Homeಮುಖಪುಟಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ.ಕಫೀಲ್ ಖಾನ್ ಇತ್ತೀಚೆಗೆ ಬಿಡುಗಡೆಯಾಗಿದ್ದರು. ವೈದ್ಯ ಹುದ್ದೆಯಿಂದ ಅಮಾನತುಗೊಂಡಿದ್ದ ಕಫೀಲ್ ಖಾನ್ ಅವರ ಪರವಾಗಿ ಭಾರತೀಯ ವೈದ್ಯಕೀಯ ಸಂಘವು ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದು, “ಕಫೀಲ್ ಖಾನ್ ಅಮಾನತನ್ನು ಮರು ಪರೀಶೀಲಿಸಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಬೇಕು” ಎಂದು ಹೇಳಿಕೊಂಡಿದೆ.

ನವೆಂಬರ್ 10 ರಂದು ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ವೈದ್ಯಕೀಯ ಸಂಘ, “ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಿಂದ ಕಫೀಲ್‌ ಖಾನ್ ಅವರನ್ನು ಅಮಾನತುಗೊಳಿಸಿರುವ ಕುರಿತು ನಮ್ಮ ಸಂಸ್ಥೆಗೆ ನಮ್ಮದೇ ಸದಸ್ಯರಾದ ಕಫೀಲ್‌ ಖಾನ್ ಅವರಿಂದ ಪತ್ರ ಬಂದಿದ್ದು, ಇದರ ಕುರಿತು ಮರುಪರಿಶೀಲನೆಯನ್ನು ಕೈಗೊಂಡು ಸಹಾನುಭೂತಿಯ ಮೇರೆಗೆ ಅವರ ಮನವಿಯನ್ನು ಪುರಸ್ಕರಿಸಬೇಕೆಂದು ಕೇಳಿಕೊಳ್ಳುತ್ತೇವೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ದುರಂತದ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು. ಆದರೂ ಉತ್ತರ ಪ್ರದೇಶದ ಯೋಗಿ ಸರ್ಕಾರ ಡಾ.ಕಫೀಲ್ ಖಾನ್‌ ಮೇಲೆ ಮರು ತನಿಖೆ ನಡೆಸುವುದಾಗಿ ಹೇಳಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಈಗಲೂ ಸಹ ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಆದರೆ, “ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ” ಆದೇಶಿಸಿತ್ತು.

ಇದನ್ನೂ ಓದಿ: ಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಮಥುರಾ ಜೈಲಿನಿಂದ ಬಿಡುಗಡೆಗೊಂಡ ಅವರು, “ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಈಗಲೂ ನಾನು ದೇಶ ಸೇವೆ ಮಾಡಲು ಸಿದ್ಧನಿದ್ದೇನೆ” ಎಂದಿದ್ದರು.


 

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...