Homeಮುಖಪುಟದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ - ಕೆಎನ್ಆರ್

ದೆಹಲಿಯಿಂದ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಬದಲಾವಣೆ ಸೂಚನೆ – ಕೆಎನ್ಆರ್

ಮಾತನಾಡಲು ಬಯಸಿದರೂ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಬಂದಿರುವುದು ಸಿಎಂ ಸ್ಥಾನದಿಂದ ಅವರನ್ನು ಬದಲಾವಣೆ ಮಾಡುವ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಸಂಬಂಧ ತೆಗೆದುಕೊಂಡು ಹೋಗಿದ್ದ ಲೀಸ್ಟ್ ಗೆ ಅನುಮೋದನೆ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇದನ್ನು ನೋಡಿದರೆ ಯಡಿಯೂರಪ್ಪ ಬದಲಾವಣೆ ಖಚಿತ ಎಂಬುದು ತಿಳಿಯುತ್ತದೆ ಎಂದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿಲ್ಲ. ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರೂ ಅಮಿತ್ ಶಾ ಅದಕ್ಕೆ ಕಿಮ್ಮತ್ತು ಕೊಟ್ಟಿಲ್ಲ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅಪಮಾನ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ನಮ್ಮ ನಾಯಕರು. ಅವರು ಕೇವಲ ಬಿಜೆಪಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ನಮಗೂ ಮುಖ್ಯಮಂತ್ರಿಗಳು. ಒಂದು ರಾಜ್ಯವನ್ನು ಪ್ರತಿನಿಧಿಸುವವರು. ಅಂಥವರಿಗೆ ಭೇಟಿಗೆ ಅವಕಾಶ ಕಲ್ಪಿಸದೆ ಗೃಹ ಸಚಿವರು ಅವಮಾನ ಮಾಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.

ನಾನು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ. ಮರುದಿನ ಬೆಳಗ್ಗೆ ಪತ್ರಿಕೆಯೊಂದರಲ್ಲಿ ಪರಮೇಶ್ವರ್ ವಿರುದ್ಧ ರಾಜಣ್ಣ ದೂರು ಹೇಳಿದ್ದಾರೆ ಎಂದು ವರದಿ ಬಂದಿತ್ತು. ನಾನು ಪರಮೇಶ್ವರ್ ವಿರುದ್ಧ ದೂರನ್ನೂ ಹೇಳಿಲ್ಲ. ಆ ಬಗ್ಗೆ ಮಾತನಾಡಿಯೇ ಇಲ್ಲ. ಆ ಪತ್ರಿಕೆಯಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲಾ ನಾಯಕರು ಶಿರಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಪರಮೇಶ್ವರ್ ಕೂಡ ಸಾಕಷ್ಟು ಶ್ರಮ ಹಾಕಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಜನರಿಗೆ ತಪ್ಪು ಸಂದೇಶ, ಸುಳ್ಳು ಮಾಹಿತಿ ಹೋಗಬಾರದು. ವಿಶ್ವಾಸಕ್ಕೆ ಧಕ್ಕೆ ಬರುವಂತಹ ವರದಿ ಮಾಡಬಾರದು. ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ತಿಳಿಸಿದರು.

ಶಿರಾ ಉಪಚುನಾವಣೆಯಲ್ಲಿ ಸುಳ್ಳು ಭರವಸೆಯಿಂದಲೇ ಬಿಜೆಪಿ ಗೆಲುವು ಸಾಧಿಸಿತು. ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುತ್ತೇವೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮ ಸ್ಥಾಪಿಸಿ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟರು. ಮದ್ದಕ್ಕನಹಳ್ಳಿಯಲ್ಲಿ ಭೋವಿ ಸಮುದಾಯ ಎದುರಿಸುತ್ತಿರುವ ಸಮಸ್ಯೆ ಯನ್ನು ಬೆಳಗಾಗುವುದರೊಳಗೆ ಬಗೆಹರಿಸುತ್ತೇವೆ ಎಂದು ಕೀಳುಮಟ್ಟದ ಭರವಸೆ ನೀಡಿದರು ಎಂದು ಕಿಡಿಕಾರಿದರು.

ಎಡಗೈ ಸಮುದಾಯದವರಿಗೆ ಒಳಮೀಸಲಾತಿ ಕಲ್ಪಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ವರದಿಯನ್ನು ಯಾಥಾವತ್ತಾಗಿ ಜಾರಿಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ನೀಡಿದರು. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖಂಡರು ಏನೆಲ್ಲ ಭರವಸೆ ನೀಡಿದ್ದಾರೆ ಅವೆಲ್ಲವನ್ನೂ ಕಾಲಮಿತಿಯೊಳಗೆ ಈಡೇಸಿಸಬೇಕು. ಜನರಿಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ಸುಳ್ಳು ಹೇಳಿದಂತೆ ಆಗುತ್ತದೆ ಎಂದರು.


ಇದನ್ನೂ ಓದಿ:

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರು ಹುದ್ದೆಯಿಂದ ವಜಾ!

0
ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಹುದ್ದೆಯಿಂದ ವಜಾಗೊಳಿಸಿದ್ದಾರೆ. ಈ ಹಿಂದೆ ಮಹಿಳಾ ಆಯೋಗದ ಅಧ್ಯಕ್ಷೆಯಾಗಿದ್ದ ಎಎಪಿಯ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಅವರು...