Homeಮುಖಪುಟತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

- Advertisement -
- Advertisement -

ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ ಹಾಗೂ ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಇಂದು (ಡಿ.7) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ (ಎಲ್‌ಬಿ) ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು.

ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಇನ್ನುಳಿದಂತೆ ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ್ ರಾಜನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನಸೂಯ, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ ಮತ್ತು ಜೂಪಲ್ಲಿ ಕೃಷ್ಣ ರಾವ್ ಸಂಪುಟ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ತೆಲಂಗಾಣದ ಎರಡನೇ ಸಿಎಂ ರೇವಂತ್ ರೆಡ್ಡಿ

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕೆಸಿಆರ್‌ ಬಳಿಕ ತೆಲಂಗಾಣದ ಎರಡನೇ ಮತ್ತು ಕಾಂಗ್ರೆಸ್‌ನ ಮೊದಲ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪದಗ್ರಹಣ ಮಾಡಿದ್ದಾರೆ.

ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಕಾಲಿಟ್ಟ ರೇವಂತ್ ರೆಡ್ಡಿ, ಆರಂಭದಲ್ಲಿ ಬಿಜೆಪಿ-ಸಂಘ ಪರಿವಾರದ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನ ಯುವ ನಾಯಕರಾಗಿದ್ದರು. ಪ್ರಸ್ತುತ ಸುಮಾರು 20 ವರ್ಷಗಳ ರಾಜಕೀಯ ಜೀವನ ಪೂರೈಸಿರುವ ರೇವಂತ್ ರೆಡ್ಡಿ ತೆಲಂಗಾಣದ ಪ್ರಮಖ ಪಕ್ಷಗಳಾದ ಬಿಆರ್‌ಎಸ್‌, ಟಿಡಿಪಿಯಲ್ಲಿ ಗುರುತಿಸಿಕೊಂಡಿದ್ದರು.

2017ರಲ್ಲಿ ಕಾಂಗ್ರೆಸ್‌ ಸೇರಿದ ರೇವಂತ್ ರೆಡ್ಡಿ, ಪಕ್ಷಕ್ಕಾಗಿ ದುಡಿಯುವ ಮೂಲಕ ಹೈಕಮಾಂಡ್ ನಾಯಕರ ಗಮನ ಸೆಳೆದರು. 2021ರಲ್ಲಿ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತ್ತು. ಆ ಬಳಿಕ ಪಕ್ಷ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರೇವಂತ್ ರೆಡ್ಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ದಾಖಲಿಸುವಂತೆ ಮಾಡಿದ್ದಾರೆ. ಅಲ್ಲದೆ, ತೆಲಂಗಾಣದ ರಾಜ್ಯದ ಮೊದಲ ಕಾಂಗ್ರೆಸ್ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟಗೊಂಡಿದ್ದು, 119 ವಿಧಾನಸಭಾ ಸ್ಥಾನಗಳ ಪೈಕಿ ಅಖಿಲ ಭಾರತೀಯ ಕಾಂಗ್ರೆಸ್‌ ಪಕ್ಷ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಅಣಿಯಾಗಿದೆ. ಕಳೆದ 10 ವರ್ಷಗಳ ಕಾಲ ತೆಲುಗು ರಾಜ್ಯವನ್ನು ಆಳಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷ 39 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರ ಕಳೆದುಕೊಂಡಿದೆ. 8 ಸ್ಥಾನಗಳನ್ನು ಪಡೆದ ಬಿಜೆಪಿ ಮೂರನೇ ಪಕ್ಷವಾಗಿ ಹೊರ ಹೊಮ್ಮಿದ್ದು, ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 7 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಇತರರು 1 ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ‘ಎಮ್ಮೆ ಕಾಯುವ’ ಹುಡುಗಿ ಏನಾದ್ರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...