Homeಮುಖಪುಟ'ಇಂಡಿಯಾ' ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

‘ಇಂಡಿಯಾ’ ಅಭ್ಯರ್ಥಿ ಸುದರ್ಶನ್ ರೆಡ್ಡಿ ವಿರುದ್ಧ ಅಮಿತ್ ಶಾ ಹೇಳಿಕೆ: ನಿವೃತ್ತ ನ್ಯಾಯಾಧೀಶರಿಂದ ಖಂಡನೆ

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರ ವಿರುದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್‌ನ ಹಲವು ಮಾಜಿ ನ್ಯಾಯಮೂರ್ತಿಗಳು ಸೇರಿದಂತೆ 18 ನಿವೃತ್ತ ನ್ಯಾಯಾಧೀಶರ ಗುಂಪು ಖಂಡಿಸಿದೆ.

ಅಮಿತ್ ಶಾ ಅವರ ಹೇಳಿಕೆ ‘ದುರದೃಷ್ಟಕರ’ ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ‘ಪೂರ್ವಾಗ್ರಹ ಪೀಡಿತ ತಪ್ಪು ವ್ಯಾಖ್ಯಾನ’ ಎಂದು ಎಂದು ನ್ಯಾಯಾಧೀಶರ ಗುಂಪು ಹೇಳಿದೆ.

“2011ರ ಸಲ್ವಾ ಜುಡುಂ ತೀರ್ಪಿನ ಮೂಲಕ ನ್ಯಾಯಮೂರ್ತಿ ಸುದರ್ಶನ್‌ ರೆಡ್ಡಿ ಅವರು ‘ನಕ್ಸಲಿಸಂ’ ಅನ್ನು ಬೆಂಬಲಿಸಿದ್ದಾರೆ” ಎಂದು ಅಮಿತ್ ಶಾ ಆರೋಪಿಸಿದ್ದರು. “ನ್ಯಾಯಾಲಯವು ಜಾಗೃತ ಚಳವಳಿಯ ವಿರುದ್ಧ ತೀರ್ಪು ನೀಡದಿದ್ದರೆ 2020ರ ವೇಳೆಗೆ ಎಡಪಂಥೀಯ ಉಗ್ರವಾದ ಕೊನೆಗೊಳ್ಳುತ್ತಿತ್ತು” ಎಂದಿದ್ದರು.

ಕೇರಳದಲ್ಲಿ ಮಾತನಾಡಿದ್ದ ಅಮಿತ್ ಶಾ, “ನಕ್ಸಲ್ ವಿರೋಧಿ ಪ್ರಯತ್ನಗಳಿಗೆ ಅಡ್ಡಿಯಾಗುವ ಸಿದ್ಧಾಂತದಿಂದ ಸುದರ್ಶನ್‌ ರೆಡ್ಡಿ ಪ್ರೇರಿತರಾಗಿದ್ದಾರೆ” ಎಂದು ಆರೋಪಿಸಿದ್ದರು.

ನಿವೃತ್ತ ನ್ಯಾಯಾಧೀಶರ ಜಂಟಿ ಹೇಳಿಕೆಯಲ್ಲಿ, “ಸಲ್ವಾ ಜುಡುಂ ತೀರ್ಪು ಯಾವುದೇ ರೀತಿಯಲ್ಲೂ ನಕ್ಸಲಿಸಂ ಅನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಲಾಗಿದೆ. ಅಮಿತ್ ಶಾ ಅವರ ಹೇಳಿಕೆಗಳನ್ನು ‘ನ್ಯಾಯಾಂಗದ ತಾರ್ಕಿಕತೆಯ ವಿರೂಪಗೊಳಿಸುವ ಪ್ರಯತ್ನ” ಎಂದು ಖಂಡಿಸಲಾಗಿದೆ.

“ಹಿರಿಯ ರಾಜಕೀಯ ನಾಯಕರೊಬ್ಬರು ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ನಿರೂಪಿಸುವುದರಿಂದ ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮದನ್ ಬಿ ಲೋಕೂರ್, ಜೆ ಚೆಲಮೇಶ್ವರ್, ಎ.ಕೆ ಪಟ್ನಾಯಕ್, ಅಭಯ್ ಓಕಾ, ವಿಕ್ರಮಜಿತ್ ಸೇನ್, ಗೋಪಾಲ ಗೌಡ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರಾದ ಎಸ್. ಮುರಳೀಧರ್, ಗೋವಿಂದ್ ಮಾಥುರ್, ಸಂಜೀವ್ ಬ್ಯಾನರ್ಜಿ ಮತ್ತು ಅಂಜನಾ ಪ್ರಕಾಶ್ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ರಾಜಕೀಯ ಚರ್ಚೆಯಲ್ಲಿ, ವಿಶೇಷವಾಗಿ ಉನ್ನತ ಸಾಂವಿಧಾನಿಕ ಚುನಾವಣೆಗಳ ಸಮಯದಲ್ಲಿ ಸಂಯಮ ಮತ್ತು ನಾಗರಿಕತೆ ಕಾಪಾಡಿಕೊಳ್ಳಬೇಕು ಎಂದು ಹೇಳಿಕೆಯು ಒತ್ತಾಯಿಸಿದೆ. “ಸೈದ್ಧಾಂತಿಕ ಹೋರಾಟಗಳು ಪ್ರಚಾರಗಳ ಭಾಗವಾಗಿರಬಹುದು. ಆದರೆ, ಅವುಗಳನ್ನು ಘನತೆಯಿಂದ ನಡೆಸಬೇಕು. ಅಶ್ಲೀಲ ಪದಗಳಿಂದ ನಿಂದಿಸುವುದು ಸ್ಪರ್ಧಿಸುತ್ತಿರುವ ಹುದ್ದೆಗಳನ್ನು ಅವಮಾನಿಸುತ್ತದೆ” ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಅಮಿತ್ ಶಾ ಹೇಳಿಕೆಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿ ರೆಡ್ಡಿ ಅವರು, ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. “ಸಲ್ವಾ ಜುಡುಂ ಕುರಿತ ತೀರ್ಪು ಸುಪ್ರೀಂ ಕೋರ್ಟ್‌ನದ್ದು, ನನ್ನೊಬ್ಬನದ್ದೇ ಅಲ್ಲ” ಎಂದು ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿಕೆ ನೀಡುವ ಮೊದಲು ಪೂರ್ಣ ತೀರ್ಪನ್ನು ಓದಿಲ್ಲ ಎಂದನಿಸುತ್ತದೆ” ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಸುದರ್ಶನ್‌ ರೆಡ್ಡಿ ಮತ್ತು ಎಸ್.ಎಸ್ ನಿಜ್ಜರ್ ಅವರು ನೀಡಿದ್ದ 2011ರ ಸುಪ್ರೀಂ ಕೋರ್ಟ್ ತೀರ್ಪು, ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಬುಡಕಟ್ಟು ಯುವಕರು ಮತ್ತು ಮಾಜಿ ನಕ್ಸಲರನ್ನು ವಿಶೇಷ ಪೊಲೀಸ್ ಅಧಿಕಾರಿಗಳಾಗಿ ಬಳಸುವುದು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಛತ್ತೀಸ್‌ಗಢ ಸರ್ಕಾರದಿಂದ ಬೆಂಬಲಿತವಾದ ವಿವಾದಾತ್ಮಕ ನಕ್ಸಲ್ ವಿರೋಧಿ ಪಡೆಯಾದ ಸಲ್ವಾ ಜುಡುಂ ಅನ್ನು ವಿಸರ್ಜಿಸುವಂತೆ ಆದೇಶಿಸಿತ್ತು.

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...