Homeಕರ್ನಾಟಕಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

ಸೀಜ್ ಮಾಡಿದ ಹಣ ಬಿಜೆಪಿಗೆ ಹಿಂತಿರುಗಿಸಿದ ಅಧಿಕಾರಿಗಳು; ತನಿಖೆಗೆ ಆಗ್ರಹಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಚುನಾವಣಾ ಆಯೋಗ ವಶಕ್ಕೆ ಪಡೆದಿದ್ದ ಸುಮಾರು ₹2 ಕೋಟಿ ಹಣವನ್ನು, ಸೀಜ್ ಮಾಡಿದ ಕೆಲವೇ ಗಂಟೆಗಳಲ್ಲಿ ಐಟಿ ಅಧಿಕಾರಿಗಳು ಬಿಜೆಪಿಗೆ ವಾಪಸ್ ನೀಡಿದ್ದು, ‘ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

“ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ, ಮಾರ್ಚ್‌ 27 ರಂದೇ ₹5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ’ ಎಂದು ಅವರು ಅಸಮಾಧಾನ ಹೊರಹಾಕಿದರು.

‘ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ, ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ’ ಎಂದರು.

‘ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ₹2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

“ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು.

ದೇವೇಗೌಡರಿಗೆ ತಿರುಗೇಟು

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ‘ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ’ ನೀಡಿದ್ದಾರೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ’ ಎಂದು ತಿರುಗೇಟು ನೀಡಿದರು.

‘ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ₹500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಮಾಜಿ ಪ್ರಧಾನಿಗೆ ಸವಾಲು ಹಾಕಿದರು.

ಇದನ್ನೂ ಓದಿ; ‘ಜನರಲ್ ಬೋಗಿ’ ಕಡಿಮೆ ಮಾಡಿ, ‘ಗಣ್ಯರ ರೈಲು’ಗಳನ್ನು ಪ್ರಚಾರ ಮಾಡುತ್ತಿರುವ ಮೋದಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...