ್ಕಾರಿ ದಾಖಲೆಗಳಲ್ಲಿ ಜನ್ಮದಿನಾಂಕದ ವ್ಯತ್ಯಾಸಗಳಿರುವುದರಿಂದ ಪರಿಶೀಲನೆ ವೇಳೆ ಸಮಸ್ಯೆಗಳು ಎದುರಾಗುತ್ತಿವೆ. ಭೂ ದಾಖಲೆಗಳಾದ ಖತಿಯಾನ್‌ಗಳನ್ನು ಎಸ್‌ಐಆರ್‌ಗೆ ಮಾನ್ಯ ದಾಖಲೆಗಳ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೂ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಸಂವಿಧಾನದ 326ನೇ ವಿಧಿಯ ಉಲ್ಲೇಖ

ಸಂವಿಧಾನದ 326ನೇ ವಿಧಿಯನ್ನು ಉಲ್ಲೇಖಿಸಿರುವ ಜಾರ್ಖಂಡ್ ಸರ್ಕಾರ, ಅರ್ಹ ಮತದಾರರಿಗೆ ಮತದಾನದ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಪ್ರತಿಪಾದಿಸಿದೆ.

ಎಸ್‌ಐಆರ್ ಪ್ರಕ್ರಿಯೆಗೆ ಸರ್ಕಾರ ತಾತ್ವಿಕವಾಗಿ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ, ಅರ್ಹ ಮತದಾರರು ಹೊರಗುಳಿಯದಂತೆ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸರಳ ಹಾಗೂ ಪಾರದರ್ಶಕ ನಿಯಮಗಳನ್ನು ರೂಪಿಸಿದ ಬಳಿಕವೇ ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂಬುದು ಸರ್ಕಾರದ ನಿಲುವಾಗಿದೆ.

ನಿರ್ಣಯಕ್ಕೆ ಬಿಜೆಪಿ ವಿರೋಧ

ಇದೇ ವೇಳೆ, ವಿಧಾನಸಭೆಯ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಮುಖಂಡ ಬಾಬುಲಾಲ್ ಮರಾಂಡಿ ಅವರು ಸರ್ಕಾರದ ನಿರ್ಣಯವನ್ನು ವಿರೋಧಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶ ಹೊಂದಿದೆ. ಆದರೆ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಸುಮಾರು 43 ಲಕ್ಷ ಹೆಸರುಗಳ ಪೈಕಿ 7.63 ಲಕ್ಷ ಮಂದಿ ಮೃತಪಟ್ಟವರು, 15.53 ಲಕ್ಷ ಮಂದಿ ಸ್ಥಳಾಂತರಗೊಂಡವರು, 4.38 ಲಕ್ಷ ಮಂದಿ ನಕಲಿ ಅಥವಾ ದ್ವಿಪ್ರತಿಗಳಾಗಿದ್ದು, 14.50 ಲಕ್ಷ ಮಂದಿ ಪತ್ತೆಯಾಗದವರು ಎಂದು ಮರಾಂಡಿ ಸದನದಲ್ಲಿ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವೇಳೆ ತಂದೆಯ ಹೆಸರು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವ ಕಾರಣಕ್ಕೆ ಸುಮಾರು ಮೂರು ತಿಂಗಳ ಹಸುಗೂಸಿಗೆ ಜನನ ಪ್ರಮಾಣಪತ್ರ ನೀಡಲು ಪಂಚಾಯತ್ ಅಧಿಕಾರಿಗಳು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ರಮ ಬಂಧನ ಆರೋಪ: ಕೇಂದ್ರ, ದೆಹಲಿ ಸರ್ಕಾರಕ್ಕೆ ಸುಪ್ರೀಂ 10 ದಿನಗಳ ಗಡುವು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ಕಳೆದ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಮಗ್ರ...

ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ: ಹ್ಯೂಮನ್ ರೈಟ್ಸ್ ವಾಚ್

ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳ ಕುರಿತು ದಶಕಗಳಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿಗಳನ್ನು ಪ್ರಕಟಿಸುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಭಾರತದ ಪ್ರಸ್ತುತ ರಾಜಕೀಯ ಮತ್ತು...

6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ. ಉಮರ್...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ರೈತರ ಪ್ರತಿಭಟನೆ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕನಿಷ್ಠ ಸಾಕಾಣಿಕೆ ದರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ "ವಿಧಾನ ಸೌಧ ಚಲೋ" ಪ್ರತಿಭಟನೆ...

ರಾಹುಲ್ ಗಾಂಧಿ ವಿರುದ್ಧ ಸಿಬಿಐ, ಇ.ಡಿ ತನಿಖೆಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್...

ಯೋಗೇಶ್ ಗೌಡ ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್: ಎರಡು ವಾರಗಳಲ್ಲಿ ಶರಣಾಗಲು ಆದೇಶ

ನವದೆಹಲಿ: 2016ರ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಎಂಟು ಮಂದಿ ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ...

ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ, ನ.26ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌ಟಿಇ) ರಾಜ್ಯವ್ಯಾಪಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ನಾಳೆ (ನ.26)...

ಉಮರ್ ಖಾಲಿದ್ ಮಧ್ಯಂತರ ಜಾಮೀನು ಮನವಿಗೆ ಸುಪ್ರೀಂ ಕೋರ್ಟ್ ನಕಾರ: ದೆಹಲಿ ಪೊಲೀಸರಿಗೆ ನೋಟಿಸ್, ಮುಖ್ಯ ಅರ್ಜಿಗಳ ವಿಚಾರಣೆ ಬಾಕಿ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಯ ದೊಡ್ಡ ಸಂಚು ಪ್ರಕರಣದಲ್ಲಿ ಯುಎಪಿಎ (UAPA) ಕಾಯ್ದೆಯಡಿ ಬಂಧಿತರಾಗಿರುವ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್...

ಕನ್ನಡ, ಕನ್ನಡಿಗ ಎಂದು ಘೋಷಣೆ ಕೂಗಿದಾಕ್ಷಣ ಸಮಸ್ಯೆಗಳು ಬಗೆಹರಿಯುವುದೇ?

ಮತ್ತೊಂದು ನವೆಂಬರ್, ಅದರ ಜತೆ ಜತೆಗೇ ರಾಜ್ಯೋತ್ಸವದ ಸಂಭ್ರಮ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ರಾಜ್ಯದಾದ್ಯಂತ ಕನ್ನಡದ ಶ್ರೇಷ್ಠತೆಯ ಬಗ್ಗೆ ,ಪ್ರಾಚೀನತೆಯ ಬಗ್ಗೆ ಕರ್ನಾಟಕದ ವೈಭವದ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಭ್ರಮ,...