Homeಕರ್ನಾಟಕನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

- Advertisement -
- Advertisement -

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಆಯೋಜಿಸಿದ್ದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಸ್ಛಶದಲ್ಲಿ ಆತಂಕ ಉಂಟಾಗಿದೆ. 

ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ ಕುಳಿತು ಮಾತನಾಡುತ್ತಿದ್ದ ಹೆಗ್ಡೆ ಅವರಿಗೆ ತಲೆ ಸುತ್ತು ಬಂದು, ಕುಳಿತವರು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ನೀರು ಕುಡಿಸಿದರೂ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ. 

ಆ ನಂತರ ಕಾರ್ಯಕ್ರಮಕ್ಕೆ ಬಂದಿದ್ದ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಅವರ ಸರ್ಕಾರಿ ವಾಹನದಲ್ಲಿ ತಕ್ಷಣವೇ ಸಂತೋಷ್‌ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

‘ಮಧುಮೇಹದಿಂದ ಸಂತೋಷ್ ಹೆಗ್ಡೆ ಅವರು ಬಳಲುತ್ತಿದ್ದು, ಏಕಾಏಕಿ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿರುವುದರಿಂದ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...