Homeಮುಖಪುಟಸರ್ಕಾರದ ಹುದ್ದೆಗೆ ನಿವೃತ್ತಿ - ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಆಡಳಿತಾತ್ಮಕ ಬಿಕ್ಕಟ್ಟು ಇನ್ನಷ್ಟು ತೀವ್ರಗೊಂಡಿದೆ. ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ರಾಜಕೀಯ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ, ಪಿಂಚಣಿ ಇಲಾಖೆಗೆ ವರ್ಗಾವಣೆ ಗೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಅದೇ ಸಮಯಕ್ಕೆ ಸಿಎಂ ಮಮತಾ ಬ್ಯಾನರ್ಜಿಯವರು ಅವರನ್ನು ತಮ್ಮ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದಂತೆ ಇಂದು ಬೆಳಗ್ಗೆ 10 ಗಂಟೆಯ ಒಳಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆಗೊಂಡು ಕೇಂದ್ರ ಸರ್ಕಾರದ ಸೇವೆಗೆ ವರದಿ ಮಾಡಿಕೊಳ್ಳಬೇಕಿದ್ದ ಅಲಪಾನ್‌ ಬಂದೋಪಾದ್ಯಾಯ್‌ ತಮ್ಮ ಉದ್ಯೋಗದಿಂದಲೇ ನಿವೃತ್ತಿಗೊಂಡಿದ್ದಾರೆ. ಜೊತೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂದೋಪಾದ್ಯಾಯ ಅವರನ್ನು ತಮ್ಮ ಮಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ವರ್ಗಾವಣೆ ಆದೇಶಕ್ಕೆ ತಿರುಗೇಟು ನೀಡಲು ಮುಂದಾದ ಮಮತಾ ಬ್ಯಾನರ್ಜಿ ತನ್ನ ಮುಖ್ಯ ಕಾರ್ಯದರ್ಶಿಯಾಗಿದ್ದ ಬಂದೋಪಾದ್ಯಾಯ ಅವರನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಮುಂದಾಗಿದ್ದಾರೆ.

ಪಶ್ಚಿಮ ಬಂಗಾಳದ ಈ ರಾಜಕೀಯ ಹೈಡ್ರಾಮಾ ಹಿರಿಯ ಐಎಎಸ್‌ ಅಧಿಕಾರಿ ಬಂದೋಪಾದ್ಯಾಯ ಅವರನ್ನು ರಕ್ಷಿಸುವಂತೆ ಕಾಣುತ್ತಿಲ್ಲ. ಕೇಂದ್ರ ಸರ್ಕಾರ ತನ್ನ ಆದೇಶಕ್ಕೆ ವಿರುದ್ಧ ನಡೆದ ಬಂದೋಪಾದ್ಯಾಯ ಅವರ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಂದೋಪಾದ್ಯಾಯ ಅವರ ವಿರುದ್ಧ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ಅಲಪಾನ್‌ ಬಂದೋಪಾದ್ಯಾಯ್‌ ಅವರ ಸ್ಥಾನಕ್ಕೆ ಹೆ.ಕೆ. ದ್ವಿವೇದಿಯವರು ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಯ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು ಎಂದು ಮಮತಾ ಬ್ಯಾನರ್ಜಿ ಕೇಂದ್ರಕ್ಕೆ 5 ಪುಟಗಳ ಪತ್ರವನ್ನು ಬರೆದಿದ್ದರು. ಇಂದು ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪತ್ರಕ್ಕೆ ಉತ್ತರಿಸಿದೆ.

