Homeಅಂತರಾಷ್ಟ್ರೀಯನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್...

ನೆತನ್ಯಾಹು ಮನೆ ಮೇಲಿನ ಡ್ರೋನ್ ಉಡಾವಣೆಗೆ ಪ್ರತೀಕಾರ; ಹೆಜ್ಬುಲ್ಲಾ ಗುಪ್ತಚರ ಕೇಂದ್ರ ಕಚೇರಿ ಮೇಲೆ ಇಸ್ರೇಲ್ ದಾಳಿ

- Advertisement -
- Advertisement -

ಬೆಂಜಮಿನ್ ನೆತನ್ಯಾಹು ಮನೆ ಮೇಲಿನ ದಾಳಿಗೆ ಪ್ರತೀಕಾರವಾಗಿ ಲೆಬನಾನಿನ ರಾಜಧಾನಿಯಲ್ಲಿನ ಹೆಜ್ಬೊಲ್ಲಾ ‘ಕಮಾಂಡ್ ಸೆಂಟರ್’ ಮೇಲೆ ಇಸ್ರೇಲ್ ಮರುದಾಳಿ ನಡೆಸಿದೆ. ಇದೇ ಸಂದರ್ಭದಲ್ಲಿ ಗಾಜಾದಲ್ಲಿ ನಡೆದ ಒಂದೇ ವೈಮಾನಿಕ ದಾಳಿಯಲ್ಲಿ 73 ಜನರು ಸಾವನ್ನಪ್ಪಿದ್ದಾರೆ ಸ್ಥಳೀಯ ಆಡಳಿತ ವರದಿ ಮಾಡಿದ್ದಾರೆ.

ಇರಾನ್ ಬೆಂಬಲಿತ ಗುಂಪು ತನ್ನ ನಿವಾಸವನ್ನು ಗುರಿಯಾಗಿಸಿಕೊಂಡು ತನ್ನನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂದು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆರೋಪಿಸಿದ ನಂತರ ಹೆಜ್ಬುಲ್ಲಾದ ದಕ್ಷಿಣ ಬೈರುತ್ ಭದ್ರಕೋಟೆಯ ಮೇಲೆ ದಾಳಿಗಳು ನಡೆದವು.

ಲೆಬನಾನ್‌ನ ಅಧಿಕೃತ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬೈರುತ್‌ನಲ್ಲಿ ಇಸ್ರೇಲ್‌ನ ದಾಳಿಗಳು ಮಸೀದಿ ಮತ್ತು ಆಸ್ಪತ್ರೆಯ ಸಮೀಪವಿರುವ ಹರೆಟ್ ಹ್ರೀಕ್‌ನಲ್ಲಿರುವ ವಸತಿ ಕಟ್ಟಡಕ್ಕೆ ಅಪ್ಪಳಿಸಿದೆ ಎಂದು ಹೇಳಿದೆ.

ಇಸ್ರೇಲಿ ಮಿಲಿಟರಿಯು ಹೆಜ್ಬೊಲ್ಲಾ “ಗುಪ್ತಚರ ಕೇಂದ್ರ ಕಚೇರಿಯ ಕಮಾಂಡ್ ಸೆಂಟರ್” ಮತ್ತು ಬೈರುತ್‌ನಲ್ಲಿನ ಭೂಗತ ಶಸ್ತ್ರಾಸ್ತ್ರ ಸೌಲಭ್ಯವನ್ನು ಹೊಡೆದಿದೆ. ಇತರ ದಾಳಿಗಳಲ್ಲಿ ಮೂರು ಹೆಜ್ಬುಲ್ಲಾ ಉಗ್ರಗಾಮಿಗಳನ್ನು ಕೊಂದಿದೆ ಎಂದು ಹೇಳಿದೆ.

ಲೆಬನಾನ್‌ನಿಂದ ಹಾರಿಸಲಾದ ಸುಮಾರು 70 ಸ್ಪೋಟಕಗಳು ಕೆಲವೇ ನಿಮಿಷಗಳಲ್ಲಿ ಇಸ್ರೇಲ್‌ಗೆ ತಲುಪಿದವು, ಅವುಗಳಲ್ಲಿ ಕೆಲವನ್ನು ಇಸ್ರೇಲ್ ತಡೆದಿದೆ ಎಂದು ಅದು ನಂತರ ಹೇಳಿದೆ.

ಈ ಮಧ್ಯೆ, ಗಾಜಾದ ನಾಗರಿಕ ರಕ್ಷಣಾ ಸಂಸ್ಥೆಯು ವಸತಿ ಪ್ರದೇಶದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯು ಭೂಪ್ರದೇಶದ ಉತ್ತರದ ಬೀಟ್ ಲಾಹಿಯಾದಲ್ಲಿ ಕನಿಷ್ಠ 73 ಪ್ಯಾಲೆಸ್ಟೀನಿಯಾದವರನ್ನು ಕೊಂದಿದೆ ಎಂದು ಹೇಳಿದೆ.

“ನಮ್ಮ ನಾಗರಿಕ ರಕ್ಷಣಾ ಸಿಬ್ಬಂದಿಗಳು 73 ಹುತಾತ್ಮರ ಶವಗಳನ್ನು ಮತ್ತು ಹೆಚ್ಚಿನ ಸಂಖ್ಯೆಯ ಗಾಯಾಳುಗಳನ್ನು ಇಸ್ರೇಲಿ ವಾಯುಪಡೆಯು ವಸತಿ ಪ್ರದೇಶದಿಂದ ಪತ್ತೆಹಚ್ಚಿದೆ. ಉತ್ತರ ಗಾಜಾದ ಬೀಟ್ ಲಾಹಿಯಾದಲ್ಲಿ ಇಸ್ರೇಲ್ ದಾಳಿ ನಡೆಸಿದೆ” ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ‘ಯುದ್ಧ ಇನ್ನೂ ಕೊನೆಗೊಂಡಿಲ್ಲ..’ ಎಂದ ನೆತನ್ಯಾಹು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...