Homeಕರ್ನಾಟಕ‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ತಮ್ಮ ವಸ್ತುಗಳನ್ನು ನಾಶ ಮಾಡಿ ದೌರ್ಜನ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ದ ಬೀದಿಬದಿ ವ್ಯಾಪಾರಿಗಳು ಅನಿರ್ಧಿಷ್ಠಾವಧಿ ಧರಣಿ ಎಚ್ಚರಿಕೆ ನೀಡಿದ್ದಾರೆ

- Advertisement -
- Advertisement -

ಮಂಗಳೂರಿನ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಆರನೇ ದಿನವೂ ಮುಂದುವರೆಸಿದ್ದು, ಇದನ್ನು ಪ್ರತಿಭಟಿಸಿ ಮಂಗಳವಾರದಂದು ವ್ಯಾಪಾರಿಗಳು ನಗರದ ಲಾಲ್‌ಬಾಗ್‌ನಲ್ಲಿರುವ ಪಾಲಿಕೆಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜೊತೆಗೆ ಕಾನೂನು ಮೀರಿ ತೆರವು ಮಾಡಿತ್ತಿರುವ ಪಾಲಿಕೆಯ ವಿರುದ್ದ ಬುಧವಾರದಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿದೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ಇಂದು ಕೂಡಾ ನಗರದ ಮೈದಾನ ರಸ್ತೆಯಲ್ಲಿ ಅಧಿಕಾರಿಗಳು ವ್ಯಾಪಾರಿಗಳ ವಸ್ತುಗಳನ್ನು ನಾಶಪಡಿಸಿದ್ದರು. ಆದರೆ ಇದನ್ನು ವಿರೋಧಿಸಿ ವ್ಯಾಪಾರಿಗಳು ಲಾರಿಯ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದಾರೆ. ಜೊತೆಗೆ ಪಾಲಿಕೆಗೆ ಮುತ್ತಿಗೆ ಹಾಕಿದ್ದು, ತಮ್ಮ ವಸ್ತುಗಳನ್ನು ನಾಶ ಪಡಿಸಿದ ಅಧಿಕಾರಿಗಳ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷಾದ ಬಿ.ಕೆ. ಇಂತಿಯಾಝ್ ಮಾತನಾಡಿ, “ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯಬೇಡಿ, 2012 ರಲ್ಲೂ ಮಹಾನಗರ ಪಾಲಿಕೆ ಇದೇ ರೀತಿ ಮಾಡಿತ್ತು. ಈಗ ಮತ್ತೇ ಅದೇ ರೀತಿ ಮಾಡುತ್ತಿದೆ. ಅಧಿಕಾರಿಗಳಿಗೆ ಹೃದಯವಿದ್ದರೆ ಈ ರೀತಿ ಮಾಡುತ್ತಿರಲಿಲ್ಲ. 2012 ರಲ್ಲಿ ನಾವು ನಿರಂತರವಾಗಿ ಮೂರು ತಿಂಗಳು ಹೋರಾಟ ಮಾಡಿ ಗೆದ್ದಿದ್ದೇವೆ. ಈಗ ಕೂಡಾ ಅನ್ಯಾಯದ ವಿರುದ್ದ ಹೋರಾಡುತ್ತೇವೆ” ಎಂದು ಹೇಳಿದರು.

ಸಂಘದ ಮಾಜಿ ಗೌರವಾಧ್ಯಕ್ಷರಾದ ಸುನಿಲ್‌ ಕುಮಾರ್‌ ಬಜಾಲ್ ಮಾತನಾಡಿ, “ಪಾಲಿಕೆ ಅಧಿಕಾರಿಗಳು ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಮರ್ಯಾದೆಯಿಂದ ವಾಪಾಸು ತಂದು ಕೊಡಬೇಕು ಮತ್ತು ನಾಶ ಮಾಡಿರುವ ವಸ್ತುಗಳಿಗೆ ಪರಿಹಾರ ಕೊಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

ಈ ಮಧ್ಯೆ ಮಹಾನಗರ ಪಾಲಿಕೆಯು ಬೈಕಂಪಾಡಿಯ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ತೆರಳಿದ್ದು, ಅಲ್ಲಿ ವ್ಯಾಪಾರಿ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅವರಿಗೆ ಕಾನೂನಿನ ಪಾಠ ಮಾಡಿದ್ದಾರೆ.

ಕಳೆದ ಶನಿವಾರದಂದು ವ್ಯಾಪಾರಿಗಳನ್ನು ತೆರವುಗೊಳಿಸಲು ಬಂದಿದ್ದ ಪಾಲಿಕೆ ಅಧಿಕಾರಿಗಳನ್ನು ಬೀದಿಬದಿ ವ್ಯಾಪಾರಿಗಳು ತಡೆದಿದ್ದು, ತೆರವು ಕಾರ್ಯಾಚರಣೆ ಮಾಡುವ ಆದೇಶ ಪತ್ರವನ್ನು ಕೇಳಿದ್ದಾರೆ. ಜೊತಗೆ ಸರ್ಕಾರ ನೀಡಿದ ಗುರುತಿನ ಚೀಟಿ ಇರುವ ವ್ಯಾಪಾರಿಗಳ ತೆರವು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೀದಿಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು.

‘ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ನಿರ್ಧಾರವಾಬೇಕಾಗುತ್ತದೆ, ಇದು ಕಾನೂನು’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳಿದ್ದಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ಅಲ್ಲದೆ ಮುಟ್ಟುಗೋಳು ಹಾಕಿಗೊಂಡಿರುವ ವಸ್ತುಗಳನ್ನು ನಾಶಪಡಿಸುತ್ತಿದೆ.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿಲ್ಲ” ಎಂದು ಮುಸ್ತಫಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೀಗ ಸತತವಾಗಿ ಆರನೇ ದಿನವೂ ಪಾಲಿಕೆಯಿಂದ ದಾಳಿ ಮುಂದುವರೆದಿರುವುದರಿಂದ ನಾಳೆಯಿಂದ ಪಾಲಿಕೆ ಮುಂದೆ ಅನಿರ್ಧಿಷ್ಠಾವಧಿ ಧರಣಿ ಕೂರುವುದಾಗಿ ಸಂಘದ ತೀರ್ಮಾನಿಸಿದೆ ಎಂದು ಮುಸ್ತಫಾ ಹೇಳಿದ್ದಾರೆ.

ಇದನ್ನೂ ಓದಿ:ಬೀದಿಬದಿ ವ್ಯಾಪಾರಿಗಳ ಮೇಲೆ ಮಂಗಳೂರು ಪಾಲಿಕೆ ದಾಳಿ: ನಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆ ಎಂದು ವ್ಯಾಪಾರಿಗಳ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...