ಕೇಂದ್ರ ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಲು ನಿರಾಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ನಿವೃತ್ತಿಗೊಳಿಸಿ ಅವರ ಜಾಗಕ್ಕೆ ಹೊಸ ಕಾರ್ಯದರ್ಶಿಯನ್ನು ನೇಮಕ ಮಾಡಿದೆ. ಜೊತೆಗೆ ಹಿಂದಿನ ಮುಖ್ಯಕಾರ್ಯದರ್ಶಿಯನ್ನು ಸರ್ಕಾರದ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ. ಆ ಮೂಲಕ ತಮ್ಮ ಪರವಾಗಿರುವ ಅಧಿಕಾರಿಯನ್ನು ರಕ್ಷಿಸುವ ಪ್ರಯತ್ನವನ್ನು ಮಮತಾ ಬ್ಯಾನರ್ಜಿ ಮಾಡಿದ್ದಾರೆ.

ಈ ಎಲ್ಲ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಿ ಮೋದಿಯವರ ಮೇಲೆ ಆರೋಪದ ಸುರಿಮಳೆಯನ್ನು ಮುಂದುವರೆಸಿದ್ದಾರೆ.

ಇದೊಂದು ರಾಜಕೀಯ ದಾಳಿ. ನಾನು ಇದುವರೆಗೆ ಇಂತಹ ಹೃದಯವಿಲ್ಲದ ಪ್ರಧಾನ ಮಂತ್ರಿಯನ್ನು ನೋಡಿರಲಿಲ್ಲ. ಮುಖ್ಯಮಂತ್ರಿಯ ಮೇಲೆ ದಾಳಿ ನಡೆಸಲು ಪ್ರಧಾನಿ ಮೋದಿ ಬಯಸುತ್ತಾರೆ. ಆ ಕಾರಣದಿಂದ ರಾಜ್ಯದ ಮುಖ್ಯ ಕಾರ್ಯದರ್ಶಿಯ ಮೇಲೆ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಚರ್ಚೆಯನ್ನು ನಡೆಸಲು ಸಿದ್ಧವಿಲ್ಲ. ಯಾಕೆಂದರೆ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಯಾಕೆಂದರೆ ಪ್ರಧಾನಿಯವರು ಮಮತಾ ಬ್ಯಾನರ್ಜಿಯನ್ನು ದ್ವೇಷಿಸುತ್ತಾರೆ ಎನ್ನುವ ಮೂಲಕ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರ ಮೇಲಿನ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

ಕೇಂದ್ರ ಒಂದು ವಿಚಾರವನ್ನು ನೆನಪಿನಲ್ಲಿಟ್ಟುಕೊಳ್ಳಲಿ. ಅಲಪಾನ್‌ ಬಂದೋಪಾದ್ಯಾಯ್‌ ಅವರ ಸೇವಾವಧಿ ಮುಗಿದಿದೆ. ಅವರು ಕೇಂದ್ರದ ಸೇವೆಗೆ ಇನ್ನು ಲಭ್ಯರಿಲ್ಲ. ಚಂಡಮಾರುತ ಮತ್ತು ಕೊರೋನಾ ಸಾಂಕ್ರಾಮಿಕದಿಂದ ನಲುಗಿ ಹೋಗಿರುವ ಪಶ್ಚಿಮ ಬಂಗಾಳಕ್ಕೆ ಬಂದೋಪಾದ್ಯಾಯ್‌ ಅವರ ಸೇವೆಯ ಅವಶ್ಯಕತೆಯಿದೆ. ಅವರು ಸರ್ಕಾರದೊಟ್ಟಿಗೆ ಇನ್ನು ಮುಂದೆ ಕೆಲಸ ಮಾಡುತ್ತಾರೆ. ಬಡವರು ಮತ್ತು ಸಂಕಷ್ಟದಲ್ಲಿರುವ ದೇಶದ, ರಾಜ್ಯದ ಜನರ ಪರವಾಗಿನ ತಮ್ಮ ಕೆಲಸವನ್ನು ಬಂದೋಪಾದ್ಯಾಯ್‌ ಅವರು ಮುಂದುವರೆಸಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ತಮ್ಮ ನಡುವಿನ ರಾಜಕೀಯ ಸಂಘರ್ಷ ಇನ್ನು ಮುಗಿದಿಲ್ಲವೆನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.


ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಕತ್ತರಿಯಲ್ಲಿ‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....