Homeಮುಖಪುಟಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಮಾಜಿ ಶಾಸಕ ಸೇರಿ ಮೂವರ ಬಂಧನ

- Advertisement -
- Advertisement -

ಇಂಫಾಲ್‌ನ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಮನೆಗಳಿಗೆ ಬೆಂಕಿ ಹಚ್ಚಿದ ನಂತರ ಮತ್ತೆ ಸೋಮವಾರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.

ನ್ಯೂ ಚೆಕ್ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊಸ ಹಿಂಸಾಚಾರವು ನಡೆದಿದೆ. ಈ ಪ್ರದೇಶದಲ್ಲಿ ಕುಕಿಗಳು, ಮೈತಿಗಳು ಮತ್ತು ಇತರ ಜನಾಂಗೀಯ ಗುಂಪುಗಳು ನೆಲೆಸುತ್ತಾರೆ.

ಸೋಮವಾರ ಬೆಳಿಗ್ಗೆ, ಕರ್ಫ್ಯೂ ಸಡಿಲಗೊಂಡಿದ್ದರಿಂದ, ಮಾಜಿ ಶಾಸಕರ ನೇತೃತ್ವದ ತಂಡ ಬಂದೂಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದು ವ್ಯಾಪಾರಸ್ಥರಿಗೆ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಹೇಳದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಮಾಜಿ ಶಾಸಕರೊಬ್ಬರು ಈ ಪಿತೂರಿಯಲ್ಲಿ ಭಾಗಿಯಾಗಿರುವುದು ಅತ್ಯಂತ ದುರದೃಷ್ಟಕರ. ಸಿಂಗಲ್ ಬ್ಯಾರೆಲ್ ಬಂದೂಕುಗಳನ್ನು ಹೊತ್ತ ಇಬ್ಬರು ಶಸ್ತ್ರಸಜ್ಜಿತ ಸಿಬ್ಬಂದಿ ಮಾರಾಟಗಾರರನ್ನು ಬೆದರಿಸಿ ಪ್ರದೇಶವನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ಈ ಇಬ್ಬರನ್ನು ಮತ್ತು ಮಾಜಿ ಶಾಸಕರನ್ನು ವ್ಯಾಪಾರಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು.

”ಈ ಪ್ರದೇಶದಲ್ಲಿ ಚರ್ಚ್ ಕಾಂಪೌಂಡ್ ಒಳಗೆ ಮನೆಗಳು ಇವೆ, ಹಿಂದೆ ಹಿಂಸಾಚಾರ ನಡೆದಾಗ ಅಲ್ಲಿದ್ದವರು ಮನೆ ಬಿಟ್ಟು ಸ್ಥಳಾಂತರಗೊಂಡಿದ್ದಾರೆ. ಇಲ್ಲಿ ಸೇನೆಯನ್ನು ನಿಯೋಜಿಸಲಾಗಿದ್ದರೂ, ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

”ಕೆಲವು ಕಡೆಗಳಲ್ಲಿ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದ ಹಿಂಸಾಚಾರ ಅಥವಾ ಜೀವಹಾನಿಯಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಒಂದುವೇಳೆ ಅಹಿತಕರ ಘಟನೆಗಳು ನಡೆದರೆ, ಈ ಸ್ಥಳಗಳಿಗೆ ತಲುಪಿ, ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುತ್ತವೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಸೋಮವಾರ ನಡೆದ ಘಟನೆಯಿಂದ ಕರ್ಫ್ಯೂ ಸಡಿಲಿಕೆಯ ಸಮಯವನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಕ್ಕೆ ರಾಜ್ಯ ಸರ್ಕಾರವು ಇಳಿಸಿದೆ. ಮೊದಲು ವಿಶ್ರಾಂತಿ ಅವಧಿಯು ಬೆಳಿಗ್ಗೆ 6 ರಿಂದ ಸಂಜೆ 4 ರವರೆಗೆ ಇತ್ತು.

ಭಾನುವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ ಇಂಫಾಲ್ ಪಶ್ಚಿಮದಲ್ಲಿ ಮೂವರು ಗಾಯಗೊಂಡಿದ್ದಾರೆ. ”ಡಬಲ್ ಬ್ಯಾರೆಲ್ ಗನ್‌ಗಳೊಂದಿಗೆ ಸುತ್ತಾಡುತ್ತಿರುವವರನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಸಿಂಗ್ ಹೇಳಿದರು.

ಕಳೆದ 10 ದಿನಗಳಲ್ಲಿ ಮಣಿಪುರದಲ್ಲಿ ಪರಿಸ್ಥಿತಿ ಹೆಚ್ಚಾಗಿ ಶಾಂತಿಯುತವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು ಮತ್ತು ನಿವಾಸಿಗಳು ಶಾಂತವಾಗಿರಲು ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಲು ಒತ್ತಾಯಿಸಿದರು.

ಭಾನುವಾರ, ಮಣಿಪುರ ಗೃಹ ಇಲಾಖೆಯು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣಕ್ಕಾಗಿ ಬಳಸಬಹುದೆಂಬ ಆತಂಕವನ್ನು ಉಲ್ಲೇಖಿಸಿ, ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮೇ 26 ರವರೆಗೆ ವಿಸ್ತರಿಸಿತು.

ಘಟನೆಯ ಹಿನ್ನೆಲೆ

ಮೇ 3 ರಂದು ಮಣಿಪುರ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಮೇ 3 ರಂದು ನಡೆದ ಪ್ರತಿಭಟನೆಯು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಲು ಮೈತಿ ಸಮುದಾಯದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮೈತಿ ಸಮುದಾಯ ರಾಜ್ಯದ ಜನಸಂಖ್ಯೆಯ 60% ರಷ್ಟಿದೆ ಮತ್ತು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆಸಲು ಮೈತಿ ಸಮುದಾಯಗಳಿಗೆ ಅವಕಾಶವಿಲ್ಲ.

ಮತ್ತೊಂದೆಡೆ, ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನವನ್ನು ನೀಡಿದರೆ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ ಎಂದು ಕೆಲವು ಬುಡಕಟ್ಟು ಸಮುದಾಯದವರು ಭಯಪಡುತ್ತಾರೆ.

ಮೇ 3ರಂದು ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು, ಬಹುಸಂಖ್ಯಾತ ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಆ ಬಳಿಕ ಈಶಾನ್ಯ ರಾಜ್ಯದಲ್ಲಿ ಮೊದಲು ಹಿಂಸಾಚಾರ ಪ್ರಾರಂಭವಾಯಿತು.

ಈ ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಈ ಹಿಂದೆ ನಡೆದ ಘರ್ಷಣೆಯಲ್ಲಿ ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು 35,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...