Homeಕರ್ನಾಟಕಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

- Advertisement -
- Advertisement -

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ. 

ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ 10:30 ಕ್ಕೆ ಈ ಘಟನೆ ನಡೆದಿದೆ. ಆರೋಪಿ ಕೆ. ನಾಗೇಶ್ವರ ರಾವ್ (72) ಎಂಬುವವರು ತನ್ನ ಪತ್ನಿ ಸಂಧ್ಯಾ ಶ್ರೀ (65) ಅವರನ್ನು ತಮ್ಮ ಫ್ಲಾಟ್‌ನಲ್ಲಿ ಟವಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇಸ್ರೋದಲ್ಲಿ ತಂಡದ ನಾಯಕರಾಗಿ ಸೇವೆ ಸಲ್ಲಿಸಿದ್ದ ರಾವ್ ಅವರು ಕೆಲವು ಸಮಯದಿಂದ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ತಮ್ಮ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದರು ಮತ್ತು ಆ ಮನಸ್ಥಿತಿಯಲ್ಲಿ, ತೀವ್ರ ಹೆಜ್ಜೆ ಇಡುವ ಮೊದಲು ತಮ್ಮ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ.

“ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದ ನಂತರ, ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ತನ್ನ ನೆರೆಹೊರೆಯವರಲ್ಲಿ ಒಬ್ಬರಿಗೆ ಕರೆ ಮಾಡಿ ತಾನು ಮಾಡಿದ್ದನ್ನು ತಿಳಿಸಿದ್ದಾರೆ. ನೆರೆಹೊರೆಯವರು ತಕ್ಷಣ ಕುಟುಂಬಕ್ಕೆ ತಿಳಿದಿರುವ ವೈದ್ಯರನ್ನು ಸಂಪರ್ಕಿಸಿದ್ದಾರೆ. ಆನಂತರ ವೈದ್ಯರು ಆವಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಸಂಧ್ಯಾ ಶ್ರೀ ಮೃತದೇಹದಲ್ಲಿ ಬಿದ್ದಿರುವುದನ್ನು ಕಂಡು, ರಾವ್ ಅವರನ್ನು ವಶಕ್ಕೆ ಪಡೆದಿದ್ದು,  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.

ಪೊಲೀಸ್ ಮೂಲಗಳು ತಿಳಿಸುವಂತೆ, ದಂಪತಿಗಳು ಆಂಧ್ರಪ್ರದೇಶದ ವಿಜಯವಾಡದವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಅವರ ಮಗಳು ಅಮೆರಿಕದ ನ್ಯೂಜೆರ್ಸಿಯಲ್ಲಿ ವಾಸಿಸುತ್ತಿದ್ದಾರೆ. ವೃದ್ಧ ದಂಪತಿಗಳು ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕುಟುಂಬ ಸದಸ್ಯರಿಗಾಗಿ ಕಾಯಲಾಗಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...