Homeಅಂತರಾಷ್ಟ್ರೀಯಭಾರತದಲ್ಲಿ ರಾಯಿಟರ್ಸ್ ಅಧಿಕೃತ ಎಕ್ಸ್‌ ಖಾತೆಗೆ ನಿರ್ಬಂಧ

ಭಾರತದಲ್ಲಿ ರಾಯಿಟರ್ಸ್ ಅಧಿಕೃತ ಎಕ್ಸ್‌ ಖಾತೆಗೆ ನಿರ್ಬಂಧ

- Advertisement -
- Advertisement -

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಅಧಿಕೃತ ಎಕ್ಸ್‌ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಕಾನೂನಾತ್ಮಕ ಸಮಸ್ಯೆಗಳು ಇದಕ್ಕೆ ಕಾರಣ ಎಂದು ವರದಿಯಾಗಿದೆ. ಆದರೆ, ರಾಯಿಟರ್ಸ್ ಈ ಬಗ್ಗೆ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

‘ರಾಯಿಟರ್ಸ್ ಸುದ್ದಿ ಸಂಸ್ಥೆ’ ರಾಯಿಟರ್ಸ್ ಥಾಮ್ಸನ್‌ ಸಮೂಹದ ಮಾಧ್ಯಮ ವಿಭಾಗವಾಗಿದೆ. ಕಂಪನಿಯು ಭಾರತದ 200ಕ್ಕೂ ಹೆಚ್ಚು ಸ್ಥಳಗಳಲ್ಲಿ 2,600 ಪತ್ರಕರ್ತರನ್ನು ನೇಮಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಶನಿವಾರ ರಾತ್ರಿ 11:40ರ ಸುಮಾರಿಗೆ ರಾಯಿಟರ್ಸ್ ವರ್ಲ್ಡ್‌ನ ಎಕ್ಸ್‌ ಖಾತೆಯನ್ನು ಭಾರತದಲ್ಲಿ ತಡೆ ಹಿಡಿಯಲಾಗಿದೆ.

“ಶನಿವಾರ ರಾತ್ರಿ 11:30ರಿಂದ ರಾಯಿಟರ್ಸ್‌ನ ಮುಖ್ಯ ಎಕ್ಸ್‌ ಹ್ಯಾಂಡಲ್ ಸ್ಥಗಿತಗೊಂಡಿದೆ. ‘ಕಾನೂನಾತ್ಮಕ ಸಮಸ್ಯೆ ಹಿನ್ನೆಲೆ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ” ಎಂದು ವರದಿಗಳು ಹೇಳಿವೆ. ಏನದು ಕಾನೂನು ಸಮಸ್ಯೆ ಎಂಬುವುದು ತಿಳಿಸಿಲ್ಲ.

ಭಾರತದಲ್ಲಿ ರಾಯಿಟರ್ಸ್‌ನ ಮುಖ್ಯ ಖಾತೆಯನ್ನು ನಿರ್ಬಂಧಿಸಲಾಗಿದ್ದರೂ, ರಾಯಿಟರ್ಸ್ ಟೆಕ್ ನ್ಯೂಸ್, ರಾಯಿಟರ್ಸ್ ಫ್ಯಾಕ್ಟ್ ಚೆಕ್, ರಾಯಿಟರ್ಸ್ ಪಿಕ್ಚರ್ಸ್, ರಾಯಿಟರ್ಸ್ ಏಷ್ಯಾ ಮತ್ತು ರಾಯಿಟರ್ಸ್ ಚೀನಾ ಸೇರಿದಂತೆ ಹಲವಾರು ಇತರ ಖಾತೆಗಳು ಇನ್ನೂ ಕಾರ್ಯ ನಿರ್ವಹಿಸುತ್ತಿವೆ.

“ಅಧಿಕೃತ ಘಟಕದಿಂದ (ಕೋರ್ಟ್, ಸರ್ಕಾರ) ಮಾನ್ಯ ಆದೇಶ ಅಥವಾ ಮನವಿ ಬಂದರೆ ನಾವು ಆ ನಿರ್ದಿಷ್ಟ ಪ್ರದೇಶದಲ್ಲಿ ಕೆಲ ಪೋಸ್ಟ್‌ ಮತ್ತು ವಿಷಯಗಳನ್ನು ತಡೆ ಹಿಡಿಯಬೇಕಾಗುತ್ತದೆ. ಇದು ನಮ್ಮ ಸೇವೆಗಳನ್ನು ಎಲ್ಲೆಡೆ ಜನರಿಗೆ ಲಭ್ಯವಾಗುವಂತೆ ಮಾಡುವ ನಮ್ಮ ನಿರಂತರ ಪ್ರಯತ್ನದ ಒಂದು ಭಾಗ ಎಂದು ಎಕ್ಸ್ ಮಾರ್ಗಸೂಚಿಗಳು ಹೇಳುತ್ತವೆ.

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...