Homeಮುಖಪುಟತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿಸಲು ರೇವಂತ್ ರೆಡ್ಡಿ- ಓವೈಸಿ ಯೋಜಿಸುತ್ತಿದ್ದಾರೆ: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್

ತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿಸಲು ರೇವಂತ್ ರೆಡ್ಡಿ- ಓವೈಸಿ ಯೋಜಿಸುತ್ತಿದ್ದಾರೆ: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್

- Advertisement -
- Advertisement -

ಬಿಜೆಪಿ ನಾಯಕ ಮತ್ತು ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ದ್ವೇಷ ಭಾಷಣ ಮಾಡಿದ್ದು, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೆಲಂಗಾಣವನ್ನು ಮುಸ್ಲಿಂ ರಾಜ್ಯವನ್ನಾಗಿ ಮಾಡಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

2047 ರ ವೇಳೆಗೆ ಭಾರತವನ್ನು ಮುಸ್ಲಿಂ ದೇಶವನ್ನಾಗಿ ಪರಿವರ್ತಿಸುವ ಓವೈಸಿ ಅವರ ಕನಸಿನ ಬಗ್ಗೆ ಹಿಂದೂಗಳು ಜಾಗರೂಕರಾಗಿರಬೇಕು ಎಂದು ಬೋರಬಂಡಾದಲ್ಲಿ ಗುರುವಾರ ನಡೆದ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಎನ್. ರಾಮಚಂದರ್ ರಾವ್ ಅವರೊಂದಿಗೆ ಸಂಜಯ್, ಪಕ್ಷದ ಜುಬಿಲಿ ಹಿಲ್ಸ್ ಉಪಚುನಾವಣಾ ಅಭ್ಯರ್ಥಿ ಲಂಕಾಲಾ ದೀಪಕ್ ರೆಡ್ಡಿ ಪರ ಪ್ರಚಾರ ನಡೆಸಿದರು.

ಉಪಚುನಾವಣಾ ಪ್ರಚಾರದ ಸಮಯದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕರು ತಲೆಗೆ ಟೋಪಿ ಧರಿಸಿದ್ದಕ್ಕಾಗಿ ಗುರಿಯಾಗಿಸಿಕೊಂಡ ಸಂಜಯ್, ಅಸಾದುದ್ದೀನ್ ಓವೈಸಿ ಅವರನ್ನು ಭಾಗ್ಯ ಲಕ್ಷ್ಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಮಾಡಿ ಎಂದು ಸಿಎಂಗೆ ಸವಾಲು ಹಾಕಿದರು.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಜಯ್, ಕಾಂಗ್ರೆಸ್ ಅಭ್ಯರ್ಥಿ ನವೀನ್ ಯಾದವ್ ಅವರನ್ನು ‘ನವೀನ್ ಖಾನ್’ ಮತ್ತು ಬಿಆರ್‌ಎಸ್ ಅಭ್ಯರ್ಥಿ ಮಗಂತಿ ಸುನೀತಾ ಅವರನ್ನು ‘ಸುನೀತಾ ಬೇಗಂ’ ಎಂದು ಉಲ್ಲೇಖಿಸುವ ಮೂಲಕ ವಿವಾದವನ್ನು ಸೃಷ್ಟಿಸಿದರು.

“ಈ ಅಭ್ಯರ್ಥಿಗಳು ಗೆದ್ದರೆ, ಎಲ್ಲ ಸಮುದಾಯ ಭವನಗಳು ಮಸೀದಿಗಳಾಗಿ ಬದಲಾಗುತ್ತವೆ. ಬೀದಿಗಳಲ್ಲಿ ರಕ್ತ ಹರಿಯುತ್ತದೆ. ವಿನಾಯಕ ಚೌತಿ ಮತ್ತು ದಸರಾದಂತಹ ಹಬ್ಬಗಳನ್ನು ಇನ್ನು ಮುಂದೆ ಆಚರಿಸಲಾಗುವುದಿಲ್ಲ” ಎಂದು ಹೇಳಿದರು.

ಹಿಂದೂ ಮತದಾರರು ಬಿಜೆಪಿಗೆ ಬೆಂಬಲಿಸುವಂತೆ ಒತ್ತಾಯಿಸಿದ ಅವರು, ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಹತ್ತು ವರ್ಷಗಳ ಕಾಲ ಜನರಿಗೆ ಕಿರುಕುಳ ನೀಡುತ್ತಿದ್ದಾರೆ. ಬಿಆರ್‌ಎಸ್ ಅನ್ನು ತೋಟದ ಮನೆಗೆ ಸೀಮಿತಗೊಳಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಬಿಆರ್‌ಎಸ್ ಪ್ರಸಾರ ಮಾಡುವ ‘ನಕಲಿ ಸಮೀಕ್ಷೆ ವರದಿಗಳನ್ನು’ ನಂಬಬೇಡಿ. ಆ ಪಕ್ಷಗಳಿಂದ ಹಣ ತೆಗೆದುಕೊಂಡು ಬಿಜೆಪಿಗೆ ಮತ ಹಾಕಿ ಎಂದು ಒತ್ತಾಯಿಸಿದರು.

ಕೇರಳ| ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮುಸ್ಲಿಂ ಸಂಪರ್ಕ ಕಾರ್ಯಕ್ರಮ ಪ್ರಾರಂಭಿಸಲಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...