Homeಮುಖಪುಟತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ :...

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ (ಎಸ್‌ಸಿ) ಉಪ-ವರ್ಗೀಕರಣಕ್ಕೆ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪುನರುಚ್ಚರಿಸಿದ್ದಾರೆ.

ಶಾಸಕರು, ಸಂಸದರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮೇಯರ್‌ಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗ್ರೂಪ್-1 ಸರ್ಕಾರಿ ಸೇವೆ ಮತ್ತು ಅಂತಹುದೇ ಹುದ್ದೆಗಳಲ್ಲಿರುವವರನ್ನು ಮೀಸಲಾತಿಯ ಪ್ರಯೋಜನಗಳಿಂದ ಹೊರಗಿಡಬೇಕೆಂದು ಸೂಚಿಸುವ ಮೀಸಲಾತಿಯೊಳಗೆ ಕೆನೆಪದರವನ್ನು ಪರಿಚಯಿಸುವ ಏಕಸದಸ್ಯ ನ್ಯಾಯಾಂಗ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ಆಯೋಗ ಸಲ್ಲಿಸಿದ ವರದಿಯನ್ನು ಮಂಡಿಸಿದ ರೇವಂತ್ ರೆಡ್ಡಿ, ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳಲ್ಲಿ 59 ಉಪಜಾತಿಗಳನ್ನು ಸಮಿತಿ ಗುರುತಿಸಿದೆ ಮತ್ತು ಅಸ್ತಿತ್ವದಲ್ಲಿರುವ ಶೇಖಡ 15 ಮೀಸಲಾತಿಯೊಳಗೆ ಅವುಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಲು ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.

ಆಯೋಗದ ಶಿಫಾರಸ್ಸಿನಂತೆ ಶೇಖಡ 3.288 ಜನ ಸಂಖ್ಯೆಯ ಪಾಲನ್ನು ಹೊಂದಿರುವ 15 ಉಪ ಜಾತಿಗಳನ್ನು ಒಳಗೊಂಡಿರುವ ಗುಂಪು 1 ಶೇಖಡ 1 ಮೀಸಲಾತಿ ಪಡೆಯುತ್ತದೆ. ಶೇಖಡ 62.748 ಜನಸಂಖ್ಯೆಯ ಪಾಲು ಹೊಂದಿರುವ 18 ಉಪಜಾತಿಗಳ ಗುಂಪು 2 ಶೇಖಡ 9 ಮೀಸಲಾತಿ ಪಡೆಯುತ್ತದೆ ಮತ್ತು ಶೇ 33.963 ಜನ ಸಂಖ್ಯೆಯ ಪಾಲನ್ನು ಹೊಂದಿರುವ 26 ಉಪಜಾತಿಗಳನ್ನು ಒಳಗೊಂಡಿರುವ ಗುಂಪು 3 ಶೇಖಡ 5 ಮೀಸಲಾತಿ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಮಂಡಿಸಿರುವ ಕ್ಷಣವನ್ನು ಇದನ್ನು ಐತಿಹಾಸಿಕ ಎಂದು ಬಣ್ಣಿಸಿದ ರೇವಂತ್ ರೆಡ್ಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಬೇಕು ಎನ್ನುವುದು ಮೂರು ದಶಕಗಳ ಬೇಡಿಕೆ ಎಂದಿದ್ದಾರೆ. ತಮ್ಮ ಸರ್ಕಾರದ ಕ್ರಮವನ್ನು ಕೊಂಡಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ದೃಢ ನಿಶ್ಚಯ ಹೊಂದಿದೆ ಎಂದು ರೇವಂತ್ ರೆಡ್ಡಿ ಒತ್ತಿ ಹೇಳಿದರು. ಅಭಿವೃದ್ದಿ ಯೋಜನೆಗಳು ಅತ್ಯಂತ ತಳಮಟ್ಟದಲ್ಲಿರುವವರಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದೃಷ್ಟಿಕೋನದಲ್ಲಿ ನಾವು ಬದ್ಧತೆ ಮೆರೆದಿದ್ದೇವೆ ಎಂದು ಹೇಳಿದ್ದಾರೆ.

ಒಂದು ಸಮಯದಲ್ಲಿ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರೆ ನಾನು ಉಚ್ಚಾಟನೆ ಆಗುವ ಸಾಧ್ಯತೆ ಇತ್ತು. ಆದರೆ, ಇಂದು ಸದನದ ನಾಯಕನಾಗಿ ನಾನು ಈ ವರದಿಯನ್ನು ಮಂಡಿಸಲು ಹೆಮ್ಮೆ ಪಡುತ್ತೇನೆ. ಈ ನಿರ್ಣಾಯಕ ಹೆಜ್ಜೆಯನ್ನು ಬೆಂಬಲಿಸುವಂತೆ ನಾನು ಎಲ್ಲಾ ಸದಸ್ಯರನ್ನು ಕೋರುತ್ತೇನೆ ಎಂದು ವರದಿ ಮಂಡನೆ ಸಂದರ್ಭ ರೇವಂತ್ ರೆಡ್ಡಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದ ಬಳಿಕ ಸದನದಲ್ಲಿ ಗದ್ದಲ ಉಂಟಾಗಿತ್ತು. ಪ್ರತಿಪಕ್ಷ ಬಿಆರ್‌ಎಸ್‌ನ ಸದಸ್ಯರು ಹಲವು ದೋಷಗಳು ಮತ್ತು ವ್ಯತ್ಯಾಸಗಳನ್ನು ಉಲ್ಲೇಖಿಸಿ ವರದಿಯನ್ನು ವಿರೋಧಿಸಿದ್ದಾರೆ.

ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ ಪ್ರತಿಪಕ್ಷ ಶಾಸಕರು, ಈ ವಿಷಯದ ಬಗ್ಗೆ ನ್ಯಾಯಯುತ ಚರ್ಚೆಗೆ ಒತ್ತಾಯಿಸಿದ್ದಾರೆ ಮತ್ತು ಪ್ರತಿಭಟಿಸಿ ಸದನದಿಂದ ಹೊರ ನಡೆದಿದ್ದಾರೆ.

ಮಾದಿಗ ಸಮುದಾಯದ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು. ಒಳ ಮೀಸಲಾತಿ ಜಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...