Homeಮುಖಪುಟಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಆರೋಪಿ ಮೇಲಿನ ಕೋಕಾ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಕೈಬಿಟ್ಟಿತ್ತು. ಇದನ್ನು ಸುಪ್ರೀಂ ನಲ್ಲಿ ಗೌರಿ ಸಹೋದರಿ ಕವಿತಾ ಲಂಕೇಶ್ ಪ್ರಶ್ನಿಸಿದ್ದರು.

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಹತ್ಯೆ ಆರೋಪಿಯ ವಿರುದ್ಧ KCOCA ಪ್ರಕರಣವನ್ನು ಕೈಬಿಟ್ಟ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಕೋಕಾ ಮೊಕದ್ದಮೆ ಮರುಸ್ಥಾಪಿಸುವಂತೆ ಇಂದು ಆದೇಶಿಸಿದೆ.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

ಕವಿತಾ ಲಂಕೇಶ್‌ ಪರವಾಗಿ ಹಿರಿಯ ವಕೀಲ ಹುಜೀಫಾ ಅಹ್ಮದಿ ಅವರು ವಾದಿಸಿದ್ದರು. ಆರೋಪಿ ಪರವಾಗಿ ಬಸವ ಪ್ರಭು ಎಸ್ ವಾದಿಸಿದ್ದರು. ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ನ್ಯಾಯಪೀಠವು ಉಭಯ ಕಕ್ಷಿದಾರರ ಪರ ವಾದವನ್ನು ಸೆಪ್ಟಂಬರ್ 21 ರಂದು ಆಲಿಸಿ ಆದೇಶ ಕಾಯ್ದಿರಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, ಪ್ರಕರಣದ ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ವಿಶ್ಲೇಷಿಸದೆ, ಪ್ರಕರಣವನ್ನು ರದ್ದುಗೊಳಿಸಿದೆ. ಹೈಕೋರ್ಟ್ ಈ ವಿಷಯವನ್ನು ಲಘುವಾಗಿ ಪರಿಗಣಿಸಿದೆ ಎಂದು ಹೇಳಿತ್ತು.

ಆರೋಪಿ ಮೋಹನ್ ನಾಯಕ್ ಗೌರಿ ಲಂಕೇಶ್ ಹತ್ಯೆಯಲ್ಲಿ ಯೋಜನೆ ರೂಪಿಸಿ ನೇರ ಭಾಗಿಗಳಾಗಿದ್ದ ಅಮೋಲ್ ಕಾಳೆ ಮತ್ತು ರಾಜೇಶ್ ಬಂಗಾರರ ನಿಕಟವರ್ತಿಯಾಗಿದ್ದಾನೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KCOCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಆ ಸಂದರ್ಭದಲ್ಲಿ ಮೋಹನ್ ನಾಯಕ್ ತನಗೆ ಜಾಮೀನು ನೀಡುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ.

ಇದಕ್ಕೆ ಗೌರಿ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.

ಜುಲೈ 13 ರಂದು ಹೈಕೋರ್ಟ್‌ನ ಜಸ್ಟಿಸ್ ಹರೀಶ್ ಕುಮಾರ್‌ರವರ ಏಕ ಸದಸ್ಯ ಪೀಠ “ಎಸ್‌ಐಟಿ ಸಲ್ಲಿಸಿರುವ ಚಾರ್ಜ್ ಶೀಟ್‌ ಪ್ರಕಾರ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಆದೇಶ ನೀಡಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ಸತ್ಯಗಳು… ಭಾಗ-2

ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...