Homeಮುಖಪುಟಪ್ರಧಾನಿಯನ್ನು ಗೌರವಿಸುತ್ತಾ, ನಮ್ಮ ಸ್ವಾಭಿಮಾನವನ್ನೂ ರಕ್ಷಿಸುತ್ತೇವೆ: ರಾಕೇಶ್ ಟಿಕಾಯತ್ ಸಹೋದರ ನರೇಶ್ ಟಿಕಾಯತ್

ಪ್ರಧಾನಿಯನ್ನು ಗೌರವಿಸುತ್ತಾ, ನಮ್ಮ ಸ್ವಾಭಿಮಾನವನ್ನೂ ರಕ್ಷಿಸುತ್ತೇವೆ: ರಾಕೇಶ್ ಟಿಕಾಯತ್ ಸಹೋದರ ನರೇಶ್ ಟಿಕಾಯತ್

"ಜನವರಿ 26ರಂದು ನಡೆದ ಹಿಂಸಾಚಾರ ಪಿತೂರಿಯ ಭಾಗವಾಗಿತ್ತು. ತ್ರಿವರ್ಣ ಧ್ವಜವು ಎಲ್ಲ ಧ್ವಜಗಳಿಗಿಂತ ಮೇಲಿರುತ್ತದೆ. ಅದರ ಗೌರವಕ್ಕೆ ಧಕ್ಕೆಯಾಗಲು ಎಂದಿಗೂ ಬಿಡುವುದಿಲ್ಲ. ಅಂಥ ಕೆಲಸವನ್ನು ಸಹಿಸುವುದೂ ಇಲ್ಲ" ಎಂದು ಸ್ಪಷ್ಟಪಡಿಸಿದರು.

- Advertisement -
- Advertisement -

“ಪ್ರತಿಭಟನಾ ನಿರತ ರೈತರು ಪ್ರಧಾನಿಯ ಘನತೆಯನ್ನು ಗೌರವಿಸುತ್ತಾರೆ, ಅದರ ಜೊತೆ ತಮ್ಮ ಸ್ವಾಭಿಮಾನವನ್ನೂ ರಕ್ಷಿಸಿಕೊಳ್ಳುತ್ತಾರೆ” ಎಂದು ರೈತ ಮುಖಂಡ ನರೇಶ್ ಟಿಕಾಯತ್ (ರಾಕೇಶ್ ಟಿಕಾಯತ್ ಅವರ ಸಹೋದರ ಮತ್ತು ಬಲಿಯನ್ ಖಾಪ್ ಪಂಚಾಯತ್ ಮುಖಂಡ) ಹೇಳಿದ್ದಾರೆ.

ಗಾಜಿಪುರ ಗಡಿಯಲ್ಲಿ ಮಾತನಾಡಿದ ಅವರು “ನಮಗೆ ಒಂದು ಗೌರವಯುತ ಪರಿಹಾರ ಸಿಗಬೇಕು. ಅಲ್ಲಿವರೆಗೂ ನಾವು ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಎಂಥ ಪರಿಸ್ಥಿತಿಯಲ್ಲೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ” ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

“ನಾವು ಪ್ರಧಾನಿಯವರ ಘನತೆಯನ್ನು ಗೌರವಿಸುತ್ತೇವೆ. ಸರ್ಕಾರ ಎಂದೂ ರೈತರ ಎದುರು ತಲೆಬಾಗಬೇಕೆಂದು ನಾವು ಬಯಸುವುದಿಲ್ಲ. ಆದರೆ ರೈತರ ಸ್ವಾಭಿಮಾನವನ್ನು ರಕ್ಷಿಸುತ್ತೇವೆ. ಸಮಸ್ಯೆಯ ಪರಿಹಾರಕ್ಕಾಗಿ ದಾರಿಯನ್ನು ಹುಡುಕಬೇಕು. ಮಾತುಕತೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ, “ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಕ್ಕೆ ತೋರಿದ ಅಗೌರವದಿಂದ ದೇಶದ ಜನರಿಗೆ ತೀವ್ರ ನೋವಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

“ಜನವರಿ 26ರಂದು ನಡೆದ ಹಿಂಸಾಚಾರ ಪಿತೂರಿಯ ಭಾಗವಾಗಿತ್ತು. ತ್ರಿವರ್ಣ ಧ್ವಜವು ಎಲ್ಲ ಧ್ವಜಗಳಿಗಿಂತ ಮೇಲಿರುತ್ತದೆ. ಅದರ ಗೌರವಕ್ಕೆ ಧಕ್ಕೆಯಾಗಲು ಎಂದಿಗೂ ಬಿಡುವುದಿಲ್ಲ. ಅಂಥ ಕೆಲಸವನ್ನು ಸಹಿಸುವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂದುವರಿದು, “ಸರ್ಕಾರ ಮೊದಲು ನಮ್ಮ ರೈತರನ್ನು ಬಿಡುಗಡೆಗೊಳಿಸಿ, ಮಾತುಕತೆ ಪೂರಕ ವಾತಾವರಣವನ್ನು ಸಿದ್ಧಗೊಳಿಸಬೇಕು” ಎಂದು ಒತ್ತಾಯಿಸಿದರು.

ಟ್ರ್ಯಾಕ್ಟರ್ ಪೆರೇಡ್ ವೇಳೆ ಅಹಿತಕರ ಘಟನೆಗ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರತಿಭಟನಕಾರರ ವಿರುದ್ಧ 40 ಪ್ರಕರಣಗಳನ್ನು ದಾಖಲಿಸಿದ್ದು, 80 ಮಂದಿಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ: ಗಾಂಧಿ ಕೊಂದ ಶಕ್ತಿಗಳೇ ಆಡಳಿತ ಚುಕ್ಕಾಣಿ ಹಿಡಿದಿವೆ: ರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಐತಿಹಾಸಿಕ...